ಉಡುಪಿ : ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಸಂವಿಧಾನದ ಚೌಕಟ್ಟಿನಲ್ಲಿ ಈ ತೀರ್ಪು ನೀಡಲಾಗಿದೆ. ಸಂವಿಧಾನದ ಎದುರು ಯಾವುದೇ ಧರ್ಮ ಅಲ್ಲ ಎಂಬುದುನ್ನು ತೀರ್ಪು ಸಾಬೀತು ಪಡಿಸಿದೆ. ಶಿಕ್ಷಣ, ಶಿಕ್ಷಣದ ವ್ಯವಸ್ಥೆ ಶಿಕ್ಷಣದ ಮೌಲ್ಯವನ್ನು ಎತ್ತಿಹಿಡಿಯುವ ರೀತಿಯಲ್ಲಿ ಹೈಕೋರ್ಟ್ ತೀರ್ಪು ನೀಡಿದೆ ಎಂದು ಹಿಜಾಬ್ ವಿಚಾರವಾಗಿ ಹೈ ಕೋರ್ಟ್ ನೀಡಿದ ತೀರ್ಪನ್ನು ಸ್ವಾಗತಿಸುವುದಾಗಿ ಎಂದು ಉಡುಪಿಯ ಬಾಲಕೀಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಯಶ್ವಾಲ್ ಸುವರ್ಣ ಹೇಳಿದ್ದಾರೆ.
ಅವರು ಇಂದು ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿ, ಹಿಜಾಬ್ ವಿಚಾರದಲ್ಲಿ ಈ ಹಿಂದೆ ಹೈಕೋರ್ಟ್
ಮೊರೆಹೋಗಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ನ್ಯಾಯಾಂಗ ವ್ಯವಸ್ಥೆಯನ್ನು ಗೌರವಿಸುವುದಾಗಿ ತಿಳಿಸಿದ್ದರು. ಆದರೆ ಈಗ ನ್ಯಾಯಾಲಯದ ತೀರ್ಪು ಬಂದ ಮೇಲೆ ವ್ಯತಿರಿಕ್ತವಾಗಿ ದೇಶದ ನ್ಯಾಯಾಂಗ ವ್ಯವಸ್ಥೆಗೆ ಕಳಂಕ ತರುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾನೂನನ್ನು ಗೌರವಿಸಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಯಥಾಪ್ರಕಾರ ವಿದ್ಯಾಭ್ಯಾಸ ಮುಂದುವರೆಸುವ ಅವಕಾಶ ನಾವು ಕಲ್ಪಿಸುತ್ತೇವೆ. ನಮ್ಮ ದೇಶದ ಕಾನೂನನ್ನು ಗೌರವಿಸುವವರು ದೇಶದಲ್ಲಿ ಉಳಿಯಬಹುದು. ಕಾನೂನಿಗೆ ಗೌರವ ನೀಡದವರು ಅವರಿಗೆ ಯಾವ ದೇಶದಲ್ಲಿ ಅವರ ಧರ್ಮ ಪಾಲನೆಗೆ ಅವಕಾಶ ಸಿಗುತ್ತದೋ ಆ ದೇಶದಲ್ಲಿ ಶಿಕ್ಷಣ ಮುಂದುವರೆ ಸಬಹುದು. ಆದರೆ ಭಾರತದಲ್ಲಿ ಇತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಡುವ ರೀತಿಯಲ್ಲಿ ಕೆಲಸ ಮಾಡಬಾರದು ಎಂದು ಕೇಳಿಕೊಂಡರು.
ಈ ವೇಳೆ ಸಂಘಟನೆಗಳ ಹೇಳಿಕೆಗಳ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈ ಹಿಂದೆ ಕೂಡಾ ಕೆಲವು ನಾಯಕರು, ಸಾಕಷ್ಟು ಸಂಘಟನೆಯ ನಾಯಕರ
ಬಹಳಷ್ಟು ಹೇಳಿಕೆಗಳನ್ನು ಆ ಸಂದರ್ಭದಲ್ಲಿ ನೀಡಿದ್ದರು. ಕೋರ್ಟ್ ಗೆ ಹೋಗುತ್ತೇವೆ, ನ್ಯಾಯಾಲಯದ ಆದೇಶಕ್ಕೆ ಗೌರವ ಸೂಚಿಸುವುದಾಗಿ ಹೇಳಿದ್ದರು.
ಆದರೆ ಇಂದು ನ್ಯಾಯಾಲಯದ ಆದೇಶ ಬಂದ ನಂತರ ಬೇರೆಯದೇ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ತಮ್ಮ ಹೇಳಿಕೆಗಳ ಮೂಲಕ ಕರಾವಳಿ ಭಾಗದ ಜನರಲ್ಲಿ
ಅಶಾಂತಿ ನಿರ್ಮಾಣ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದರು ಹಾಗೂ ಮುಂದಿನ ದಿನಗಳಲ್ಲಿ ನಿಮ್ಮ ಸಂಘಟನೆಗಳನ್ನು ಕಿತ್ತೆಸೆಯುವ ಪ್ರಯತ್ನ
ಮಾಡಲು ನಾವು ಬದ್ಧರಿದ್ದೇವೆ ಎಂದು ಎಚ್ಚರಿಸಿದರು.
ಸಿಎಫ್‌ಐ ಪಿಎಫ್‌ಐ ಸಂಘಟನೆಗಳಿಗೆ ಅವರ ಧರ್ಮದ ಹೆಣ್ಣು ಮಕ್ಕಳು ವಿದ್ಯಾವಂತರಾಗುವುದು ಇಷ್ಟವಿಲ್ಲ ಎಂದ ಅವರು, ಮುಸ್ಲಿಂ ಹೆಣ್ಣು ಮಕ್ಕಳು
ವಿದ್ಯಾವಂತರಾದರೆ ಮುಂದಿನ ದಿನಗಳಲ್ಲಿ ಹೆಣ್ಣು ಮಕ್ಕಳು ತಮ್ಮನ್ನು ಪ್ರಶ್ನೆ ಮಾಡುವ ಅಭ್ಯಾಸ ಮಾಡುತ್ತಾರೆ. ತಮಗಾಗಿ ಸಮಾಜದಲ್ಲಿ ಮುಂದೆ ಬಂದು
ಹೋರಾಟ ಮಾಡುತ್ತಾರೆ ಎಂದು ತಮ್ಮ ವಿದ್ಯಾರ್ಥಿಗಳನ್ನು ಇಂತಹ ಚಟುವಟಿಕೆಗಳಲ್ಲಿ ತೊಡಗುವಂತೆ ಮಾಡಿ ಶಿಕ್ಷಣದಿಂದ ವಂಚಿತರಾಗುವಂತೆ
ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಹಾಗೂ ಮುಸ್ಲಿಂ ಹೆಣ್ಣು ಮಕ್ಕಳು ಸಾಮಾಜಿಕವಾಗಿ, ಇಂತಹ ಸಂಘಟನೆ ಗಳಿಂದ ಹೊರ ಬಂದು ಇತರಾಗಿ
ಬದುಕಲು ಪ್ರಯತ್ನಿಸಿದರೆ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದರು.
ವಿದ್ಯಾರ್ಥಿಗಳು ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು,
ಸುಪ್ರೀಂ ಕೋಟ್ರ್ನಲ್ಲಿ ಕೇವಲ ಒಂದು ರಾಜ್ಯಕ್ಕೆ ಸೀಮಿತಗೊಳಿಸದೆ ಎಲ್ಲಾ ರಾಜ್ಯಗಳ ನ್ಯಾಯಧೀಶರ ಸಭೆ ನಡೆಸಿ ಕಾನೂನು ಬದ್ಧವಾಗಿ ಅಭಿಪ್ರಾಯಗಳ
ಮಂಡನೆ ಮಾಡಿ ತೀರ್ಪು ನೀಡುತ್ತಾರೆ. ಹಾಗಾಗಿ ಸುಪ್ರೀಂ ಕೋರ್ಟ್ ನಲ್ಲಿಯೂ ಸರಕಾರದ ಪರವಾಗಿ ತೀರ್ಪು ಬರಲಿದೆ ಎಂಬ ನಿರೀಕ್ಷೆ ಇದೆ ಎಂದು ವಿಶ್ವಾಸ
ವ್ಯಕ್ತಪಡಿಸಿದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…