ಉಡುಪಿ,: ಹವಾಮಾನ ಇಲಾಖೆಯ ಮುನ್ಸೂಚನೆ ಹಾಗೂ ಜಿಲ್ಲೆಯಲ್ಲಿ ಆಗುತ್ತಿರುವ ಮಳೆಯ ಪರಿಸ್ಥಿತಿಯ ಅನುಗುಣವಾಗಿ ಶಾಲಾ ಕಾಲೆÃಜುಗಳಿಗೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ರಜೆಯನ್ನು ಘೋಷಿಸಿ, ಆದೇಶಿಸುತ್ತಿರುವ ಆದೇಶ ಪ್ರತಿಯಲ್ಲಿನ ದಿನಾಂಕಗಳನ್ನು ತಿದ್ದುಪಡಿ ಮಾಡಿ , ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ದ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ನಗರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಜಿಲ್ಲಾ ದಂಡಾಧಿಕಾರಿಗಳು ದಿನಾಂಕ.1-7-2022 ರಂದು ಜಿಲ್ಲಾ ವ್ಯಾಪ್ತಿಯಲ್ಲಿ ಮಳೆ ಹೆಚ್ಚಳವಾಗಿರುವ ಕಾರಣ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಆಧರಿಸಿ ರಜೆಯನ್ನು ಘೋಷಿಸಿ 2022 ರ ಜೂನ್ 30 ರಂದು ಸಂಜೆ ಹೊರಡಿಸಿದ್ದ ಆದೇಶದ ಪ್ರತಿಯನ್ನು ಸಮಾಜದಲ್ಲಿನ ಕೆಲವು ಕಿಡಗೇಡಿಗಳು ಆದೇಶದ ದಿನಾಂಕವನ್ನು ಡಿಜಿಟಲೀಕರಣದಿಂದ ತಿದ್ದುಪಡಿ ಮಾಡಿ 5-7-2022 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಆದೇಶದ ಕಾನೂನುಬಾಹಿರ ನಕಲಿ ತಿದ್ದುಪಡಿ ಪತ್ರವನ್ನು 4-7-2022 ರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಪ್ರಸರಣಗೊಳಿಸಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಠಿಸಿರುತ್ತಾರೆ. ಆದರೆ ಅಂದು ಸಂಜೆ ಹೆಬ್ರಿ ತಾಲೂಕಿನ ವ್ಯಾಪ್ತಿಗೆ ಮಾತ್ರ ರಜೆ ಘೋಷಿಸಿ ಜಿಲ್ಲಾಡಳಿದಿಂದ ರಜೆ ಘೋಷಿಸಲಾಗಿತ್ತು.
ಇಂತಹ ಸಮಾಜಘಾತುಕ ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಿಸಿ , ತನಿಖೆ ನಡೆಸಿ , ಕಾನೂನಿನಡಿ ಕ್ರಮ ಕೈಗೊಳ್ಳಲು ಜಿಲ್ಲಾ ಸೆನ್ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದ್ದು, ಎಫ್.ಐ.ಆರ್. ದಾಖಲಾಗಿದೆ. ಈ ಪ್ರಕರಣ ಬಗ್ಗೆ ಅನುಮಾನಾಸ್ಪದ ವ್ಯಕ್ತಿಗಳಿದ್ದಲ್ಲಿ ಮಾಹಿತಿಯನ್ನು ಸೆನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ದೂ.ಸಂ.9480805410 ಗೆ ನೀಡುವಂತೆ ಕೋರಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…