Featured

ಉಡುಪಿ : ಸದ್ಯಕ್ಕೆ ನಮಗೆ ಅಧಿಕಾರ ಇಲ್ಲ ಪ್ರಮೋದ್ ಅವರಿಗೆ ಉಸಿರು ಕಟ್ಟಿರಬಹುದು : ಅಶೋಕ್ ಕುಮಾರ್ ಕೊಡವೂರು – Vishwanews24

ಪ್ರಮೋದ್ ಅವರು ಹೋದ ಬಳಿಕ ಎಷ್ಟೊ ಕಾರ್ಯಕರ್ತರು “ಈಗ ನಮಗೆ ಉಸಿಡಾಡುವ ಹಾಗೆ‌ ಆಗಿದೆ” ಎನ್ನುತ್ತಾರೆ

ಉಡುಪಿ : ಕಳೆದ ಸುಮಾರು ಮೂರು ವರ್ಷಗಳಿಂದ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆಹಾಜರಾಗದ ಪ್ರಮೋದ್ ಮಧ್ವರಾಜ್ ಗೆ ಪಕ್ಷದಲ್ಲಿ ಉಸಿರುಗಟ್ಟುವುದು ಹೇಗೆ? ಸದ್ಯಕ್ಕೆ ನಮಗೆ ಅಧಿಕಾರ ಇಲ್ಲ ಹೀಗಾಗಿ ಅವರಿಗೆ ಉಸಿರು ಕಟ್ಟಿರಬಹುದು ಎಂದು ಪ್ರಮೋದ್ ಬಿಜೆಪಿ ಸೇರ್ಪಡೆ ಕುರಿತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರತಿಕ್ರಿಯೆ ನೀಡಿದರು.

ನಮ್ಮದು ಪ್ರಜಾಪ್ರಭುತ್ವದ ಅಡಿಯಲ್ಲಿ ಇರುವ ಪಕ್ಷ. ಪ್ರಮೋದ್ ಅವರಿಗಾಗಿ ನಮ್ಮ ಎಲ್ಲಾ ಕಾರ್ಯಕರ್ತರು, ನಾಯಕರು ಕೆಲಸ ಮಾಡಿದ್ದಾರೆ. ಅವರಿಗೆ ಪಕ್ಷ ಎಲ್ಲಾ ಸೌಲಭ್ಯ ನೀಡಿದೆ. ಅವರ ಕುಟುಂಬದ ಎರಡು ಪೀಳಿಗೆಗೆ ಪಕ್ಷ ಕೆಲಸ ಮಾಡಿದೆ. ಅವರು ಹೇಳಿದ ಎಲ್ಲಾ ಬೇಡಿಕೆಗಳನ್ನು ಪೂರೈಸಿದೆ. ಇನ್ನಾದರೂ ನಾವ್ಯಾರೂ ಮೇಲೆ ಬರಬಾರದಾ? ಹೋಗುವುದು ಅವರ ಇಚ್ಛೆ. ಆದರೆ ಹೋದ ಮೇಲೆ ಆರೋಪ ಮಾಡುವುದು ಏಕೆ? ಎಂದು ಅವರು ಪ್ರಶ್ನಿಸಿದರು.

ಅವರ ತಾಯಿಗೆ ಇಂದು ಕೂಡಾ ಸಾವಿರಾರು ರೂಪಾಯಿ ಪಿಂಚಣಿ ಬರುತ್ತದೆ ಎಂದರೆ ಅದು ಕಾರ್ಯಕರ್ತರ ಶ್ರಮದ ಫಲ. ನಾವು ನಮ್ಮ ಕುಂಟುಂಬಕ್ಕಾಗಿ ದುಡಿದು ಕೊಡುವ ಹಣವನ್ನು ಪಕ್ಷಕ್ಕಾಗಿ ನೀಡುತ್ತಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅವರು ಹೋದ ಮೇಲೆ ನನಗೆ ಏನೂ ವಿಶೇಷ ಅನಿಸಲಿಲ್ಲ. ಪ್ರಥಮ ಹಂತದಲ್ಲಿ ನಾನು ಅವರೊಂದಿಗೆ ಮಾತನಾಡಲು ಹೋಗಿದ್ದೆ. ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಆಗ ಪಕ್ಷದ ಚೌಕಟ್ಟಿನಲ್ಲಿ ಮಾತನಾಡಿದ್ದೇನೆ. ಪಕ್ಷದ ಶಿಸ್ತನ್ನು ಎಲ್ಲರೂ ಪಾಲಿಸಬೇಕು. ಅವರು ಹೋದ ಬಳಿಕ ಎಷ್ಟೊ ಕಾರ್ಯಕರ್ತರು “ಈಗ ನಮಗೆ ಉಸಿಡಾಡುವ ಹಾಗೆ‌ ಆಗಿದೆ” ಎನ್ನುತ್ತಾರೆ ಎಂದು ಹೇಳಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago