ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿ ಸಂಪೂರ್ಣ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಕಂಡುಕೊಳ್ಳುತ್ತೇವೆ. ರಾಜ್ಯ ಸರ್ಕಾರ ಈ ಕೇಸ್‍ನಲ್ಲಿ ಯಾವುದೇ ಹಸ್ತಕ್ಷೇಪ ಮಾಡಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಅವರು 40 ಪರ್ಸೆಂಟ್ ಆರೋಪ ಮಾಡಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್‍ನಲ್ಲಿ ಶವ ಪತ್ತೆ ಆಗಿದೆ. ಈಗಾಗಲೇ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಎಲ್ಲಾ ರೀತಿಯ ತನಿಖೆ ಆಗುತ್ತದೆ. ಇದರ ಪ್ರಾಥಮಿಕ ವರದಿ ಏನು ಬರುತ್ತದೆ ಎನ್ನುವುದರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಈ ಸಾವಿನ ಹಿನ್ನೆಲೆ ಸಂಪೂರ್ಣವಾಗಿ ತನಿಖೆ ನಡೆಯುತ್ತದೆ ಎಂದು ಹೇಳಿದರು.
ಪೊಲೀಸ್ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಹೇಳಿದ್ದೇವೆ. ಸಂತೋಷ್ ಸಾವಿನ ಕುರಿತು ಕಾನೂನು ಬದ್ಧವಾಗಿ ಆಗಬೇಕು. ಪಾರದರ್ಶಕ ತನಿಖೆ ಆಗುತ್ತದೆ. ಗುತ್ತಿಗೆದಾರ ಸಂತೋಷ್ ಮಾಡಿದ್ದ ಆರೋಪವನ್ನು ಈಶ್ವರಪ್ಪ ಅವರು ಅಲ್ಲಗಳೆದಿದ್ದಾರೆ. ಅಷ್ಟೇ ಅಲ್ಲದೇ ಕೋಟ್‍ನಲ್ಲಿ ಕೇಸ್ ಹಾಕಿದ್ದಾರೆ. ಸಂತೋಷ್‍ಗೆ ನೋಟಿಸ್ ಹೋಗಿದೆ. ಇದೆಲ್ಲವನ್ನು ತನಿಖೆ ಸಂದರ್ಭದಲ್ಲಿ ಒಳಪಡುತ್ತದೆ. ಯಾವ ಸಂದರ್ಭದಲ್ಲಿ ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವುದು ತನಿಖೆಯಲ್ಲಿ ತಿಳಿಯುತ್ತದೆ ಎಂದು ಮಾಹಿತಿ ನೀಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…