ಉಡುಪಿ :  ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ; ಪ್ರಸಾದ್‌ ಕಾಂಚನ್‌ ರಿಂದ  ಮಲ್ಪೆ ಠಾಣೆಯಲ್ಲಿ ದೂರು ದಾಖಲು – vishwanews24

Featured, ಉಡುಪಿ

ಉಡುಪಿ :  ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ; ಪ್ರಸಾದ್‌ ಕಾಂಚನ್‌ ರಿಂದ  ಮಲ್ಪೆ ಠಾಣೆಯಲ್ಲಿ ದೂರು ದಾಖಲು

ಉಡುಪಿ : ಸಾಮಾಜಿಕ ಜಾಲತಾಣದಲ್ಲಿ ತನ್ನ ಬಗ್ಗೆ ಸುಳ್ಳು ಸುದ್ದಿ ಹರಡಿ ಅಪಪ್ರಚಾರ ಎಸಗುತ್ತಿದ್ದು ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ಮುಖಂಡ ಪ್ರಸಾದ್‌ರಾಜ್‌ ಕಾಂಚನ್‌ ಮಲ್ಪೆ ಪೊಲೀಸ್‌ ಠಾಣೆ ಮೆಟ್ಟಲೇರಿದ್ದಾರೆ.

ಇತ್ತೀಚೆಗೆ ನಡೆದ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ವ್ಯಕ್ತಿಗೆ ಸಮ್ಮಾನ ಮಾಡಿದ್ದಕ್ಕೆ ನಾನು ಕಾರಣ ಎಂಬ ನೆಪವೊಡ್ಡಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಾನು ಮಸೀದಿಗೆ ಭೇಟಿ ನೀಡಿದ ಫೂಟೋವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ತನ್ನ ತೇಜೋವಧೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ತನ್ನ ಬಗ್ಗೆ ಸುಳ್ಳು ಸುದ್ದಿ ಹರಡಿ ಅಪಪ್ರಚಾರ ಎಸಗುತ್ತಿರುವ ಕಿಡಿಗೇಡಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಉಡುಪಿ : ವಿಧಾನ ಪರಿಷತ್ ಉಪ ಚುನಾವಣೆ; ಮತದಾನ ಆರಂಭ – vishwanews24

Leave a Reply