ಉಡುಪಿ: ಸರಕಾರದ ಭ್ರಷ್ಟಾಚಾರ ವಿರೋಧಿಸಿ ಮಾ.9 ರಂದು ಬಂದ್ ಗೆ ಜಿಲ್ಲಾ ಕಾಂಗ್ರೆಸ್ ಕರೆ – Vishwanews24
ಉಡುಪಿ: ಸರಕಾರದ ಭ್ರಷ್ಟಾಚಾರ ವಿರೋಧಿಸಿ ಮಾ.9 ರಂದು ಬಂದ್ ಗೆ ಜಿಲ್ಲಾ ಕಾಂಗ್ರೆಸ್ ಪಕ್ಷ ಕರೆ
ಉಡುಪಿ : ಸರಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಮಾ.9 ರಂದು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಬಂದ್ ಆಚರಿಸಲು ಉಡುಪಿ ಜಿಲ್ಲಾ ಕಾಂಗ್ರೆಸ್ ಕರೆ ನೀಡಿದೆ.
ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆಶೋಕ್ ಕುಮಾರ್ ಕೊಡವೂರು ಅವರು, ರಾಜ್ಯ ಬಿಜೆಪಿ ಸರಕಾರದ ಭ್ರಷ್ಟಾಚಾರ ಹಾಗೂ 40 % ಕಮಿಷನ್ ವಿರುದ್ಧ ಮಾರ್ಚ್ 9 ರಂದು ಬೆಳಿಗ್ಗೆ ಗಂಟೆ 9 ರಿಂದ 11:00 ಗಂಟೆಯ ವರೆಗೆ ಎರಡು ಗಂಟೆಗಳ ಸಾಂಕೇತಿಕ ಬಂದ್ ಗೆ ಕಾಂಗ್ರೆಸ್ ಪಕ್ಷ ಕರೆ ನೀಡಿದೆ. ಈ ನಿಟ್ಟಿನಲ್ಲಿ ವ್ಯಾಪಾರಸ್ಥರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡುವ ಮೂಲಕ ಭ್ರಷ್ಟಾಚಾರದ ವಿರುದ್ಧದ ಧ್ವನಿಗೆ ಬೆಂಬಲವಾಗಿ ನಿಲ್ಲಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಶಿವಮೊಗ್ಗ : ಮಾಸ್ಕ್ ಧರಿಸಿ ದೇಗುಲದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು – Vishwanews24
ಹಾಗೂ ಸರಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದರೆ ಮುಖ್ಯಮಂತ್ರಿಗಳು ಪ್ರತಿ ಬಾರಿಯೂ ಹಿಂದೆಯೂ ಭ್ರಷ್ಟಾಚಾರ ನಡೆದಿದೆ ಎಂದು ಹೇಳುವ ಮೂಲಕ ತಮ್ಮನ್ನು ತಾವು ಸಮರ್ಥನೆ ಮಾಡಿಕೊಳ್ಳುತ್ತಿದ್ದರು. ಗುತ್ತಿಗೆದಾರರಿಂದ ಕಮಿಷನ್ ಪಡೆಯುವ ಬಗ್ಗೆ ಮುಖ್ಯಮಂತ್ರಿಗಳು ಸದಾ ದಾಖಲೆ ಕೊಡಿ ಎಂದು ಕೇಳುತ್ತಿದ್ದರು ಆದರೆ ಈಗ ಶಾಸಕ ಮಾಡಾಳು ವಿರೂಪಾಕ್ಷಪ್ಪನವರ ಮಗ ಪ್ರಶಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಎಂಟು ಕೋಟಿಗೂ ಅಧಿಕ ಮೊತ್ತ ವಶಪಡಿಸಿಕೊಂಡಿರುವುದು ಬಿಜೆಪಿ ಸರಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ತಕ್ಷಣವೇ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಸೌತಡ್ಕ ದೇವಸ್ಥಾನ : ಹಿಂದೂಯೇತರ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಬ್ಯಾನರ್ ಅಳವಡಿಕೆ – Vishwanews24
