ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಆರೋಪಗಳಿಗೆ ಪ್ರತ್ಯುತ್ತರ ನೀಡುವ ನಿಟ್ಟಿನಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತಾಲೂಕು ಕಚೇರಿ ಮುಂಭಾಗದಲ್ಲಿ ‘ಸತ್ಯ ಮೇವ ಜಯತೆ’ ಬೃಹತ್ ಪ್ರತಿಭಟನಾ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕಾರ್ಕಳ ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಭದ್ ರಾವ್ ನೇತೃತ್ವದ ತಂಡ ಹಾಡಿನ ಮೂಲಕ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿತು.
ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮರೋಳ್ಳಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಬಿಜೆಪಿಯವರೂ ಪಡೆಯುತ್ತಿದ್ದಾರೆ. ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿಸುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಆದ್ಯತೆ ನೀಡಿದೆ. ಅಂಗನವಾಡಿ ಸಹಾಯಕಿಯರ ಗೌರವಧನ ಹೆಚ್ಚಳ ಸೇರಿದಂತೆ ಹಲವು ಜನಪರ ಕ್ರಮಗಳನ್ನು ಕೈಗೊಂಡಿದೆ ಎಂದರು.
ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನೀಡದ ಮೂಲಕ ಬಿಜೆಪಿ ಅವಮಾನ ಮಾಡಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿ ಮಾತನಾಡಿ, ಟೆಂಪಲ್ ಟೂರಿಸಂ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಸರ್ಕಾರ ಕೊಡುಗೆ ನೀಡಿದೆ. ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಆರ್ಥಿಕ ಭದ್ರತೆ ಕಲ್ಪಿಸಲಾಗುತ್ತಿದೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರದ ನೀತಿಗಳಿಂದ ಬೆಲೆ ಏರಿಕೆಯಾಗಿದೆ ಎಂದು ಟೀಕಿಸಿದರು.
ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಕಾರ್ಕಳ ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಮಹತ್ವದ ಕೊಡುಗೆ ನೀಡಿದೆ. ನೋಟು ಅಮಾನ್ಯೀಕರಣ, ಜಿಎಸ್‌ಟಿ, ಬೆಲೆ ಏರಿಕೆ ಸೇರಿದಂತೆ ಕೇಂದ್ರ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ನಿರಂತರವಾಗಿ ಹೋರಾಟ ನಡೆಸಿದೆ. ಮತಗಳ್ಳತನ ಹಾಗೂ ಎಸ್‌ಐಆರ್ ಸೇರಿದಂತೆ ವಿವಿಧ ವಿಚಾರಗಳಲ್ಲಿಯೂ ಪ್ರತಿಭಟನೆ ನಡೆಸಲಾಗಿದೆ ಎಂದರು.
ರಾಮನ ಹೆಸರಿನಲ್ಲಿ ಹಣ ಲೂಟಿ ಮಾಡಿದವರು ಬಿಜೆಪಿಯವರು ಎಂದು ಆರೋಪಿಸಿದ ಅವರು, ಸಂವಿಧಾನವನ್ನು ಬದಲಾಯಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ಟೀಕಿಸಿದರು. ಧರ್ಮ ಮತ್ತು ದೇವರ ಹೆಸರಿನಲ್ಲಿ ಮತ ಕೇಳುವ ಬಿಜೆಪಿ, ದೇಶದ ನಾಗರಿಕರ ಪೌರತ್ವವನ್ನೇ ಪ್ರಶ್ನಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಸೇರಿದಂತೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಕಾರ್ಕಳ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ, ವಾಗ್ಮಿ ಲಕ್ಷ್ಮೀಶ್ ಕಮಲಡ್ಕ, ನಾರಾಯಣ ಗುರು ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಶಂಕರ್ ಶೇರಿಗಾರ್, ಸುಧಾಕರ ಕೋಟ್ಯಾನ್, ರವಿಶಂಕರ್, ಬಿಪಿನ್ ಚಂದ್ರಪಾಲ್, ರಮೇಶ್ ಕಾಂಚನ್, ಶೇಖರ ಮಡಿವಾಳ, ವಿಶ್ವಾಸ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರದೀಪ್ ಬೆಲಾಡಿ ಹಾಗೂ ಹರೀಶ್ ಕಿಣಿ ನಿರೂಪಿಸಿದರು.
ಸರ್ಕಾರಿ ನೌಕರರ ಬಡ್ತಿಗೆ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ: ತಮಿಳುನಾಡು ಸರ್ಕಾರದಿಂದ ಮಹತ್ವದ ಆದೇಶ ಚೆನ್ನೈ,: ರಾಜ್ಯದ ಎಲ್ಲಾ ಸರ್ಕಾರಿ…
ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ ಘೋಷಣೆ ಜೆರುಸಲೇಂ: ಫ್ಲೈದುಬೈ ವಿಮಾನದ ಅವಘಡ ತಪ್ಪಿಸಿ 174 ಪ್ರಯಾಣಿಕರ…
ಬೆಂಗಳೂರು: ಸೇತುವೆ ನಿರ್ಮಾಣ ಕಾಮಗಾರಿ ಹಿನ್ನೆಲೆ ; ಬಸವನಗರ ಮುಖ್ಯರಸ್ತೆ 20 ದಿನ ಬಂದ್ ಬೆಂಗಳೂರು: ಕೆರೆ ಕಾಲುವೆಗೆ ಸೇತುವೆ…
ರಾಜ್ಯಾದ್ಯಂತ 45 ಐಸ್‌ಕ್ರೀಂ ಘಟಕಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಹಲವು ಕಡೆ ನಿಯಮ ಉಲ್ಲಂಘನೆ ಪತ್ತೆ 70…
ಮೈಸೂರು ದಸರಾಕ್ಕೆ ಕೇಮಾರು ಶ್ರೀ ಸಹಿತ ಜಿಲ್ಲೆಯ ಸ್ವಾಮೀಜಿಗಳಿಗೆ ಆಹ್ವಾನ ನೀಡಿದ ಮುಖ್ಯಮಂತ್ರಿ ಡಿಕೆಶಿ ಮೂಡುಬಿದಿರೆ : ಅ.11 ರಂದು…
ಮಂಜನಾಡಿ ಗುಡ್ಡ ಕುಸಿತ ದುರಂತಕ್ಕೆ ಒಂದೂವರೆ ವರ್ಷ: ಇನ್ನೂ ದಾಖಲಾಗದ ಎಫ್‌ಐಆರ್ ಮಂಗಳೂರು: ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಉರು…