Featured

ಉಡುಪಿ : ಸಾಕ್ಷರತೆಯಿಂದ ಹಕ್ಕುಗಳ ಬಗ್ಗೆ ಅರಿಯಲು ಸಾಧ್ಯ : ನ್ಯಾ.ಶರ್ಮಿಳಾ – Vishwanews24

ಉಡುಪಿ : ಸಾಕ್ಷರತೆಯಿಂದ ಹಕ್ಕುಗಳ ಬಗ್ಗೆ ಅರಿಯಲು ಸಾಧ್ಯ : ನ್ಯಾ.ಶರ್ಮಿಳಾ – Vishwanews24

ಉಡುಪಿ: ಯಾವುದೇ ವ್ಯಕ್ತಿ ಸಾಕ್ಷರನಾದರೆ ತನ್ನ ಹಕ್ಕುಗಳ ಬಗ್ಗೆ ಅರಿವು ಹೊಂದಲು ಸಾದ್ಯವಾಗುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಅಕ್ಷರ ಜ್ಞಾನ ಹೊಂದುವುದು ಅತ್ಯಂತ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಹೇಳಿದರು.

ಅವರು ಇಂದು ಕಾಜಾರಗುತ್ತು ನ ಜಿಲ್ಲಾ ಕಾರಾಗೃಹದಲ್ಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉಡುಪಿ , ಕಾರಾಗೃಹ ಮತ್ತು ಸುಧಾರಣಾ ಸೇವೆ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಉಡುಪಿ,ಜಿಲ್ಲಾ ಕಾರಾಗೃಹ ಉಡುಪಿ ಇವರ ಸಹಯೋಗದಲ್ಲಿ “ಶಿಕ್ಷಣದಿಂದ ಬದಲಾವಣೆ” ಕಾರಾಗೃಹದ ಅನಕ್ಷರಸ್ಥ ಹಾಗೂ ಅರೆ ಅನಕ್ಷರಸ್ಥ ಬಂಧಿಗಳಿಗೆ ಆಯೋಜಿಸಿದ್ದ ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಾಕ್ಷರತೆ ಪಡೆಯುವುದು ವ್ಯಕ್ತಿಯ ಘನತೆ ಹಾಗೂ ಹಕ್ಕು ಆಗಿದೆ. ವ್ಯಕ್ತಿ ಸಾಕ್ಷರತೆಯ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳಸಿಕೊಳ್ಳಬೇಕು, ಅನಕ್ಷರತೆಯಿಂದ ಬಡತನ, ಜನಸಂಖ್ಯೆ ನಿಯಂತ್ರಣ ಸಮಸ್ಯೆ,ಲಿಂಗ ಅಸಮಾನತೆ ಉಂಟಾಗಲಿದ್ದು,ಇದನ್ನು ತೊಡೆದು ಹಾಕಿ ದೇಶವನ್ನು ಸಮಗ್ರವಾಗಿ ಅಭಿವೃದ್ದಿಪಡಿಸಲು ಸಾಕ್ಷರತೆಯಿಂದ ಮಾತ್ರ ಸಾಧ್ಯ ಎಂದು ಆಭಿಪ್ರಾಯ ವ್ಯಕ್ತಪಡಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ, ಪ್ರತಿಯೊಬ್ಬರಿಗೂ ಕನಿಷ್ಠ ಓದುವ ಸಾಮರ್ಥ್ಯ ಅಗತ್ಯ ಇದರಿಂದ ತಮ್ಮ ದೈನಂದಿನ ವ್ಯವಹಾರಗಳನ್ನು ಸುಗಮವಾಗಿ ಮಾಡಲು ಸಾಧ್ಯ, ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡುವ ಜವಾಬ್ದಾರಿ ವಿದ್ಯಾವಂತರದ್ದಾಗಿದೆ. ವಯಸ್ಕರ ಶಿಕ್ಷಣ ಇಲಾಖೆಯಿಂದ ಸಿದ್ದಪಡಿಸಿರುವ ಪಠ್ಯವು ಅತ್ಯಂತ ಸರಳವಾಗಿದ್ದು, ಇದರಿಂದ 2 ತಿಂಗಳಲ್ಲಿ
ಅನಕ್ಷರಸ್ಥರು ಸಾಕ್ಷರರಾಗಲು ಸಾದ್ಯವಿದೆ ಎಂದರು.

ಜಿಲ್ಲಾ ಕಾರಾಗೃಹದಲ್ಲಿನ 7 ಮಂದಿ ಅನಕ್ಷರಸ್ಥರು ಮತ್ತು 20 ಮಂದಿ ಅರೆ ಅನಕ್ಷರಸ್ಥರಿಗೆ ಈ ತರಬೇತಿ ಆಯೋಜಿಸಲಾಗಿದೆ.
ಕಾರಾಗೃಹದಲ್ಲಿನ ಗ್ರಂಥಾಲಯವನ್ನು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಉದ್ಘಾಟಿಸಿದರು. ಎಎಸ್ಪಿ ಕುಮಾರ ಚಂದ್ರ ಕಾರಾಗೃಹದಲ್ಲಿನ ಅನಕ್ಷರಸ್ಥರು ಮತ್ತು ಅರೆ ಅನಕ್ಷರಸ್ಥರಿಗೆ ಕಲಿಕಾ ಪುಸ್ತಕಗಳನ್ನು ವಿತರಿಸಿದರು. ಹಿರಿಯ ವಕೀಲೆ ಅಮೃತಕಲಾ ಉಪಸ್ಥಿತರಿದ್ದರು. ಜಿಲ್ಲಾ ಕಾರಾಗೃಹದ ಅಧೀಕ್ಷಕ ಶ್ರೀನಿವಾಸ್ ಸ್ವಾಗತಿಸಿ ನಿರೂಪಿಸಿದರು. ಸಂಜಯ್ ಕುಮಾರ್ ವಂದಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

22 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago