ಉಡುಪಿ: ಉಡುಪಿ ಸಂಸದೆ ಹಾಗೂ ಕೇಂದ್ರ ಕೃಷಿ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೆಸರಿನಲ್ಲಿ ವ್ಯಕ್ತಿಯೊಬ್ಬ ಜನರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದು, ಈ ಸಂಬಂಧ ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
‘ಸಚಿವರ ಆಪ್ತ ಸಹಾಯಕ ವರುಣ್ ಆದಿತ್ಯ ಅವರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಎನ್ನಲಾದ ಪ್ರಕಾಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಶೋಭಾ ಕರಂದ್ಲಾಜೆ ಅವರ ಆಪ್ತನೆಂದು ಹೇಳಿಕೊಂಡು ರಾಜ್ಯ ಹಾಗೂ ಹೊರ ರಾಜ್ಯಗಳ ಹಲವು ಜಮೀನ್ದಾರರಿಗೆ ಕರೆ ಮಾಡಿದ್ದ ಆರೋಪಿ, ನಾನಾ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾನೆ. ಈ ಬಗ್ಗೆ ಜಮೀನ್ದಾರರೊಬ್ಬರು ಸಚಿವರಿಗೆ ಮಾಹಿತಿ ನೀಡಿರುವುದಾಗಿ ಗೊತ್ತಾಗಿದೆ. ವಂಚನೆಗೆ ಬಳಸಿದ್ದ ಮೊಬೈಲ್ ಸಂಖ್ಯೆ ಆಧರಿಸಿ ಆರೋಪಿ ಪತ್ತೆ ಮಾಡಲಾಗುತ್ತಿದೆ’ ಎಂದೂ ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…