ಉಡುಪಿ: ಸಂಸದರ ನೇತೃತ್ವದಲ್ಲಿ ಕೋವಿಡ್- 19 ನಿಯಂತ್ರಣ ಸಭೆ -Vishwanews24

Featured, ಉಡುಪಿ

ಉಡುಪಿ: ಸಂಸದರ ನೇತೃತ್ವದಲ್ಲಿ ಕೋವಿಡ್- 19 ನಿಯಂತ್ರಣ ಸಭೆ -Vishwanews24

ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಇಂದು ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ ನಡೆಯಿತು.

ಸಭೆಯಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ತೆಗೆದುಕೊಂಡಿರುವ ಕ್ರಮಗಳು ಹಾಗೂ ಆಕ್ಸಿಜನ್, ವೆಂಟಿಲೇಟರ್ ಲಭ್ಯತೆ ಕುರಿತು ಚರ್ಚಿಸಲಾಯಿತು. ಕೊರೊನಾ ಸಂಪೂರ್ಣ ನಿಯಂತ್ರಣದ ದೃಷ್ಟಿಯಿಂದ ಹರಡುವಿಕೆಯನ್ನು ತಡೆಯಲು 50ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿರುವ ಗ್ರಾಮಗಳನ್ನು ಸಂಪೂರ್ಣ ಸೀಲ್‌ಡೌನ್ ಮಾಡುವುದು ಹಾಗೂ ಪಾಸಿಟಿವ್ ಪ್ರಕರಣಗಳಿರುವ ಮನೆಗಳನ್ನು ಸೀಲ್‌ಡೌನ್ ಮಾಡುವ ಬಗ್ಗೆ ತೀರ್ಮಾನಿಸಲಾಯಿತು.

ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಶಾಸಕ ರಘುಪತಿ ಭಟ್, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ, ಪೋಲಿಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.