Featured

ಉಡುಪಿ: ಸಂತೆಕಟ್ಟೆಯಲ್ಲಿ 21.26 ಕೋಟಿ ವೆಚ್ಚದಲ್ಲಿ ಓವರ್ ಪಾಸ್ ನಿರ್ಮಾಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ – Vishwanews24

ಉಡುಪಿ: ಸಂತೆಕಟ್ಟೆಯಲ್ಲಿ 21.26 ಕೋಟಿ ವೆಚ್ಚದಲ್ಲಿ ಓವರ್ ಪಾಸ್ ನಿರ್ಮಾಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.

ಉಡುಪಿ,: ಉಡುಪಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆಯಲ್ಲಿ ವಾಹನ ದಟ್ಟಣೆ ಮತ್ತು ಅಪಘಾತಗಳನ್ನು ತಪ್ಪಿಸಲು ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ 21.26 ಕೋಟಿ ವೆಚ್ಚದಲ್ಲಿ ಓವರ್ ಪಾಸ್ ನಿರ್ಮಾಣ ಮಾಡಲಾಗುತ್ತಿದ್ದು,ಅತ್ಯಂತ ತ್ವರಿತಗತಿಯಲ್ಲಿ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಸೂಚನೆ ನೀಡಿದರು.

ಅವರು ನಗರದ ಸಂತೆಕಟ್ಟೆ ಜಂಕ್ಷನ್ ನಲ್ಲಿ ಓವರ್ ಪಾಸ್ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಂತೆಕಟ್ಟೆ ಜಂಕ್ಷನ್ ಅತ್ಯಂತ ವಾಹನ ದಟ್ಟಣೆಯಿಂದ ಕೂಡಿದ್ದು ಪ್ರತಿ ದಿನ 4500 ಕ್ಕೂ ಅಧಿಕ ವಾಹನಗಳು ಇಲ್ಲಿ ಸಂಚರಿಸುತ್ತಿದ್ದು, ಇದು ಪ್ರಮುಖ ಬ್ಲಾಕ್ ಸ್ಪಾಟ್ ಆಗಿ ಗುರುತಿಸಲಗಿದೆ. ಈ ಭಾಗದಲ್ಲಿ ಸಾರ್ವಜನಿಕರು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಓವರ್ ಪಾಸ್ ನಿರ್ಮಾಣ ಅತೀ ಅವಶ್ಯಕವಾಗಿದ್ದು, ಹಲವು ವರ್ಷಗಳಿಂದ ಇದು ಸಾರ್ವಜನಿಕರ ಪ್ರಮುಖ ಬೇಡಿಕೆಯೂ ಆಗಿದೆ. ಈ ಕಾಮಗಾರಿಯನ್ನು ದಿನದಲ್ಲಿ 3 ಪಾಳಿಯಂತೆ ಕಾರ್ಯ ನಿರ್ವಹಿಸಿ ತ್ವರಿತಗತಿಯಲ್ಲಿ ಮುಕ್ತಾಯಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿಯ ಅಂಬಲಪಾಡಿಯಲ್ಲಿ ಸಹ 22 ಕೋಟಿ ವೆಚ್ಚದಲ್ಲಿ ಓವರ್ ಪಾಸ್ ನಿರ್ಮಾಣ ಕೈಗೊಳ್ಳಲಾಗುವುದು ಎಂದ ಸಚಿವರು, ಸಂತೆಕಟ್ಟೆಯಲ್ಲಿ ಕಾಮಗಾರಿ ಮುಕ್ತಾಯವಾಗುವವರೆಗೂ ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳಿಗೆ ತಿಳಿಸಿದರು

.ಕಾರ್ಯಕ್ರಮದಲ್ಲಿ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ.ರಘುಪತಿ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಾಭಿವೃಧಿ ಪ್ರಾಧಿಕಾರಿದ ಅಧ್ಯಕ್ಷ ಮನೋಹರ್ ಕಲ್ಮಾಡಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ, ನಗರಸಭಾ ಉಪಾಧ್ಯಕ್ಷೆ ಲಕ್ಷ್ಮಿ ಮಂಜುನಾಥ್, ಸದಸ್ಯೆ ಮಂಜುಳಾ, ದಿನೇಶ್ ಪೈ ಹಾಗೂ ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

4 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

5 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

5 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

5 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

6 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

6 hours ago