ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರು ಮಂಡಿಸಿದ 2022-23ನೇ ಸಾಲಿನ ಬಜೆಟ್ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಧ್ಯೇಯದೊಂದಿಗೆ ಜನಪರವಾಗಿದ್ದು ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಸರ್ವರಿಗೂ ಸಮಪಾಲು ಸಮಬಾಳು ಸಿದ್ದಾಂತದಲ್ಲಿ ಬಜೆಟ್ ಮಂಡಿಸಿದ್ದಾರೆ.
ಕರಾವಳಿ ಜಿಲ್ಲೆಯ ಮೀನುಗಾರಿಕೆ ಬಂದರು ಅಭಿವೃದ್ಧಿಗೆ ಗರಿಷ್ಠ ಅನುದಾನ, ವಸತಿ ರಹಿತ ಮೀನುಗಾರರಿಗೆ 5000 ವಸತಿ ನಿರ್ಮಾಣ, ಮತ್ಸ್ಯ ಸಿರಿ ಯೋಜನೆಯ ಮೂಲಕ ಅಳ ಸಮುದ್ರ ಮೀನುಗಾರಿಕೆ ಉತ್ತೇಜನ ನೀಡಲು ಮುಂದಾಗಿರುವುದು ಶ್ಲಾಘನೀಯ.
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ, ಶ್ರೀ ನಾರಾಯಣ ಗುರು ವಸತಿ ಶಾಲೆಗಳ ನಿರ್ಮಾಣ, ಕಡಲ ತೀರದ ಪ್ರವಾಸೋದ್ಯಮ ಉತ್ತೇಜನಕ್ಕೆ ಮಾನದಂಡಗಳ ಸರಳೀಕರಣ, ಕಾರವಾರದಲ್ಲಿ ರಾಜ್ಯದ ಮೊದಲ ಜಲಸಾರಿಗೆ ಮತ್ತು ಮೀನುಗಾರಿಕೆ ತರಬೇತಿ ಸಂಸ್ಥೆ ಸ್ಥಾಪನೆ, ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರುಜಾರಿ, ಗೋ ಶಾಲೆಗಳ ಗೋವು ದತ್ತು ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಪುಣ್ಯ ಕೋಟಿ ದತ್ತು ಯೋಜನೆಗೆ ಚಾಲನೆ, ರಾಷ್ಟ್ರೀಯ ಶಿಕ್ಷಣ ನೀತಿ ಪರಿಣಾಮಕಾರಿ ಅನುಷ್ಠಾನಕ್ಕೆ ಪೂರಕವಾಗಿ ಶಾಲಾ ಕಾಲೇಜುಗಳ ಉನ್ನತೀಕರಣಕ್ಕೆ ಅನುದಾನ ಒದಗಿಸುವ ಮೂಲಕ ಜನಪರ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳಿಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…