ಉಡುಪಿ: ಉಡುಪಿ ಕಲ್ಪನಾ ಟಾಕೀಸ್ ಬಳಿಯ ಸಾಯಿರಾಜ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಸಚಿನ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟವಾಗಿರುವುದು ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
ಸೊಸೈಟಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಚಿನ್, ಸೋಮವಾರ ಆತ್ಮಹತ್ಯೆಗೂ ಮುನ್ನ ಏಳು ಪುಟಗಳ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾರಿ ಮೊತ್ತದ ಹಣ ಕಳೆದುಕೊಂಡಿದ್ದ ಅವರು, ಸ್ನೇಹಿತರಿಂದ ಸಾಲ ಪಡೆದಿದ್ದರು. ಸಾಲವನ್ನು ಮರುಪಾವತಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಕೈಗೊಂಡಿರುವುದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದರ ಜತೆಗೆ, ತಾವು ಕಾರ್ಯನಿರ್ವಹಿಸುತ್ತಿದ್ದ ಸೊಸೈಟಿಯ ನಾಲ್ವರು ನಿರ್ದೇಶಕರು ರಾಜೀನಾಮೆ ನೀಡಿದ್ದರಿಂದ ಗ್ರಾಹಕರು ಠೇವಣಿ ಹಣವನ್ನು ಹಿಂಪಡೆಯಲು ಸೊಸೈಟಿಗೆ ಬರುತ್ತಿದ್ದರು. ಈ ಬೆಳವಣಿಗೆಯಿಂದಲೂ ಸಚಿನ್ ಮಾನಸಿಕವಾಗಿ ನೊಂದಿದ್ದರು ಎಂದು ಅವರ ನಿಕಟವರ್ತಿಗಳು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…