ಉಡುಪಿಯಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಆಯೋಜಿಸಿರುವ ಸರ್ಕಾರದ ಗ್ಯಾರಂಟಿ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಕರೆತರುವಂತೆ ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆಯ ಮೂಲಕ ಒತ್ತಡ ಹೇರುತ್ತಿರುವ ಸರ್ಕಾರದ ವಿರುದ್ಧ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದ ಪರೀಕ್ಷೆಗೆ ತಯಾರಿ ನಡೆಸುವ ಸಂದರ್ಭದಲ್ಲಿ ಸರಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ.
ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದರೆ ಸಮಾವೇಶಕ್ಕೆ ಫಲಾನುಭವಿಗಳ ಬದಲು ವಿದ್ಯಾರ್ಥಿಗಳನ್ನು ಕರೆತರಲು ಶಾಲಾ ಕಾಲೇಜು ಮುಖ್ಯಸ್ಥರಿಗೆ ಒತ್ತಡ ಹೇರುವ ಸಂದರ್ಭ ಸೃಷ್ಟಿಯಾಗಿರುವುದು ರಾಜ್ಯ ಸರಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ.
ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಣ ವ್ಯವಸ್ಥೆಯ ಅಭಿವೃದ್ಧಿಗೆ ಯಾವುದೇ ವಿಶೇಷ ಯೋಜನೆ ರೂಪಿಸದ ಸರ್ಕಾರ ಸಮಾವೇಶಕ್ಕೆ ಮಾತ್ರ ವಿದ್ಯಾರ್ಥಿಗಳನ್ನು ಬಳಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದ್ದು, ವಿದ್ಯಾರ್ಥಿಗಳ ಪೋಷಕರು ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…