Featured

ಉಡುಪಿ: ಸಂಜೀವಿನಿ ಸ್ವ-ಸಹಾಯ ಸಂಘಗಳಿಗೆ 51 ಕೋಟಿ ರೂ. ಶೂನ್ಯ ಬಡ್ಡಿ ಸಾಲ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂಜೀವಿನಿ ಸ್ವ-ಸಹಾಯ ಸಂಘಗಳಿಗೆ 51 ಕೋಟಿ ರೂ. ಶೂನ್ಯ ಬಡ್ಡಿ ಸಾಲ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಅಂದಾಜು 8,454 ಸ್ವ-ಸಹಾಯ ಸಂಘಗಳಿದ್ದು, ಇವುಗಳಲ್ಲಿ ಸುಮಾರು 85,000 ಸದಸ್ಯ ರನ್ನು ಸಂಜೀವಿನಿ ಸಂಘಗಳು ಹೊಂದಿವೆ. ಪಂಚಾಯತ್ ಮಟ್ಟದ ಸಂಜೀವಿನಿ ಸ್ವ-ಸಹಾಯ ಸಂಘಗಳಿಗೆ ಆರ್ಥಿಕ ವ್ಯವಹಾರ ಮಾಡಲು ಕೇಂದ್ರ ಸರಕಾರ ಪ್ರತಿ ಸಂಘಕ್ಕೆ 1.50 ಲಕ್ಷ ರೂ.ನಂತೆ 51 ಕೋಟಿ ರೂ. ಶೂನ್ಯ ಬಡ್ಡಿಯ ಸಾಲದ ನೆರವು ನೀಡುತ್ತಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಸಂಜೀವಿನಿ ಸ್ವ-ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ನಡೆದ ಬ್ಯಾಂಕರ್ಸ್ ಕಾರ್ಯಾಗಾರ ಮತ್ತು ಮಾಹಿತಿ ಶಿಬಿರ ವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ 2 ಉತ್ಪಾದನಾ ಕಂಪೆನಿಗಳು ಸ್ಥಾಪನೆಯಾಗಿದ್ದು, ಕಾರ್ಯ ನಿರ್ವಹಿಸುತ್ತಿವೆ. ಕಳೆದ 3 ವರ್ಷಗಳಲ್ಲಿ ಸಂಜೀವಿನಿ ಸ್ವ-ಸಹಾಯ ಸಂಘದ ಆರ್ಥಿಕ ವಹಿವಾಟು 91 ಕೋಟಿ ರೂ.ಮೀರಿದೆ. ಸಂಜೀವಿನಿ ಸಂಘಗಳು 7 ಕಡೆ ಉತ್ಪಾದನಾ ಮಾರಾಟ ಕೇಂದ್ರಗಳನ್ನು ಸ್ಥಾಪಿಸಿವೆ. ಪ್ರತಿ ಪಂಚಾಯತ್ ನಲ್ಲೂ ಕೃಷಿ ಸಖಿ, ಪಶು ಸಖಿ ಮತ್ತು ಎಂಬಿಕೆ, ಎಲ್‌ಸಿಆರ್‌ಪಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಪಂಚಾಯತ್ ಮಟ್ಟದ ಆಡಳಿತ ಸಬಲೀಕರಣಕ್ಕೆ ಕಾರಣವಾಗಿವೆ ಎಂದವರು ಹೇಳಿದರು.

ಸುಮಾರು 85,000 ಸದಸ್ಯರ ಪೈಕಿ, ಪ್ರತಿ ಸದಸ್ಯರು ಕೇಂದ್ರ ಸರ್ಕಾರದ ಯೋಜನೆಯ ಮೂಲಕ ಸರಳವಾದ ವಿಮಾ ಸೌಲಭ್ಯ ಹೊಂದಬೇಕಿದ್ದು, ರಾಷ್ಟ್ರೀಕೃತ ಬ್ಯಾಂಕುಗಳು, ಇತರೆಲ್ಲಾ ಆರ್ಥಿಕ ಸಂಸ್ಥೆಗಳು ಸ್ವಸಹಾಯ ಸಂಘಗಳ ನೆರವಿಗೆ ಬರಬೇಕಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಬ್ಯಾಂಕ್ ಅಧಿಕಾರಿಗಳಿಗೆ ಮನವಿ ಮಾಡಿದರು.

ಸ್ವ-ಸಹಾಯ ಸಂಘಗಳು ಮುಂದಿನ ದಿನಗಳಲ್ಲಿ ಪ್ರಬಲ ಗ್ರಾಮೀಣ ಆರ್ಥಿಕ ಸಂಸ್ಥೆಗಳಾಗಿ ಮಾರ್ಪಡುವ ಅವಕಾಶವಿದ್ದು, ಇವುಗಳ ಏಳಿಗೆಗೆ ಬ್ಯಾಂಕ್ ಅಧಿಕಾರಿಗಳು ಸಹಕಾರ ನೀಡಬೇಕೆಂದು ಕೋಟ ಆಗ್ರಹಿಸಿದರು.

ಕಾರ್ಯಾಗಾರದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್, ಕೌಶಲ್ಯಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್, ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್, ಎನ್‌ಆರ್‌ಎಲ್‌ಎಮ್ ಯೋಜನೆಯ ಜಿಲ್ಲಾ ಸಮನ್ವಯಾಧಿಕಾರಿ ನವ್ಯ, ಎನ್‌ಆರ್‌ಎಲ್‌ಎಂ ಜಿಲ್ಲಾ ವ್ಯವಸ್ಥಾಪಕ ಅವಿನಾಶ್ ಉಪಸ್ಥಿತರಿದ್ದರು.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago