Featured

ಉಡುಪಿ ಸರ್ಕಾರಿ ಕಾಲೇಜ್ ಸ್ಕಾರ್ಫ್ ವಿವಾದ : ಈ ಅಭ್ಯಾಸವು ಅಶಿಸ್ತು ಮತ್ತು ಶಾಲೆ ಕಾಲೇಜುಗಳು ಧರ್ಮವನ್ನು ಆಚರಿಸುವ ಸ್ಥಳವಲ್ಲ : ಶಿಕ್ಷಣ ಸಚಿವ ಬಿ. ಸಿ. ನಾಗೇಶ್ – Vishwanews24

ಉಡುಪಿ ಸರ್ಕಾರಿ ಕಾಲೇಜ್ ಸ್ಕಾರ್ಫ್ ವಿವಾದ : ಈ ಅಭ್ಯಾಸವು ಅಶಿಸ್ತು ಮತ್ತು ಶಾಲೆ ಕಾಲೇಜುಗಳು ಧರ್ಮವನ್ನು ಆಚರಿಸುವ ಸ್ಥಳವಲ್ಲ : ಶಿಕ್ಷಣ ಸಚಿವ ಬಿ. ಸಿ. ನಾಗೇಶ್ – Vishwanews24

ಬೆಂಗಳೂರು : ಉಡುಪಿ ಜಿಲ್ಲೆಯ ಸರ್ಕಾರಿ ಕಾಲೇಜಿನಲ್ಲಿ ತರಗತಿಯ ಸಮಯದಲ್ಲಿಯೂ ಸ್ಕಾರ್ಫ್ (ಹಿಜಾಬ್) ಧರಿಸಲು ಅವಕಾಶ ನೀಡಬೇಕು ಎಂಬ ಬೇಡಿಕೆ ಇಡಲಾಗಿದೆ. ಕೆಲವು ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಈ ಕುರಿತು ಬೇಡಿಕೆ ಇಟ್ಟು ಮೂರು ವಾರಗಳಿಂದ ತರಗತಿಯಿಂದ ಹೊರಗೆ ಉಳಿದಿದ್ದಾರೆ.

ವಿದ್ಯಾರ್ಥಿಗಳು ಗುರುವಾರ ಬೆಳಗ್ಗೆ ಕಾಲೇಜು ಗೇಟ್‌ ಬಳಿ ‘ಹಿಜಾಬ್ ನನ್ನ ಹಕ್ಕು, ಅದನ್ನು ಪಡೆದೆ ತೀರುತ್ತೇವೆ’ ಎಂಬ ಫಲಕಗಳೊಂದಿಗೆ ಪ್ರತಿಭಟನೆ ನಡೆಸಿದರು. ಈ ಬಳಿಕ ಸಮಸ್ಯೆ ಮತ್ತಷ್ಟು ಜಟಿಲಗೊಂಡಿದೆ. ಈಗ ಶಿಕ್ಷಣ ಸಚಿವರು ಸಹ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಶಿಕ್ಷಣ ಸಚಿವರ ಹೇಳಿಕೆ; ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಈ ಕುರಿತು ಮಾತನಾಡಿದ್ದು, “ಈ ಅಭ್ಯಾಸವು ಅಶಿಸ್ತು ಆಗಿದೆ ಮತ್ತು ಶಾಲೆಗಳು ಮತ್ತು ಕಾಲೇಜುಗಳು ಧರ್ಮವನ್ನು ಆಚರಿಸುವ ಸ್ಥಳವಲ್ಲ” ಎಂದು ತಿಳಿಸಿದ್ದಾರೆ.

“ಕಾಲೇಜಿನ ಕ್ಯಾಂಪಸ್‌ನಲ್ಲಿರುವ ಕೆಲವು ಜನರು ಈ ವಿಚಾರವನ್ನು ರಾಜಕೀಯಗೊಳಿಸುತ್ತಿದ್ದಾರೆ. 2023ರಲ್ಲಿ ಚುನಾವಣೆ ಹಿನ್ನಲೆಯಲ್ಲಿ ಅನಗತ್ಯವಾಗಿ ಗೊಂದಲ ಎಬ್ಬಿಸುತ್ತಿದ್ದಾರೆ. ವಿದ್ಯಾರ್ಥಿಗಳು ಈಗ ಸಾಂವಿಧಾನಿಕ ಹಕ್ಕುಗಳನ್ನು ಏಕೆ ಅಭ್ಯಾಸ ಮಾಡಲು ಬಯಸುತ್ತಾರೆ?” ಎಂದು ಪ್ರಶ್ನಿಸಿದ್ದಾರೆ.

ಆದರೆ ವಿದ್ಯಾರ್ಥಿಗಳು ನಾವು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ಪ್ರಭಾವಿತರಾಗಿಲ್ಲ. ನಾವು ಅದರ ಭಾಗವಾಗಿಲ್ಲ. ನಮಗೆ ಸಕಾರಾತ್ಮಕವಾದ ಯಾವುದೇ ಪ್ರತಿಕ್ರಿಯೆ ಸಿಗದ ಕಾರಣ ನಾವು ಸಿಎಫ್‌ಐ ಸಂಪರ್ಕಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

“ಕಾಲೇಜಿನಲ್ಲಿ ದಾಖಲಾದ 100ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಇಲ್ಲ ಮತ್ತು ಈ ವಿದ್ಯಾರ್ಥಿಗಳು ಮಾತ್ರ ವಸ್ತ್ರ ಸಂಹಿತೆ ಪಾಲಿಸಲು ಬಯಸುವುದಿಲ್ಲ. ಶಾಲೆಯು ಧರ್ಮವನ್ನು ಅಭ್ಯಾಸ ಮಾಡುವ ಸ್ಥಳವಲ್ಲ” ಎಂದರು.

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ. ವಿದ್ಯಾರ್ಥಿಗಳು ನಿಯಮವನ್ನು ಅನುಸರಿಸಿದ್ದರು. ಆದರೆ ಈಗ ಅವರಿಗೆ ಸಮಸ್ಯೆ ಆಗಿದೆ. ಈಗ ಸಾಂವಿಧಾನಿಕ ಹಕ್ಕುಗಳನ್ನು ಪಾಲಿಸಲು ಅವರು ಬಯಸುತ್ತಾರೆ. ಅಶಿಸ್ತು ಹಕ್ಕಾಗುವುದಿಲ್ಲ” ಎಂದು ಸಚಿವರು ತಿಳಿಸಿದ್ದಾರೆ.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

2 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

2 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

2 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

2 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

3 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago