ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಯ ಸೇವಾ ಶುಲ್ಕ ಹಾಗೂ ಘನತ್ಯಾಜ್ಯ ವಸ್ತು ನಿರ್ವಹಣಾ ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ ದಂಡ / ಜುಲ್ಮಾನೆಗಳನ್ನು ವಿಧಿಸಲಾಗುತ್ತಿದ್ದು, ಮನೆ, ವಾಣಿಜ್ಯ ಮಳಿಗೆ ಹಾಗೂ ಕಸ ಉತ್ಪಾದನೆ ಮಾಡುವವರು ಘನ ತ್ಯಾಜ್ಯ ವಸ್ತುಗಳನ್ನು ಹಸಿಕಸ, ಒಣಕಸ ಮತ್ತು ಅಪಾಯಕಾರಿ ಕಸವನ್ನು ಬೇರ್ಪಡಿಸಿ, ಪ್ರತ್ಯೇಕವಾಗಿ ಕಸ ಸಂಗ್ರಹಿಸುವ ನಗರಸಭೆಯ ವಾಹನಕ್ಕೆ ನೀಡುವುದು ಕಡ್ಡಾಯವಾಗಿರುತ್ತದೆ.
ಸಾರ್ವಜನಿಕ ಸ್ಥಳದಲ್ಲಿ ಹಾಗೂ ಖಾಸಗಿ ಪ್ರದೇಶದಲ್ಲಿ ಕಸ ಹಾಕುವುದು/ ಕಸ ಎಸೆಯುವುದನ್ನು ನಿಷೇಧಿಸಲಾಗಿದ್ದು, ನಗರಸಭೆಯು ಸ್ವಚ್ಛತೆ ಕಾಪಾಡುವಲ್ಲಿ ಮುತುವರ್ಜಿ ವಹಸಿ ಸ್ವಚ್ಚನಗರವನ್ನಾಗಿಸಲು ನಗರದಲ್ಲಿನ ತ್ಯಾಜ್ಯ ಬೀಳುವ ಪ್ರದೇಶದಲ್ಲಿ ರಾತ್ರಿ ಮತ್ತು ಮುಂಜಾನೆ ಕಾವಲು ನಡೆಸಿ ತ್ಯಾಜ್ಯ ಹಾಕುವವರನ್ನು ಪತ್ತೆ ಹಚ್ಚಿ ದಂಡ ವಿಧಿಸುತ್ತಿದ್ದು, ಜನವರಿ ತಿಂಗಳಲ್ಲಿ 1,23,೦೦೦ ರೂ ದಂಡ ವಸೂಲಿ ಮಾಡಲಾಗಿರುತ್ತದೆ.
ಸಾರ್ವಜನಿಕರು, ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಹಾಕುವುದು ಕಂಡುಬAದಲ್ಲಿ ಇನ್ನೂ ಹೆಚ್ಚಿನ ಕಠಿಣ ಕ್ರಮ ಕೈಗೊಳ್ಳಲು ಕ್ರಮವಹಿಸಲಾಗುವುದು. ಆದ್ದರಿಂದ ನಗರಸಭೆಯ ಸೂಚನೆಗಳನ್ನು ಪಾಲಿಸಿ, ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…