Featured

ಉಡುಪಿ: ಸರಕಾರಿ ನೌಕರರ ವಸತಿ ಗೃಹಗಳಿಗೆ ನುಗ್ಗಿದ ಕಳ್ಳರು ; ಅಪಾರ ಮೌಲ್ಯದ ನಗ-ನಗದು ಕಳವು  – vishwanews24

ಉಡುಪಿ: ಸರಕಾರಿ ನೌಕರರ ವಸತಿ ಗೃಹಗಳಿಗೆ ನುಗ್ಗಿದ ಕಳ್ಳರು ; ಅಪಾರ ಮೌಲ್ಯದ ನಗ-ನಗದು ಕಳವು

ಉಡುಪಿ: ಉಡುಪಿ ನಗರದ ಮಿಷನ್ ಕಾಂಪೌಂಡ್ ಬಳಿ ಇರುವ ಸರಕಾರಿ ನೌಕರರ ವಸತಿ ಗೃಹಗಳಿಗೆ ರವಿವಾರ ರಾತ್ರಿ ನುಗ್ಗಿದ ಕಳ್ಳರು, ಅಪಾರ ಮೌಲ್ಯದ ನಗ-ನಗದು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ಉಡುಪಿ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಈ ವಸತಿ ಸಮುಚ್ಚಯದಲ್ಲಿ ವಿವಿಧ ಇಲಾಖೆಗಳ ಸರಕಾರಿ ನೌಕರರ ಕುಟುಂಬಗಳು ವಾಸವಾಗಿವೆ. ಎರಡು ದಿನಗಳ ಕಾಲ ರಜೆ ಇದ್ದ ಕಾರಣ ಇಲ್ಲಿನ ಕುಟುಂಬಗಳು ತಮ್ಮ ಊರಿಗೆ ತೆರಳಿದ್ದವು ಎಂದು ತಿಳಿದುಬಂದಿದೆ.

ಮನೆಯಲ್ಲಿ ಯಾರು ಇಲ್ಲದ ದಿನಗಳಲ್ಲಿ ಈ ಸಮುಚ್ಚಯದಲ್ಲಿನ ಆರು ಮನೆಗಳ ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದಾರೆನ್ನಲಾಗಿದೆ. ಆರು ಮನೆಗಳ ಪೈಕಿ ಎರಡು ಮನೆಗಳಲ್ಲಿನ ಚಿನ್ನಾಭರಣ, ಮತ್ತೆರಡು ಮನೆಗಳಲ್ಲಿನ ನಗದು ಕಳವಾಗಿದ್ದು ಉಳಿದ ಎರಡು ಮನೆಗಳಲ್ಲಿ ಕಳವಿಗೆ ಯತ್ನ ನಡೆಸಿರುವುದಾಗಿ ವರದಿಯಾಗಿದೆ.’

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

16 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago