ಉಡುಪಿ : “ಆಧಾರ್ ಲಿಂಕ್ ಮಾಡಿಸಿ, ಇ-ಕೆವೈಸಿ ಮಾಡದೇ ಇದ್ದರೆ ಸಬ್ಸಿಡಿ ಬರುವುದಿಲ್ಲ, ಗೃಹ ಬಳಕೆಯ ಸಂಪರ್ಕ ವಾಣಿಜ್ಯ ಬಳಕೆಯ ಗ್ಯಾಸ್ ಸಂಪರ್ಕವಾಗಿ ಬದಲಾಗಲಿದೆ, ಗ್ಯಾಸ್ ಸಂಪರ್ಕ ರದ್ದಾಗಲಿದೆ ಎಂಬ ಇತ್ಯಾದಿ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹಬಳಕೆಯ ಗ್ಯಾಸ್ ಸಂಪರ್ಕ ಪಡೆದವರು ಇ-ಕೆವೈಸಿ ಮಾಡಿಸಿಕೊಳ್ಳಲು ಜನರು ಗ್ಯಾಸ್ ಏಜೆನ್ಸಿಗಳ ಕಚೇರಿಗಳನ್ನು ಮುತ್ತಿಗೆ ಹಾಕಿರುವ ದೃಶ್ಯ ಕರಾವಳಿಯ ಜಿಲ್ಲೆಯಲ್ಲಿ ಕಂಡುಬರುತ್ತಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶಗಳ ಹಿನ್ನೆಲೆ ಜನರು ಗೊಂದಲಕ್ಕೀಡಾಗಿದ್ದು, ಕಳೆದೊಂದು ವಾರದಿಂದ ಗ್ಯಾಸ್ ಏಜೆನ್ಸಿಗಳ ಕಚೇರಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಿಲ್ಲೆಯ ಪ್ರಮುಖ ಗ್ಯಾಸ್ ಏಜೆಂಟ್ ಒಬ್ಬರು, ಗ್ರಾಹರೆಲ್ಲರಿಗೂ ಇ-ಕೆವೈಸಿ ಮಾಡಲು ಸೂಚನೆ ಬಂದಿರುವುದರಿಂದ ಎಲ್ಲಾ ಗ್ಯಾಸ್ ಏಜೆನ್ಸಿಗಳಲ್ಲಿ ಗ್ರಾಹಕರ ಬೆರಳಚ್ಚು ಪಡೆದು ಆಧಾರ್ ಲಿಂಕ್ ಹಾಗೂ ಇ-ಕೆವೈಸಿ ಮಾಡಿಸಲಾಗುತ್ತಿದೆ. ಆದರೆ ಮತ್ತೆ ಸಬ್ಸಿಡಿ ಸಿಗಲಿದೆ, ಡಿ. 31ರೊಳಗೆ ಈ ಪ್ರಕ್ರಿಯೆ ಮುಗಿಸಬೇಕು ಎಂಬ ವಿಷಯಗಳಿಗೂ ಇ-ಕೆವೈಸಿಗೂ ಯಾವ ಸಂಬಂಧವಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ಬರುತ್ತಿರುವುದರಿಂದ ಅವರನ್ನು ನಿಭಾಯಿಸುವುದು ಕಷ್ಟವಾಗುತ್ತಿದೆ ಎಂದರು.
“ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಸಂದೇಶವೊಂದು ವೈರಲ್ ಆಗುತ್ತಿರುವ ಬಗ್ಗೆ ಮಾಹಿತಿ ಬಂದಿವೆ.ಆಧಾರ್ ದೃಢೀಕರಣವು ಉಜ್ವಲ ಗ್ಯಾಸ್ ಸಂಪರ್ಕ ಪಡೆದಿರುವವರಿಗೆ ಮಾತ್ರ ಕಡ್ಡಾಯವಾಗಿದೆ. ಉಳಿದ ಬಳಕೆದಾರರಿಗೆ ಗ್ಯಾಸ್ ಸಬ್ಸಿಡಿಯ ಬಗ್ಗೆ ಪ್ರಸ್ತುತ ಯಾವುದೇ ಘೋಷಣೆ ಆಗಿರುವುದಿಲ್ಲ. ಗ್ಯಾಸ್ ಬಳಕೆದಾರರು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು ದಕ್ಷಿಣ ಕನ್ನಡ ಆಹಾರ ಇಲಾಖೆಯ ಉಪನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ”.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸಂದೇಶದಲ್ಲಿ ಗ್ಯಾಸ್ ಸಂಪರ್ಕ ಇರುವವರು ಡಿ. 31ರೊಳಗೆ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ಗ್ಯಾಸ್ ಏಜೆನ್ಸಿ ನೀಡಿರುವ ಪುಸ್ತಕ ಅಥವಾ ಕಾರ್ಡ್ ಜೊತೆಗೆ ಏಜೆನ್ಸಿ ಕಚೇರಿಗೆ ಭೇಟಿ ನೀಡಿ, ಕೆವೈಸಿ ಮಾಡಿಸಬೇಕು. ಕೆವೈಸಿ ಮಾಡಿಸಿದರೆ ಜ. 1ರಿಂದ ಸಬ್ಸಿಡಿ ಬರುತ್ತದೆ. ಪ್ರಸ್ತುತ ಸಿಲಿಂಡರ್ ಗೆ 903 ರೂ. ಇದ್ದು, ಸಬ್ಸಿಡಿಯ ಬಳಿಕ 500 ರೂ.ಗಳಿಗೆ ಸಿಲಿಂಡರ್ ಸಿಗುತ್ತದೆ. ಕೆವೈಸಿ ಮಾಡದಿದ್ದರೆ ಸಬ್ಸಿಡಿ ರಹಿತವಾಗಿ ಗ್ಯಾಸ್ ಸಂಪರ್ಕವು ಕಮರ್ಶಿಯಲ್ ಆಗಿ ಮಾರ್ಪಡುತ್ತದೆ. ಆಗ ಸಿಲಿಂಡರ್ ಗೆ 1,400 ರೂ. ಹಣ ನೀಡಬೇಕಾಗುತ್ತದೆ ಎಂದು ಸಂದೇಶ ವೈರಲ್ ಆಗುತ್ತಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…