ಉಡುಪಿ : ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡ ಜನರ ಹಸಿವನ್ನು ನೀಗಿಸುತ್ತಿದೆ : ಲಕ್ಷ್ಮೀ ಹೆಬ್ಬಾಳ್ಕರ್ – vishwanews24
ಚುನಾವಣೆಗಾಗಿ ಸ್ವಾರ್ಥದ ರಾಜಕಾರಣಕ್ಕೆ ಗ್ಯಾರಂಟಿ ಯೋಜನೆ ಜಾರಿಗೆ ತಂದಿಲ್ಲ..
ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕುವುದಿಲ್ಲ , ಈ ಯೋಜನೆಗಳನ್ನು ಪರಿಷ್ಕರಿಸುವ ಪ್ರಸ್ತಾವನೆ ಸರಕಾರದ ಮುಂದಿಲ್ಲ : ಉಡುಪಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ
ಉಡುಪಿ : ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡ ಜನರ ಹಸಿವನ್ನು ನೀಗಿಸುತ್ತಿದ್ದು, ಎಂದಿನಂತೆ ಯಥಾವತ್ತಾಗಿ ಮುಂದುವರಿಯಲಿದೆ. ಈ ಯೋಜನೆಗಳನ್ನು ಪರಿಷ್ಕರಿಸುವ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ಅಜ್ಜರನಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಪ್ರಸ್ತಾಪ ಸರಕಾರದ ಮುಂದೆ ಇಲ್ಲ. ಸರಕಾರ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕುವುದಿಲ್ಲ ಎಂದು ಹೇಳಿದರು.
ಕಳೆದ ವಿಧಾನ ಸಭೆ ಚುನಾವಣೆ ವೇಳೆ ಕೊಟ್ಟ ಭರವಸೆಗಳನ್ನು ಜಾರಿಗೆ ತರಲಾಗಿದೆ. ಐದು ಗ್ಯಾರಂಟಿಗಳು ಮುಂದುವರಿಯಲಿವೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಯಾರೂ ಅನ್ಯತಾ ವ್ಯಾಖ್ಯಾನಿಸಬಾರದು. ಪರಿಷ್ಕರಣೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿಯವರು ಮಾತನಾಡಿರಲಿಕ್ಕಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಎಲ್ಲರ ಧ್ವನಿಯೂ ಒಂದೇ, ಗ್ಯಾರಂಟಿ ಯೋಜನೆ ಮುಂದುವರಿಯಬೇಕು ಅಂತ. ಚುನಾವಣೆಗಾಗಿ ಸ್ವಾರ್ಥದ ರಾಜಕಾರಣಕ್ಕೆ ಗ್ಯಾರಂಟಿ ಯೋಜನೆ ಜಾರಿಗೆ ತಂದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಪ್ರೀತಿಗೆ ಪೋಷಕರಿಂದ ವಿರೋಧ : ಯುವಕ ನೇಣಿಗೆ ಶರಣು ; ಚಾಕು ಇರಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ – vishwanews24
