Featured

ಉಡುಪಿ: ಸಕಾಲ ಯೋಜನೆಯಲ್ಲಿ ರಾಜ್ಯದಲ್ಲೇ ಉಡುಪಿ ಜಿಲ್ಲೆ ನಂ.1 -Vishwanews24

ಉಡುಪಿ: ಸಕಾಲ ಯೋಜನೆಯಲ್ಲಿ ರಾಜ್ಯದಲ್ಲೇ ಉಡುಪಿ ಜಿಲ್ಲೆ ನಂ.1 -Vishwanews24

ಉಡುಪಿ,: ಕರ್ನಾಟಕ ರಾಜ್ಯ ಸರ್ಕಾರವು 2011-12ನೇ ಸಾಲಿನಲ್ಲಿ ಜಾರಿಗೆ ತಂದಿರುವ ಸಕಾಲ ಕಾಯ್ದೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಸಕಾಲ ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿದಂತೆ ಜಿಲ್ಲೆಯು ಒಟ್ಟಾರೆ ಉತ್ತಮ ಸಾಧನೆ ಮಾಡಿದೆ.

ಜನರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು, ಅಕ್ರಮಕ್ಕೆ ಆಸ್ಪದ ನೀಡದಂತೆ ಹಾಗೂ ಅರ್ಜಿ ವಿಲೇವಾರಿ ವಿಳಂಬ ಆಗದೆ ಕಾಲಕಾಲಕ್ಕೆ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ‘ಕರ್ನಾಟಕ ನಾಗರಿಕ ಸೇವಾ ಕಾಯ್ದೆ’ (ಸಕಾಲ) ಜಾರಿಗೊಳಿಸಲಾಯಿತು. ಅದರಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು. ಅದರಡಿ ಅರ್ಜಿ ವಿಲೇವಾರಿಗೆ ಇಲಾಖೆ ಹಾಗೂ ಸೌಲಭ್ಯಗಳಿಗೆ ತಕ್ಕಂತೆ ಆಯಾ ಅರ್ಜಿಗಳಿಗೆ ಪ್ರತ್ಯೇಕ ಅವಧಿ ನಿಗದಿ ಮಾಡಲಾಗಿತ್ತು.

ನಿಗದಿತ ಅವಧಿಯೊಳಗೆ ಅರ್ಜಿ ವಿಲೇವಾರಿ ಮಾಡದಿದ್ದರೆ, ಅರ್ಜಿದಾರ ದೂರು ದಾಖಲಿಸುವ ಹಾಗೂ ಅರ್ಜಿ ವಿಳಂಬಕ್ಕೆ ಕಾರಣ ಪಡೆಯಲು ಅವಕಾಶ ಮಾಡಿ ಕೊಡಲಾಗಿದೆ. ಈ ಯೋಜನೆಯಡಿ ಸಕಾಲದಲ್ಲಿ ಸೇವೆ ಒದಗಿಸುವಲ್ಲಿ ಕರ್ತವ್ಯ ಲೋಪವೆಸಗಿದ ಸಾರ್ವಜನಿಕ ನೌಕರ ಸಕ್ಷಮ ಅಧಿಕಾರಿಯಿಂದ ದಿನಕ್ಕೆ 20 ರೂಪಾಯಿಗಳಂತೆ ಗರಿಷ್ಠ 500 ರೂ.ವರೆಗೆ ದಂಡ ವಸೂಲಿ ಮಾಡಬಹುದು.

ಅರ್ಜಿ ವಿಲೇವಾರಿಗೆ ಕನಿಷ್ಠ 3 ದಿನಗಳಿಂದ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಈ ಕಾರ್ಯವನ್ನು ಜಿಲ್ಲೆಯ ಕಂದಾಯ ಇಲಾಖೆ ಮತ್ತು ಇತರ ಇಲಾಖೆ ಉತ್ತಮವಾಗಿ ನಿರ್ವಹಿಸಿದೆ.

ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿಯನ್ನು ನಿಗದಿತ ಅವಧಿಗೂ ಮುಂಚಿತವಾಗಿ ಅರ್ಜಿ ವಿಲೇವಾರಿ ಮಾಡುವುದು, ಅವಧಿ ಮೀರಿ ಅರ್ಜಿಗಳ ವಿಲೇವಾರಿ, ಅರ್ಜಿಗಳ ತಿರಸ್ಕರಿಸುವಿಕೆ ಮತ್ತು 1 ಲಕ್ಷ ಜನಸಂಖ್ಯೆಯಲ್ಲಿ ಅತಿ ಹೆಚ್ಚು ಅರ್ಜಿ ಸ್ವೀಕೃತಿ ಮಾಡಿಕೊಂಡಿರುವುದು ಹೀಗೆ 4 ಅಂಶಗಳನ್ನು ಪರಿಗಣಿಸಿ ತಿಂಗಳ ಕೊನೆಯಲ್ಲಿ ರ್‍ಯಾಂಕ್ ನೀಡಲಾಗುತ್ತದೆ. ಅದರಂತೆ ಸಕಾಲ(ಆನ್ಲೈನ್)ದಲ್ಲಿ ಅರ್ಜಿಗಳನ್ನು ಜಿಲ್ಲೆಯ ಜನರು ಹೆಚ್ಚು ಸಲ್ಲಿಸಿದ್ದು, ಅರ್ಜಿಗಳನ್ನು ಹೆಚ್ಚು ತಿರಸ್ಕರಿಸದೆ ಅಧಿಕಾರಿಗಳು ಅವಧಿಗೂ ಮುಂಚಿತವಾಗಿ ಅರ್ಜಿ ವಿಲೇವಾರಿ ಮಾಡಿದ್ದಾರೆ. ಇದೇ ಕಾರಣದಿಂದ ಈ ಬಾರಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ಲಭಿಸಿತು.

ಜಿಲ್ಲಾಡಳಿತದಿಂದ ಅಭಿನಂದನೆ:

ಜೂನ್ ತಿಂಗಳ ಸಕಾಲ ಸೇವೆಯಲ್ಲಿ ರಾಜ್ಯದಲ್ಲಿ ಉಡುಪಿ ಜಿಲ್ಲೆಯು ಪ್ರಥಮ ಸ್ಥಾನ ಪಡೆಯಲು ಕಾರಣರಾಗಿರುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್‌ ರವರು ತಮ್ಮ ಅಧೀಕೃತ ಫೇಸ್ಬುಕ್‌ ಪೇಜ್‌ ನಲ್ಲಿ ಅಭಿನಂದನೆ ಸಲ್ಲಿಸಿರುತ್ತಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago