ಉಡುಪಿ: ಬಾಲಕಿ ಮೇಲೆ 2016ರಲ್ಲಿ ನಗರದ ಹೊರವಲಯದಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಎಂ. ಜೋಶಿ 20 ವರ್ಷ ಕಠಿಣ ಶಿಕ್ಷೆ ದಂಡ ವಿಧಿಸಿ ಮಂಗಳವಾರ ತೀರ್ಪು ನೀಡಿದ್ದಾರೆ.
ನವೆಂಬರ್ 20ರಂದು ಜಿಲ್ಲಾ ವಿಶೇಷ ನ್ಯಾಯಾಲಯವು ಆರೋಪಿಗಳಾಗಿದ್ದ ಪದಮ್ ಸಿಂಗ್ ಸೇನ್ ಮತ್ತು ಮುಕೇಶ್ ಸೇನ್‌ನನ್ನು ಅಪರಾಧಿಗಳೆಂದು ಸಾಬೀತು ಪಡಿಸಿತ್ತು.
ಸಾಮೂಹಿಕ ಅತ್ಯಾಚಾರಕ್ಕೆ 20 ವರ್ಷ ಕಠಿನ ಜೈಲು ಶಿಕ್ಷೆ, 20 ಸಾವಿರ ರೂ. ದಂಡ, ತಪ್ಪಿದಲ್ಲಿ 1 ವರ್ಷ ಸಾದಾ ಸಜೆ, ಅಪಹರಣಕ್ಕೆ 10 ವರ್ಷ ಜೈಲು ಶಿಕ್ಷೆ, 15 ಸಾವಿರ ರೂ. ದಂಡ, ತಪ್ಪಿದಲ್ಲಿ 6 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ, ಜೀವ ಬೆದರಿಕೆಗೆ 1 ವರ್ಷ ಜೈಲು ಶಿಕ್ಷೆ, ಐದು ಸಾವಿರ ರೂ. ದಂಡ, ತಪ್ಪಿದಲ್ಲಿ 3 ತಿಂಗಳು ಜೈಲು, ಪೊಕ್ಸೋ ಪ್ರಕರಣಕ್ಕೆ ಸಂಬಂಧಿಸಿ 20 ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ, ತಪ್ಪಿದಲ್ಲಿ 1 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಧೀಶ ಸಿ.ಎಂ. ಜೋಶಿ ತೀರ್ಪು ನೀಡಿದ್ದಾರೆ. ಸಂತ್ರಸ್ತೆ ಬಾಲಕಿಯ ಪರ ಜಿಲ್ಲಾ ಪೊಕ್ಸೋ ವಿಶೇಷ ಸರಕಾರಿ ಅಭಿಯೋಜಕ ವಿಜಯ ವಾಸು ಪೂಜಾರಿ ವಾದ ಮಂಡಿಸಿದ್ದರು.
ಪದಮ್ ಸಿಂಗ್ ಸೇನಿ, ಮುಕೇಶ್ ಸೇನಿ 2016ರ ಜು.8ರಂದು ರಾತ್ರಿ ಸಂತ್ರಸ್ತೆಯ ತಂದೆ ಕೆಲಸದ ನಿಮಿತ್ತ ತೆರಳಿದ್ದಾಗ, ಬಾಲಕಿಯ ಮನೆಗೆ ಆಗಮಿಸಿ ಬಾಲಕಿಯನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಬಡಗಬೆಟ್ಟಿನಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಅತ್ಯಾಚಾರ ಎಸಗಿದ್ದರು. ಬಳಿಕ ಜೀವ ಬೆದರಿಕೆ ಒಡ್ಡಿ ಮನೆಯ ಬಳಿ ಬಿಟ್ಟುಹೋಗಿದ್ದರು. ಈ ಬಗ್ಗೆ 2016 ಜು.10ರಂದು ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿ ಅಂದಿನ ತನಿಖಾಧಿಕಾರಿಗಳಾದ ಉಡುಪಿ ವೃತ್ತ ನಿರೀಕ್ಷಕ ಶ್ರೀಕಾಂತ್ ಕೆ. ಮತ್ತು ಜೈಶಂಕರ್ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ 2016ರ ಸೆ. 20ರಂದು ನ್ಯಾಯಾಲಯಕ್ಕೆ ದೋಷಾ ರೋಪ ಸಲ್ಲಿಸಿದ್ದರು. ಅಭಿಯೋಜನೆ ಪರವಾಗಿ 34 ಸಾಕ್ಷಿಗಳ ಪೈಕಿ 21 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿ ಹೇಳಿಕೆ ಪಡೆದುಕೊಳ್ಳಲಾಗಿತ್ತು.
ಬಾಲಕಿಯ ಪರ ಜಿಲ್ಲಾ ಪೋಕ್ಸೋ ವಿಶೇಷ ಸರಕಾರಿ ಅಭಿಯೋಜಕ ವಿಜಯ ವಾಸು ಪೂಜಾರಿ ವಾದ ಮಂಡನೆ ಮಾಡಿದ್ದರು. ಕಳೆದ ವರ್ಷ ಇದೇ ನ್ಯಾಯಾಲಯದಲ್ಲಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ಜಿಲ್ಲಾ ವಿಶೇಷ ಸರಕಾರಿ ಅಭಿಯೋಜಕರ ಮೇಲೆ ಆರೋಪಿ ತನ್ನ ಶೂ ಎಸೆದಿದ್ದ ಹಿನ್ನಲೆಯಲ್ಲಿ ಮಂಗಳವಾರ ನ್ಯಾಯಾಲಯದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…