Featured

ಉಡುಪಿ: ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್ ;  ಬಗೆಹರಿಯದ ಸ್ಕಾರ್ಫ್ ವಿವಾದ – ಹಿಜಾಬ್ ಧರಿಸುವ ಹಕ್ಕಿದೆ ಎಂದು ಪಟ್ಟು ಹಿಡಿದ ವಿದ್ಯಾರ್ಥಿನಿಯರು – Vishwanews24

ಉಡುಪಿ: ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್ ;  ಬಗೆಹರಿಯದ ಸ್ಕಾರ್ಫ್ ವಿವಾದ – ಹಿಜಾಬ್ ಧರಿಸುವ ಹಕ್ಕಿದೆ ಎಂದು ಪಟ್ಟು ಹಿಡಿದ ವಿದ್ಯಾರ್ಥಿನಿಯರು – Vishwanews24

ಉಡುಪಿ,: ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿನ ಸ್ಕಾರ್ಫ್ ವಿವಾದ ಕಳೆದ ಮೂರು ವಾರಗಳಿಂದಲೂ ಬಗೆಹರಿದಿಲ್ಲ.ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ತಮ್ಮ ಬೇಡಿಕೆ ಸಡಿಲಗೊಳಿಸದೆ , ಹಿಜಾಬ್ ಧರಿಸುವ ಹಕ್ಕಿದೆ ಎಂದು ಪಟ್ಟು ಹಿಡಿದಿದ್ದಾರೆ.

ಹಿಜಾಬ್ ಧರಿಸಿ ತರಗತಿಗೆ ಪ್ರವೇಶ ಇಲ್ಲದ ಹಿನ್ನಲೆ ಕಾಲೇಜಿನ ಮುಂಭಾಗದಲ್ಲಿ ಸ್ಕಾರ್ಫ್ ವಿವಾದದ ಕುರಿತು ಗುರುವಾರ ಮಾಧ್ಯಮದೊಂದಿಗೆ ಮಾತನಾಡಿದ ವಿದ್ಯಾರ್ಥಿನಿ ಆಲಿಯಾ ಅಸಾದಿ, “ನಮಗೆ ಶಿಕ್ಷಣವು ಬೇಕು, ನಮ್ಮ ಹಿಜಾಬ್ ಕೂಡ ಬೇಕು. ಪ್ರಥಮ ವರ್ಷ ಹಿಜಾಬ್ ಹಾಕಲು ಪೋಷಕರು ಬಂದು ಮಾತನಾಡಿದ್ದರು. ಆದರೆ ಅನುಮತಿ ನೀಡಿಲ್ಲ. ನಮ್ಮ ಸಮವಸ್ತ್ರದ ಶಾಲಿನಿಂದಲೇ ಸ್ಕಾರ್ಫ್ ಹಾಕಲು ತಯಾರಿದ್ದೇವೆ. ಅದಕ್ಕೂ ಒಪ್ಪಿಗೆ ನೀಡಿಲ್ಲ. ನಂತರ ಲಾಕ್ ಡೌನ್ ಆಯಿತು, ದ್ವಿತೀಯ ವರ್ಷ ಭೌತಿಕ ತರಗತಿ ಆರಂಭ ಆದಾಗ ಮತ್ತೆ ಈ ಗೊಂದಲ ಆರಂಭ ಆಗಿದೆ. ಮೂರು ವಾರಗಳು ಇದೇ ರೀತಿ ಕಳೆದು ಹೋಯ್ತು. ಒಟ್ಟಾರೆಯಾಗಿ ನ್ಯಾಯ ಒದಗಿಸಬೇಕು. ನಾವು ತರಗತಿ ಹಾಜರಾಗಲು ಅನುವು ಮಾಡಿಕೊಡಬೇಕು ” ಎಂದು ಆಗ್ರಹಿಸಿದ್ದಾರೆ.

“ಹಿಜಾಬ್ ಹಾಕುವುದು ನಮ್ಮ ಸಂಪ್ರದಾಯ,ಮೊದಲಿನಿಂದಲೂ ಹಿಜಾಬ್ ಧರಿಸಿದರೆ ಕಾಲೇಜು ಆಡಳಿತದಿಂದಲೇ ದೌರ್ಜನ್ಯ ನಡೆಸಲಾಗುತ್ತಿದೆ. ಇದೇ ವಿಚಾರವಾಗಿ ಹಲವು ದಿನಗಳಿಂದ ಮಾನಸಿಕ ಹಿಂಸೆ ನೀಡುತ್ತಿದ್ದಾರೆ.ವಾರದಲ್ಲಿ ನಾಲ್ಕೈದು ಬಾರಿ ಪೋಷಕರ ಸಭೆ ಕರೆಯುತ್ತಾರೆ. ಎಲ್ಲರೂ ನಮ್ಮ ಬೆಂಬಲಕ್ಕೆ ನಿಂತಿದ್ದಾರೆ. ತರಗತಿ ಗೈರು ಹಾಜರಾಗಿದ್ದಕ್ಕೆ ಅನಾರೋಗ್ಯದ ಬಗ್ಗೆ ಕಾರಣ ಹಾಕಿ ಪತ್ರ ಬರೆಸಿದ್ದಾರೆ. ಇದನ್ನು ನಾವು ಒಪ್ಪುವುದಿಲ್ಲ” ಎಂದು ವಿದ್ಯಾರ್ಥಿನಿ ಆಲಿಯಾ ಬಾನು ಆರೋಪಿಸಿದ್ದಾರೆ.

ಇದೇ ವೇಳೆ ಐವರು ವಿದ್ಯಾರ್ಥಿನಿಯರು, ಹಿಜಾಬ್ ಧರಿಸುವ ಹಕ್ಕಿನ ಬಗ್ಗೆ ಕಾಲೇಜು ಗೇಟ್‌ ಮುಂದೆ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago