Featured

ಉಡುಪಿ: ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ವ್ಯಕ್ತಿ ನಾಪತ್ತೆ – Vishwanews24

ಉಡುಪಿ: ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ವ್ಯಕ್ತಿ ನಾಪತ್ತೆ

ಉಡುಪಿ: ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ಬೆಳ್ಳಂಪಳ್ಳಿ ಗ್ರಾಮದ ಗೋಪಾಲ ಕಾಮತ್ ಅವರ ಪುತ್ರ ಜಯರಾಮ್ ಕಾಮತ್ (46) ನಾಪತ್ತೆಯಾದವರು. ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ಜಯರಾಮ್ ಅವರನ್ನು ಕಾಯಿಲೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಫೆಬ್ರವರಿ 16ರಂದು ಉಡುಪಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಜಯರಾಮ್ ಅವರೊಂದಿಗೆ ಅವರ ಸಹೋದರ ಶ್ರೀಪತಿ ಕಾಮತ್ ಹಗಲು ಹೊತ್ತಿನಲ್ಲಿ ಆರೈಕೆಯಲ್ಲಿದ್ದರು. ಫೆಬ್ರವರಿ 21ರಂದು ಮಧ್ಯಾಹ್ನ 3.30ಕ್ಕೆ ಶ್ರೀಪತಿ ಕಾಮತ್ ಅವರು ಮನೆಗೆ ತೆರಳಿದ್ದರು. ಮರುದಿನ ಮತ್ತೆ ಆಸ್ಪತ್ರೆಗೆ ಹೋದಾಗ ಅಲ್ಲಿ ಜಯರಾಮ್ ಕಾಮತ್ ಇರಲಿಲ್ಲ.

ಇದರಿಂದ ಆತಂಕಿತರಾದ ಶ್ರೀಪತಿ ಕಾಮತ್ ವಿವಿಧೆಡೆ ಹುಡುಕಾಡಿದ್ದಾರೆ. ಇತ್ತ ಜಯರಾಮ್ ಕಾಮತ್ ಅವರು ಮನೆಗೂ ಬಾರದೆ, ಸಂಬಂಧಿಕರ ಮನೆಗೂ ಹೋಗದೆ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

8 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

8 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

9 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

9 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

9 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

10 hours ago