Featured

ಉಡುಪಿ : ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಟ್ಟವರ ವಿರುದ್ದ ಕಾನೂನು ಕ್ರಮಕ್ಕೆ ಜಿಲ್ಲಾಡಳಿದಿಂದ ದೂರು : FIR ದಾಖಲು – Vishwanews24

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಟ್ಟವರ ವಿರುದ್ದ ಕಾನೂನು ಕ್ರಮಕ್ಕೆ ಜಿಲ್ಲಾಡಳಿದಿಂದ ದೂರು : FIR ದಾಖಲು

ಉಡುಪಿ,:  ಹವಾಮಾನ ಇಲಾಖೆಯ ಮುನ್ಸೂಚನೆ ಹಾಗೂ  ಜಿಲ್ಲೆಯಲ್ಲಿ ಆಗುತ್ತಿರುವ ಮಳೆಯ ಪರಿಸ್ಥಿತಿಯ ಅನುಗುಣವಾಗಿ ಶಾಲಾ ಕಾಲೆÃಜುಗಳಿಗೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ರಜೆಯನ್ನು ಘೋಷಿಸಿ, ಆದೇಶಿಸುತ್ತಿರುವ ಆದೇಶ ಪ್ರತಿಯಲ್ಲಿನ ದಿನಾಂಕಗಳನ್ನು ತಿದ್ದುಪಡಿ ಮಾಡಿ , ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ದ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ನಗರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಜಿಲ್ಲಾ ದಂಡಾಧಿಕಾರಿಗಳು ದಿನಾಂಕ.1-7-2022 ರಂದು ಜಿಲ್ಲಾ ವ್ಯಾಪ್ತಿಯಲ್ಲಿ ಮಳೆ ಹೆಚ್ಚಳವಾಗಿರುವ ಕಾರಣ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಆಧರಿಸಿ ರಜೆಯನ್ನು ಘೋಷಿಸಿ 2022 ರ ಜೂನ್ 30 ರಂದು ಸಂಜೆ ಹೊರಡಿಸಿದ್ದ ಆದೇಶದ  ಪ್ರತಿಯನ್ನು ಸಮಾಜದಲ್ಲಿನ ಕೆಲವು ಕಿಡಗೇಡಿಗಳು ಆದೇಶದ ದಿನಾಂಕವನ್ನು ಡಿಜಿಟಲೀಕರಣದಿಂದ ತಿದ್ದುಪಡಿ ಮಾಡಿ 5-7-2022 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಆದೇಶದ ಕಾನೂನುಬಾಹಿರ ನಕಲಿ ತಿದ್ದುಪಡಿ ಪತ್ರವನ್ನು 4-7-2022 ರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಪ್ರಸರಣಗೊಳಿಸಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಠಿಸಿರುತ್ತಾರೆ. ಆದರೆ ಅಂದು ಸಂಜೆ ಹೆಬ್ರಿ ತಾಲೂಕಿನ ವ್ಯಾಪ್ತಿಗೆ ಮಾತ್ರ ರಜೆ ಘೋಷಿಸಿ ಜಿಲ್ಲಾಡಳಿದಿಂದ ರಜೆ ಘೋಷಿಸಲಾಗಿತ್ತು.

ಇಂತಹ ಸಮಾಜಘಾತುಕ ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಿಸಿ , ತನಿಖೆ ನಡೆಸಿ , ಕಾನೂನಿನಡಿ ಕ್ರಮ ಕೈಗೊಳ್ಳಲು ಜಿಲ್ಲಾ ಸೆನ್ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದ್ದು, ಎಫ್.ಐ.ಆರ್. ದಾಖಲಾಗಿದೆ. ಈ ಪ್ರಕರಣ ಬಗ್ಗೆ ಅನುಮಾನಾಸ್ಪದ ವ್ಯಕ್ತಿಗಳಿದ್ದಲ್ಲಿ ಮಾಹಿತಿಯನ್ನು ಸೆನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ದೂ.ಸಂ.9480805410 ಗೆ ನೀಡುವಂತೆ ಕೋರಿದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

9 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

11 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

12 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

12 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

12 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

12 hours ago