Featured

ಉಡುಪಿ :ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವುದು ಕಂಡುಬ0ದಲ್ಲಿ ಕಠಿಣ ಕ್ರಮ -Vishwanews24

ಉಡುಪಿ :ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವುದು ಕಂಡುಬ0ದಲ್ಲಿ ಕಠಿಣ ಕ್ರಮ -Vishwanews24

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಯ ಸೇವಾ ಶುಲ್ಕ ಹಾಗೂ ಘನತ್ಯಾಜ್ಯ ವಸ್ತು ನಿರ್ವಹಣಾ ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ ದಂಡ/ಜುಲ್ಮಾನೆಗಳನ್ನು ವಿಧಿಸಲಾಗುತ್ತಿದ್ದು, ಘನತ್ಯಾಜ್ಯ ವಸ್ತು ನಿರ್ವಹಣೆ ಮತ್ತು ರಾಷ್ಟ್ರೀಯ ಹಸಿರು ನ್ಯಾಯಪೀಠದ ಆದೇಶದಂತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಮೂಲದಲ್ಲಿಯೇ ಅಂದರೆ ಮನೆ ಮನೆಯಲ್ಲಿ, ವಾಣಿಜ್ಯ ಮಳಿಗೆಯಲ್ಲಿ ಹಾಗೂ ಕಸ ಉತ್ಪಾದನೆ ಮಾಡುವವರು ಘನ ತ್ಯಾಜ್ಯ ವಸ್ತುಗಳನ್ನು ಹಸಿಕಸ, ಒಣಕಸ ಮತ್ತು ಅಪಾಯಕಾರಿ ಕಸವನ್ನು ಬೇರ್ಪಡಿಸಿ, ಪ್ರತ್ಯೇಕವಾಗಿ ಕಸ ಸಂಗ್ರಹಿಸುವ ನಗರಸಭೆಯ ವಾಹನಗಳಿಗೆ ನೀಡುವುದು ಕಡ್ಡಾಯವಾಗಿರುತ್ತದೆ.

ಇದನ್ನೂ ಓದಿ :ಉಡುಪಿ : ಕುಡಿಯುವ ನೀರು ಸಮಸ್ಯೆ ಬಾರದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಯಾವುದೇ ಸಾರ್ವಜನಿಕ ಸ್ಥಳದಲ್ಲಿ, ಖಾಸಗಿ ಪ್ರದೇಶದಲ್ಲಿ ಕಸ ಹಾಕುವುದು/ ಕಸ ಎಸೆಯುವುದನ್ನು ನಿಷೇಧಿಸಲಾಗಿದ್ದು, ನಗರಸಭೆಯು ಸ್ವಚ್ಚತೆ ಕಾಪಾಡುವಲ್ಲಿ ಮುತುವರ್ಜಿ ವಹಿಸಿ ಸ್ವಚ್ಛ ನಗರವಾಗಲು ನಗರದಲ್ಲಿನ ತ್ಯಾಜ್ಯ ಬೀಳುವ ಪ್ರದೇಶದಲ್ಲಿ ರಾತ್ರಿ ಮತ್ತು ಮುಂಜಾನೆ ಕಾವಲು ನಡೆಸಿ ತ್ಯಾಜ್ಯ ಹಾಕುವವರನ್ನು ಪತ್ತೆ ಹಚ್ಚಿ ದಂಡ ಹಾಕಲಾಗುತ್ತಿದ್ದು,  ಈವರೆಗೆ ಒಟ್ಟು 3,22,400 ರೂ. ದಂಡ ವಸೂಲಿ ಮಾಡಲಾಗಿರುತ್ತದೆ.

ಇದನ್ನೂ ಓದಿ :ಉಡುಪಿ : ಕೊರೊನಾ ಸುರಕ್ಷತಾ ನಿಯಮ ಪಾಲಿಸದಿದ್ದರೆ ದಂಡದ ಜೊತೆಗೆ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಮಾರ್ಚ್ 3 ರಂದು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ತಮಿಳುನಾಡಿನಿಂದ ಬಂದ ವಾಹನವು ತ್ಯಾಜ್ಯವನ್ನು ಸುರಿಯುತ್ತಿರುವುದನ್ನು ಪತ್ತೆ ಹಚ್ಚಿ 10,000 ರೂ. ದಂಡ ಹಾಗೂ ಮಾರ್ಚ್ 15 ರಂದು ಕಾರಿನಲ್ಲಿ ಬಂದು ತ್ಯಾಜ್ಯ ಎಸೆದವರಿಗೆ 5,000 ರೂ ದಂಡವನ್ನು ವಿಧಿಸಲಾಗಿರುತ್ತದೆ.

ಸಾರ್ವಜನಿಕರು, ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಹಾಕುವುದು ಕಂಡುಬAದಲ್ಲಿ ಇನ್ನು ಮುಂದೆ 25,000 ರೂ. ದಂಡವನ್ನು ವಿಧಿಸಿ ಕಠಿಣ ಕ್ರಮವಹಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನೂ ಓದಿ :ಉಡುಪಿ : ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲಾ ಇಲಾಖೆಗಳ ಜವಾಬ್ದಾರಿ : ಡಾ.ಅಂತೋನಿ ಸಬಾಸ್ಟಿಯನ್ -Vishwanews24

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

9 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

10 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

10 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

11 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

11 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago