Featured

ಉಡುಪಿ ಸರ್ಕಾರಿ ಕಾಲೇಜು ಬುರ್ಕಾ/ಸ್ಕಾರ್ಫ್ ವಿವಾದ- ಫೀಲ್ಡ್ ಗೆ ಇಳಿದೆ ಬಿಡ್ತು ಹಿಂದು ಜಾಗರಣ ವೇದಿಕೆ : vishwanews24

ಉಡುಪಿ ಸರ್ಕಾರಿ ಕಾಲೇಜು ಬುರ್ಕಾ/ಸ್ಕಾರ್ಫ್ ವಿವಾದ- ಫೀಲ್ಡ್ ಗೆ ಇಳಿದೆ ಬಿಡ್ತು ಹಿಂದು ಜಾಗರಣ ವೇದಿಕೆ : vishwanews24

ಉಡುಪಿ: ಉಡುಪಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಚರ್ಚೆಗೆ ಒಳಗಾಗಿರುವ ಬುರ್ಕಾ ವಿವಾದಕ್ಕೆ ಹೊಸ ಬಣ್ಣಕ್ಕೆ ತಿರುಗುತ್ತಿರುವ ಸಮಯದಲ್ಲಿ ಉಡುಪಿ ಜಿಲ್ಲೆಯ ಹಿಂದೂ ಜಾಗರಣ ವೇದಿಕೆ ಇದರ ವಿರುದ್ಧ ಪತ್ರಿಕಾ ಪ್ರಕಟಣೆ ಮಾಡುವ ಮುಖಾಂತರ ಫೀಲ್ಡ್ ಗೆ ಎಂಟ್ರಿ ಕೊಟ್ಟಂತಿದೆ.
ಇಂದು ಜಾಗರಣ ವೇದಿಕೆಯ ಪತ್ರಿಕಾ ಪ್ರಕಟಣೆ ಹೊರಬಿದಿದ್ದು ಸದ್ಯ ಎಲ್ಲಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಪ್ರಕಟನೆಯ ವರದಿ ಹೀಗಿದೆ ” ಶಾಲಾ ಸಮವಸ್ತದ ಹಾಗೂ ಬುರ್ಕಾ/ಹಿಜಾಬ್ ವಿವಾದ ಕುರಿತು

“ಜಿಲ್ಲೆಯ ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಹೆಗ್ಗುರುತಾಗಿದ್ದ ಸಮವಸ್ತ್ರಧಾರಣೆ ಕುರಿತು ಕೆಲ ಮತೀಯ ಸಂಘಟನೆಗಳು, ಶಾಲಾ ಶೈಕ್ಷಣಿಕ ಸಾಮರಸ್ಯವನ್ನು ಕದಡುವ ಉದ್ದೇಶದಿಂದ ಒಂದು ಕೋಮಿನ ವಿದ್ಯಾರ್ಥಿಗಳನ್ನು ಪ್ರಚೋದನೆಗೆ ಒಳಪಡಿಸಿ ಬುರ್ಕಾ/ಹಿಜಾಬ್ ಧಲಸಿ ಕಾಲೇಜಿನ ಆವರಣದೊಳಗೆ ಪ್ರವೇಶಿಸಲು ಪ್ರಯತ್ನಿಸುವ ಘಟನೆಗಳು ನಡೆಯುತ್ತಿದೆ. ಅಲ್ಲದೆ ದಿನದಿಂದ ದಿನಕ್ಕೆ ಹಿಜಾಬ್ ವಿಷಯವನ್ನು ನೆಪವಾಗಿಸಿಕೊಂಡು ಇದೊಂದು ಅಂತರಾಷ್ಟ್ರೀಯ ಮಟ್ಟದ ಸಮಸ್ಯೆ ಎನ್ನುವ ರೀತಿಯಲ್ಲಿ ಬಿಂಬಿಸುವ ಕೆಲಸವೂ ನಡೆಯುತ್ತಿದ್ದು, ಇದರ ಹಿಂದೆ ಕೆಲ ಮತೀಯ ಸಂಘಟನೆಗಳ ಕೈವಾಡವಿರುವುದು ಕೂಡ ಜಗಜ್ಜಾಹೀರಾಗಿದೆ. ಈಗಾಗಲೇ ಈ ಮೇಲಿನ ಘಟನೆಗಳನ್ನು ಹಿಂದು ಜಾಗರಣ ವೇದಿಕೆ ಗಂಭೀರವಾಗಿ ಪರಿಗಣಿಸಿದ್ದು,ಒಂದು ವೇಳೆ ಸರಕಾರ ಹಾಗೂ ಶಿಕ್ಷಣ ಇಲಾಖೆ ಈ ಷಡ್ಯಂತ್ರದ ಒತ್ತಡಕ್ಕೆ ಮಣಿದು ಹಿಜಾಬ್ ದಲಿಸಲು ಅವಕಾಶ ನೀಡಿದ್ದೇ ಹೌದಾದಲ್ಲಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳ ಹಿಂದು ವಿದ್ಯಾರ್ಥಿಗಳನ್ನು ಸಂಘಟಿಸಿ ಸಮವಸ್ತ್ರದ ಜೊತೆಗೆ ಕೇಸರಿ ಶಲ್ಯ ಧರಿಸುವ ಅಭಿಯಾನವನ್ನು ಕೈಗೊಳ್ಳಲಿದೆ ಎನ್ನುವ ನೇರ ಎಚ್ಚರಿಕೆಯನ್ನು ಸಂಬಂಧ ಪಟ್ಟ ಇಲಾಖೆಗೆ ನೀಡುತ್ತಿದೆ.”
ಹಿಂದು ಜಾಗರಣ ವೇದಿಕೆ ಉಡುಪಿ ಜಿಲ್ಲೆ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago