ಉಡುಪಿ: ಸಹೋದರಿಯರಿಬ್ಬರು ನಾಪತ್ತೆ – vishwanews24

Featured, ಉಡುಪಿ

 ಉಡುಪಿ: ಸಹೋದರಿಯರಿಬ್ಬರು ನಾಪತ್ತೆ

  ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಏಪ್ರಿಲ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ಮಂಜುಳಾ (24 ವರ್ಷ), 5 ಅಡಿ 1 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ ಹಾಗೂ ಕಳೆದ 10 ವರ್ಷಗಳ ಹಿಂದೆ ಮದುವೆಯಾಗಿದ್ದು, ಕಳೆದ 2 ವರ್ಷಗಳಿಂದ ತವರು ಮನೆಯಲ್ಲಿಯೇ ವಾಸವಾಗಿರುತ್ತಾರೆ

ಮಲ್ಲಿಕಾ (18 ವರ್ಷ) 5 ಅಡಿ ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಇವರೂ ಸಹ ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ ಹಾಗೂ ಹತ್ತನೇ ತರಗತಿ ವರೆಗೆ ಶಾಲೆಗೆ ಹೋಗಿದ್ದು, ಬಳಿಕ ಮನೆಯಲ್ಲಿಯೇ ಇರುತ್ತಾರೆ. ಇವರಿಬ್ಬರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷರಿಗೆ ಮಾಹಿತಿ ನೀಡಬಹುದಾಗಿದೆ ಎಂದು ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ

ಉಡುಪಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗ್ಯಾಸ್ ದರ ಏರಿಕೆಯಾಗಿದೆ ಆದ್ದರಿಂದ ದರ ಏರಿಕೆ ಅನಿವಾರ್ಯ : ಅಣ್ಣಾ ಮಲೈ  – vishwanews24

 

Leave a Reply