Featured

ಉಡುಪಿ: ಸಮಾನ ಮನಸ್ಕ ಸಂಘಟನೆಗಳಿಂದ ಅ.29ರಂದು ಇಂದ್ರಾಳಿ ಸೇತುವೆ ಕಾಮಗಾರಿ ವಿಳಂಬ ವಿರೋಧಿಸಿ ಪ್ರತಿಭಟನೆ – vishwanews24

ಉಡುಪಿ: ಸಮಾನ ಮನಸ್ಕ ಸಂಘಟನೆಗಳಿಂದ ಅ.29ರಂದು ಇಂದ್ರಾಳಿ ಸೇತುವೆ ಕಾಮಗಾರಿ ವಿಳಂಬ ವಿರೋಧಿಸಿ ಪ್ರತಿಭಟನೆ

ಉಡುಪಿ: ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ ವಿರೋಧಿಸಿ ಇಂದ್ರಾಳಿ ಸೇತುವೆ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳು ಅ.29ರಂದು ಬೆಳಗ್ಗೆ 10ಗಂಟೆಗೆ ಇಂದ್ರಾಳಿ ಸೇತುವೆ ಬಳಿ ಸಾರ್ವಜನಿಕ ಪ್ರತಿಭಟನಾ ಸಭೆಯನ್ನು ಹಮ್ಮಿಕೊಂಡಿವೆ ಎಂದು ಸಮಿತಿ ಪ್ರಮುಖ ಅಮೃತ್ ಶೆಣೈ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೇತುವೆ ಕಾಮಗಾರಿಯನ್ನು ಬಹುತೇಕ ಸ್ಥಗಿತ ಗೊಂಡು ಹಲವು ವರ್ಷಗಳು ಸಂದಿವೆ. ಇದರಿಂದ ಇಲ್ಲಿ ಅಪಘಾತಗಳಾಗಿ ಅಪಾರ ಸಾವು ನೋವು ಸಂಭವಿಸುತ್ತಿದೆ. ಅಲ್ಲದೆ ದಿನಗಟ್ಟಲೆ ಟ್ರಾಫಿಕ್ ಜಾಮ್ಗೂ ಕಾರಣವಾಗುತ್ತಿದೆ. ಇಲ್ಲಿರುವ ಶಾಲಾ ಕಾಲೇಜು, ವಿದ್ಯಾರ್ಥಿಗಳ ಜೀವಕ್ಕೂ ಅಪಾಯಕರ ಪರಿಸ್ಥಿತಿ ಉಂಟಾಗಿದೆ. ಪಾದಾಚಾರಿಗಳಿಗೂ ಮತ್ತು ಧಾರ್ಮಿಕ ಕೇಂದ್ರಗಳಿಗೆ ಬರುವ ಭಕ್ತಾದಿಗಳಿಗೂ, ಬೇರೆ ಬೇರೆ ಜಿಲ್ಲೆ ಗಳಿಂದ ಮಣಿಪಾಲ ಆಸ್ಪತ್ರೆಗೆ ಬರುವ ರೋಗಿಗಳಿಗೂ ಬಹಳ ತೊಂದರೆ ಆಗುತ್ತಿದೆ. ಒಟ್ಟಾರೆ ಈ ಕಾಮಗಾರಿ ವಿಳಂಬ ದಿಂದ ಉಡುಪಿಯ ಆರ್ಥಿಕತೆಗೆ ಪರೋಕ್ಷವಾಗಿ ಹೊಡೆತವಾಗಿದೆ ಎಂದು ಆರೋಪಿಸಿದರು.

ಈ ಪ್ರತಿಭಟನೆಯ ಮೂಲಕ ಜನಜಾಗೃತಿ ಮೂಡಿಸುವುದಲ್ಲದೆ ಸರಕಾರಕ್ಕೆ ಬಿಸಿ ಮುಟ್ಟಿಸುವ ಕಾರ್ಯ ಮಾಡಲಾಗು ವುದು. ಮುಂದಿನ ಮೂರು ತಿಂಗಳಲ್ಲಿ ಅಂದರೆ ಜ.29ರೊಳಗೆ ಈ ಕಾಮಗಾರಿಯನ್ನು ಮುಗಿಸಿ ಚತುಷ್ಪಥ ರಸ್ತೆಯನ್ನು ಸಂಚಾರಕ್ಕೆ ಮುಕ್ತ ಮಾಡಬೇಕು. ಇಲ್ಲದಿದ್ದರೆ ಜ.30ರಂದು ಉಗ್ರ ಹೋರಾಟ ನಡೆಸಲಾಗುವುದು. ಈ ಕುರಿತ ಮನವಿ ಯನ್ನು ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಮುಖರಾದ ಜ್ಯೋತಿ ಹೆಬ್ಬಾರ್, ಅಬ್ದುಲ್ ಅಝೀಝ್ ಉದ್ಯಾವರ, ಬಿ.ಕುಶಲ ಶೆಟ್ಟಿ, ಅನ್ಸಾರ್ ಅಹ್ಮದ್, ಲತಾ ಆನಂದ ಶೇರಿಗಾರ್, ರಮೇಶ್ ಕಾಂಚನ್, ಚಂದ್ರ ಮೋಹನ್, ಸುರೇಶ್ ಶೆಟ್ಟಿ ಬನ್ನಂಜೆ, ಜಾನಕಿ ಕೃಷ್ಣ ನಾಯ್ಕ, ರಮೇಶ್ ತಿಂಗಳಾಯ, ಗಣೇಶ್ ನೆರ್ಗಿ, ಮಹಾಬಲ ಕುಂದರ್, ಬಿ.ಶ್ರೀಧರ್, ಕೀರ್ತಿ ಶೆಟ್ಟಿ ಅಂಬಲಪಾಡಿ, ಪೀರು ಮುಹಮ್ಮದ್, ಜಯನ್ ಮಲ್ಪೆ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

5 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

5 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

5 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

9 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

9 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

9 hours ago