ಉಡುಪಿ: ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಈಗ ಕಂಬಳದ ಸೀಸನ್ ಪ್ರಾರಂಭಗೊಂಡಿದೆ. ಈಗೀಗ ಸಾಂಪ್ರದಾಯಿಕ ಕಂಬಳಗಳ ಆಯೋಜನೆಗೂ ಲಕ್ಷಾಂತರ ರೂ. ಖರ್ಚಾಗುತ್ತಿದೆ. ಹೀಗಾಗಿ ಈ ಆಚರಣೆಯನ್ನು ಉಳಿಸಿ-ಬೆಳೆಸಲು ಸರಕಾರದ ಅನುದಾನ ಅಗತ್ಯವಿದೆ ಎಂದು ಸಾಂಪ್ರದಾಯಿಕ ಕಂಬಳ ಸಮಿತಿ ಸರಕಾರವನ್ನು ಒತ್ತಾಯಿಸಿದೆ.
ಉಡುಪಿ ಜಿಲ್ಲೆಯಲ್ಲಿ ವಂಡಾರು, ಕೊಡೇರಿ ಹಕ್ರೆಮಠ, ಉಳ್ಳೂರು, ಮಣೂರು, ಬಿಲ್ಲಾಡಿ, ಕೆರಾಡಿ, ಹೆಗ್ಗುಂಜೆ, ಎಲ್ಲೂರು, ಯಡ್ತಾಡಿ ಸಹಿತ 55 ರಿಂದ 60 ಕಡೆ ಸಾಂಪ್ರದಾಯಿಕ ಕಂಬಳಗಳು ನಡೆಯುತ್ತವೆ. ಜಿಲ್ಲೆಯ ಕಂಬಳಗಳಲ್ಲಿ ಶೇ.99 ರಷ್ಟು ಸಾಂಪ್ರದಾಯಿಕವೇ ಆಗಿವೆ.
ಸ್ಪರ್ಧಾ ಕಂಬಳಕ್ಕೆ ಈ ಹಿಂದೆ ಸರಕಾರ 5 ಲಕ್ಷ ರೂ. ತನಕ ಅನುದಾನ ನೀಡುತ್ತಿತ್ತು. ಆದರೆ ಉಡುಪಿ ಜಿಲ್ಲೆಯ ಸಾಂಪ್ರದಾಯಿಕ ಕಂಬಳಗಳಿಗೆ ಈ ತನಕ ಅನುದಾನ ನೀಡಿಲ್ಲ.ಸರಕಾರ ಈ ಅಧಿವೇಶನದಲ್ಲಿ ಈ ಬಗ್ಗೆ ಒಂದು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸಮಿತಿಯ ಅಧ್ಯಕ್ಷ ಸುಧಾಕರ ಹೆಗ್ಡೆ ಮತ್ತು ಕಾರ್ಯದರ್ಶಿ ಪೃಥ್ವಿರಾಜ್ ಒತ್ತಾಯ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…