Featured

ಉಡುಪಿ : ಸರಕಾರದ ಯೋಜನೆಗಳನ್ನು ಅರ್ಹ ಮಹಿಳಾ ಫಲಾನುಭವಿಗಳಿಗೆ ತಲುಪಿಸಿ : ಶಶಿಕಲಾ ವಿ ಟೆಂಗಳೆ -Vishwanews24

ಉಡುಪಿ : ಸರಕಾರದ ಯೋಜನೆಗಳನ್ನು ಅರ್ಹ ಮಹಿಳಾ ಫಲಾನುಭವಿಗಳಿಗೆ ತಲುಪಿಸಿ : ಶಶಿಕಲಾ ವಿ ಟೆಂಗಳೆ -Vishwanews24

ಉಡುಪಿ : ಮಹಿಳೆಯರ ಕಲ್ಯಾಣಾಭಿವೃದ್ಧಿಗೆ ಸರಕಾರ ಅನೇಕ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ ಟೆಂಗಳೆ ಹೇಳಿದರು.

ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಾಜದಲ್ಲಿನ ದುರ್ಬಲ ವರ್ಗದ ಮಹಿಳೆಯರ ಅನುಕೂಲಕ್ಕೆ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಮಹಿಳೆಯರು ಸದುಪಯೋಗಪಡಿಸಿಕೊಂಡು ಸ್ವ-ಉದ್ಯೋಗ, ವಾಣಿಜ್ಯ, ಹೈನುಗಾರಿಕೆ ಸೇರಿದಂತೆ ಇನ್ನಿತರ ಚಟುವಟಿಕೆಗಳನ್ನು ಕೈಗೊಳ್ಳುವುದರೊಂದಿಗೆ ಆರ್ಥಿಕವಾಗಿ ಸಬಲರಾಗುವುದರೊಂದಿಗೆ ಸ್ವಾವಲಂಭಿಗಳಾಗಬೇಕು ಎಂದರು.

ಜಿಲ್ಲೆಯಲ್ಲಿ ಉದ್ಯೋಗಿನಿ, ಸಮೃದ್ಧಿ, ಕಿರುಸಾಲ, ಧನಶ್ರೀ, ಚೇತನ, ಲಿಂಗತ್ವ ಅಲ್ಪಸಂಖ್ಯಾತ, ಮಹಿಳೆಯರಿಗೆ ಕೌಶಲ್ಯ ತರಬೇತಿ, ಮಹಿಳಾ ಸ್ವ-ಉದ್ಯೋಗ ಮಾರ್ಗದರ್ಶನ ಕೇಂದ್ರ ಯೋಜನೆ, ಪರಿಶಿಷ್ಟ ಜಾತಿ/ಪಂಗಡ ಉಪಯೋಜನೆಗಳನ್ನು ಪ್ರತಿಶತ ನೂರರಷ್ಟು ಅನುಷ್ಠಾನಗೊಳಿಸಬೇಕು ಎಂದರು.

ಕೇoದ್ರ ಹಣಕಾಸು ಸಚಿವಾಲಯ ಪ್ರಧಾನ ಮಂತ್ರಿ ಮಹಿಳಾ ಸಶಕ್ತೀಕರಣ ಯೋಜನೆಯಡಿ ಕೌಶಲ್ಯಾಭಿವೃದ್ಧಿ ಉದ್ಯೋಗ, ಆರೋಗ್ಯ ಮತ್ತು ಪೌಷ್ಠಿಕತೆಗಳ ಮೂಲಕ ಗ್ರಾಮೀಣ ಮಹಿಳೆಯರನ್ನು ಸಬಲೀಕರಣಗೊಳಿಸಲು ಒಂದೇ ಕಡೆ ಎಲ್ಲಾ ಸಹಾಯ ಸೇವೆಗಳನ್ನು ನೀಡುವ ಸಲುವಾಗಿ ಮಹಿಳಾ ಶಕ್ತಿ ಕೇಂದ್ರ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಸ್ವ-ಉದ್ಯೋಗ, ಹೈನುಗಾರಿಕೆ ಕೈಗೊಳ್ಳಲು ಹಾಗೂ ಅವರಿಗೆ ನಿವೇಶನ ಒದಗಿಸುವ ಕುರಿತಂತೆ ಇಂದು ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಿ ಸರಕಾರದ ಜಮೀನು ನೀಡಲು ಮನವಿ ಮಾಡಲಾಗಿದೆ ಎಂದರು.

ಸ್ವ-ಉದ್ಯೋಗ ಕೈಗೊಳ್ಳಲು ವಾಣಿಜ್ಯ ಬ್ಯಾಂಕುಗಳ ಮೂಲಕ ಸಬ್ಸಿಡಿ ಲೋನ್ ಪಡೆದವರು ಅದನ್ನು ಸದ್ಭಳಕೆ ಮಾಡಿಕೊಳ್ಳುವುದರ ಜೊತೆಗೆ ಅದನ್ನು ನಿಗದಿತ ಕಾಲಾವಧಿ ಒಳಗೆ ಮರುಪಾವತಿ ಮಾಡಲು ಮುಂದಾದಲ್ಲಿ ವಾಣಿಜ್ಯ ಬ್ಯಾಂಕುಗಳು ಹೆಚ್ಚಿನ ನೆರವನ್ನು ನೀಡಲು ಸಾಧ್ಯ ಎಂದರು.

ಎಲ್ಲಾ ಜಿಲ್ಲೆಗಳಲ್ಲೂ ಅನುಷ್ಟಾನಗೊಸಲಾದ ಯೋಜನೆಗಳಿಂದ ಉಳಿಕೆಯಾದ 12 ಕೋಟಿ ರೂ. ಹಣವನ್ನು ಮಹಿಳಾ ಅಭಿವೃದ್ಧಿ ನಿಗಮದ 24,802 ಫಲಾನುಭವಿಗಳಿಗೆ ಕೋವಿಡ್ ಸಂಕಷ್ಟದಲ್ಲಿ ತಲಾ 10,000 ರೂಗಳಂತೆ ಹಂಚಿಕೆ ಮಾಡಲಾಗಿದೆ ಎಂದರು.

ಹೆಚ್.ಐ.ವಿ ಸೋಂಕಿತರ ಮಕ್ಕಳಿಗೆ ಗೌರವಯುತವಾದ ಬದುಕು ರೂಪಿಸಲು ಹೊಸ ಯೋಜನೆಗಳನ್ನು ಜಾರಿಗೆ ತರಲು ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದ್ದು, ಅದನ್ನು ಶೀಘ್ರದಲ್ಲಿಯೇ ಜಾರಿಗೆ ತರಲಾಗುವುದು ಎಂದರು.

ಈ ಸಂದರ್ಭದಲ್ಲಿ ನಿಗಮದಿಂದ ಸಾಲ ಪಡೆದು ಸ್ವ-ಉದ್ಯೋಗವನ್ನು ಸೃಷ್ಟಿಸಿಕೊಂಡು ಯಶಸ್ವಿಯಾದ ಫಲಾನುಭವಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್ ಶೇಷಪ್ಪ, ಲೀಡ್‌ಬ್ಯಾಂಕ್ ಮ್ಯಾನೇಜರ್ ಸಿ ರುದ್ರೇಶ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಸುವರ್ಣ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

2 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

2 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

2 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

3 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

4 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

4 hours ago