Featured

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ: ಎಸ್ಪಿ ಎನ್ ವಿಷ್ಣುವರ್ಧನ ಎಚ್ಚರಿಕೆ – Vishwanews24

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ: ಎಸ್ಪಿ ಎನ್ ವಿಷ್ಣುವರ್ಧನ ಎಚ್ಚರಿಕೆ

ಉಡುಪಿ: ನೆರೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಮಂದಿ ಪ್ರಚೋದನಕಾರಿ ಹೇಳಿಕೆಗಳನ್ನು ಹಾಕುತ್ತಿರುವ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಗಂಭೀರವಾಗಿ ಪರಿಗಣಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಾಕಾರಿ ಸಂದೇಶ ಅಥವಾ ಹೇಳಿಕೆಗಳನ್ನು ಹಾಕಿದಲ್ಲಿ ಅಂತವರ ವಿರುದ್ದ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ ಅವರು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು ಫೇಸ್ ಬುಕ್, ವಾಟ್ಸಾಪ್, ಟ್ವಿಟ್ಟರ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಹಾಗೂ ಪರಸ್ಪರ ಗುಂಪಿನ ನಡುವೆ ದ್ವೇಷ ಭಾವನೆ ಬರುವಂತಹ ಪ್ರಚೋದನಕಾರಿ ಹೇಳಿಕೆ (ಪೋಸ್ಟ್) ಗಳನ್ನು ಹಾಕುವವರ/ಫಾರ್ವರ್ಡ್ ಮಾಡುವವರ ವಿರುದ್ದವೂ ಕಾನೂನು ರೀತಿಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಈ ಬಗ್ಗೆ ವಾಟ್ಸಪ್, ಗ್ರೂಪ್ ಅಡ್ಮಿನ್ ಗಳು ಬಳಕೆದಾರರು ಹಾಗೂ ಸಂದೇಶಗಳನ್ನು ಫಾರ್ವರ್ಡ್ ಮಾಡುವವರು ಸೂಕ್ತ ಎಚ್ಚರಿಕೆಯನ್ನು ವಹಿಸುವುದು ಹಾಗೂ ವಾಟ್ಸಾಪ್ ಗ್ರೂಪ್ ಅಡ್ಮಿನ್ ಗಳು ತಮ್ಮ ಗುಂಪಿನ ಸದಸ್ಯರಿಗೆ ಸೂಕ್ತ ತಿಳುವಳಿಕೆ ನೀಡಬೇಕು.

ಸಂಘಟನೆ, ವ್ಯಕ್ತಿಗಳು ಸೇರಿದಂತೆ ಸಾಮಾಜಿಕ ಜಾಲ ತಾಣದಲ್ಲಿ ಸಕ್ರಿಯವಾಗಿರುವ ನಾನಾ ವ್ಯಕ್ತಿಗಳು, ಗುಂಪುಗಳ ಮೇಲೆ ಕಠಿಣ ನಿಗಾ ಇರಿಸಲಾಗಿದೆ. ಆನ್ಲೈನ್ ಮಾಧ್ಯಮ, ವೆಬ್ ಪೇಜ್, ಮುದ್ರಣ ಮಾಧ್ಯಮ ಮೇಲೂ ನಿಗಾ ವಹಿಸಲಾಗಿದೆ.

ಸಾಮಾಜಿಕ ಜಾಲತಾಣಗಳ ಮೂಲಕ ಕೋಮು ಭಾವನೆ ಸೃಷ್ಟಿಸಿ, ಜಾತಿ ಧರ್ಮಗಳ ನಡುವೆ ಸಂಘರ್ಷಕ್ಕೆ ಎಡೆ ಮಾಡಿಕೊಡುವ ಫೋಸ್ಟ್ಗಳ ಮೇಲೆ ನಿಗಾ ವಹಿಸಲಾಗುತ್ತಿದ್ದು, ಇಂತಹ ಪೋಸ್ಟ್ಗಳನ್ನು ಲೈಕ್, ಶೇರ್, ಫಾರ್ವಡ್ ಹಾಗೂ ಆಕ್ಷೇಪಾರ್ಹವಾಗಿ ಕಮೆಂಟ್ ಮಾಡುವವರ ವಿರುದ್ಧವೂ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಯಾರೇ ಆದರೂ ವಿವಾದಾತ್ಮಕ ಪೋಸ್ಟರ್, ಪ್ರಚೋಧನಾಕಾರಿ ಹೇಳಿಕೆ, ಗುಂಪುಗಾರಿಕೆ, ಗಲಾಟೆ ಮಾಡಿ ಸಮಾಜದ ಶಾಂತಿ, ನೆಮ್ಮದಿಗೆ ಭಂಗ ತರುವುದು ಕಂಡು ಬಂದಲ್ಲಿ ಸಂಬಂಧಪಟ್ಟ ಪೋಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

6 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

7 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

7 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

7 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

7 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago