ಉಡುಪಿ : ಸಾಲ ಸೌಲಭ್ಯ ; ಅರ್ಜಿ ಆಹ್ವಾನ – vishwanews24

Featured, ಉಡುಪಿ

ಉಡುಪಿ : ಸಾಲ ಸೌಲಭ್ಯ ; ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ, ಜೀಜಾವು ಜಲ ಭಾಗ್ಯ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಸಾಂಗಕ್ಕೆ ಸಾಲ ಯೋಜನೆ, ಮರಾಠ ಮಿಲ್ಟಿç ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ಸ್ವಾತಂತ್ರö್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಉಡುಪಿ : ಜಿಲ್ಲೆಯ 20 ವಿದ್ಯಾಸಂಸ್ಥೆಗಳಲ್ಲಿ ಐಐಟಿ ಮದ್ರಾಸ್‌ನಿಂದ ಆನ್‌ಲೈನ್ ತರಬೇತಿ ಹಾಗೂ ಕೌನ್ಸಿಲಿಂಗ್ ಕೋರ್ಸ್‌ ಪ್ರಾರಂಭ – vishwanews24

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. (ಶೈಕ್ಷಣಿಕ ಸಾಲ ಯೋಜನೆಗೆ ಕೊನೆ ದಿನಾಂಕ ಇರುವುದಿಲ್ಲ) ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 8867537799, ದೂ.ಸಂಖ್ಯೆ: 080-29903994 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದೂ.ಸಂಖ್ಯೆ: 0820-2574882 ಹಾಗೂ ವೆಬ್‌ಸೈಟ್  https://kmcdc.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply