Featured

ಉಡುಪಿ :  ಸಿಆರ್ ಝಡ್ ಪುದೇಶದಲ್ಲಿ ತೆಗೆದಿರುವ ಮರಳನ್ನು ಮಾರಾಟ ಮಾಡುವಂತೆ ಇಲ್ಲ : ರಾಷ್ಟ್ರೀಯ ಹಸಿರು ಪೀಠ ಆದೇಶ – Vishwnaews24

ಉಡುಪಿ :  ಸಿಆರ್ ಝಡ್ ಪುದೇಶದಲ್ಲಿ ತೆಗೆದಿರುವ ಮರಳನ್ನು ಮಾರಾಟ ಮಾಡುವಂತೆ ಇಲ್ಲ : ರಾಷ್ಟ್ರೀಯ ಹಸಿರು ಪೀಠ ಆದೇಶ

ಉಡುಪಿ: ಸಿಆರ್ ಝಡ್ ಪುದೇಶದಲ್ಲಿ ತೆಗೆದಿರುವ ಮರಳನ್ನು ಮಾರಾಟ ಮಾಡುವಂತೆ ಇಲ್ಲ ಎಂದು ರಾಷ್ಟ್ರೀಯ ಹಸಿರು ಪೀಠ ಆದೇಶ ಮಾಡಿದೆ. ಕರಾವಳಿ ಜಿಲ್ಲೆಗಳಲ್ಲಿ ಮರಳುಗಾರಿಕ ಸಂಬಂಧ ಇದೊಂದು ಮಹತ್ವದ ಆದೇಶವಾಗಿದೆ.

ಚೆನ್ನೈನಲ್ಲಿರುವ ರಾಷ್ಟ್ರೀಯ ಹಸಿರು ಪೀಠದ ದಕ್ಷಿಣ ವಿಭಾಗದ ನ್ಯಾಯಾಂಗ ಸದಸ್ಯ ಕೆ ರಾಮಕೃಷ್ಣನ್, ತಜ್ಞ ಸದಸ್ಯ ಡಾ.ಸತ್ಯ ಗೋಪಾಲ ಕೋರ್ಲಪಾಟಿ ಅವರುಗಳಿದ್ದ ಪೀಠವು ಈ ಆದೇಶ ಮಾಡಿದೆ. ಪರ್ಮಿಟ್ ಪ್ರಕ್ರಿಯೆ ರಾಜಧನ ಸಂಗ್ರಹ , ಹೊರಗಡೆ ಮರಳು ಮಾರಾಟಕ್ಕೆ ಅನುಮತಿ ನೀಡಿರುವ ರಾಜ್ಯ ಸರಕಾರದ ನಿಯಮಾವಳಿಯೂ ಕೂಡ ಸಿಆರ್ ಝಡ್ ಅಧಿಸೂಚನೆಯಲ್ಲಿ ನಿಷೇಧಿಸಲಾದ ಮರಳುಗಾರಿಕೆಗೆ ಸಮವಾಗಿದೆ ಎಂದಿದ.

ಸಿಆರ್ ಝಡ್ ಪುದೇಶದಲ್ಲಿ ಮರಳನ್ನು ತೆಗೆಯುವುದೇ ಆದರೆ ಅದನ್ನು ಮಾರಾಟ ಮಾಡುವಂತಿಲ್ಲ .ತೆಗೆದಿರುವ ಮರಳನ್ನು ಕೇವಲ ನದಿ ಪಾತ್ರವನ್ನು ಸಮತಟ್ಟು ಮಾಡಲು ಅಥವಾ ನದಿಪಾತ್ರದ ದಂಡ ಗಟ್ಟಿಗೊಳಿಸಲು ಬಳಸಬೇಕು ಎಂದು ಸೂಚನ ನೀಡಲಾಗಿದೆ. ಪರವಾನಿಗೆ ಹೊಂದಿರುವವರು ಅಥವಾ ಅವರ ಕುಟುಂಬದ ಸದಸ್ಯರು ಮಾತ್ರ ಕಟ್ಟುನಿಟ್ಟಾಗಿ ಸಾಂಪುದಾಯಿಕ ವಿಧಾನಗಳನ್ನು ಮಾತ್ರ ಬಳಸಿ ಮರಳು ತೆಗೆಯಬೇಕು. ಯಾವುದೇ ಉಪಗುತ್ತಿಗೆ ಅಥವಾ ಬಾಹ್ಯ ಕಾರ್ಮಿಕರ ನಿಯೋಜನ ಇರಬಾರದು ಎಂಬುದನ್ನು ಪೀಠವು ಸ್ಪಷ್ಟಪಡಿಸಿದೆ.

ಜಿಲ್ಲೆಯಲ್ಲಿ ಸಿ ಆರ್ ಝಡ್ ವ್ಯಾಪ್ತಿಯಲ್ಲಿ 23 ಮರಳು ದಿಬ್ಬಗಳನ್ನು ಗುರುತಿಸಿ ರಾಜ್ಯ ಕರಾವಳಿ ನಿಯಂತ್ರಣ ವಲಯ ಪ್ರಾಧಿಕಾರ ಅನುಮೋದನೆ ನೀಡಿತ್ತು. ಅದರಲ್ಲಿ ನಾಲ್ಕು ಮರಳು ದಿಬ್ಬಗಳು ಕುಂದಾಪುರ ವ್ಯಾಪ್ತಿಯಲ್ಲಿದ್ದು ಅದರ ಪರವಾನಿಗೆ ಅವಧಿ ಪೂರ್ಣಗೊಂಡಿದೆ. ಉಳಿದಂತೆ ಪುಸ್ತುತ ಉಡುಪಿ ಬ್ರಹ್ಮಾವರ ಭಾಗದಲ್ಲಿ 13 ಮರಳು ದಿಬ್ಬಗಳಲ್ಲಿ ಮರಳನ್ನು ತೆರವುಗೊಳಿಸಲಾಗುತ್ತಿದೆ.

ಸಿಆರ್ ಝಡ್ ವ್ಯಾಪ್ತಿಯ ಮರಳು ತೆಗೆಯುವ ವಿಚಾರವಾಗಿ ಹಸಿರುಪೀಠ ನೀಡಿದ ಆದೇಶದ ಪ್ರಮಾಣಿಕೃತ ಪ್ರತಿಯನ್ನು ಪಡೆದು ಕೊಳ್ಳಬೇಕು. ಈ ಆದೇಶವನ್ನು ಜಿಲ್ಲಾ ಆಡಳಿತ ಕಟ್ಟುನಿಟ್ಟಾಗಿ ಪಾಲಿಸುತ್ತೆ. ಈ ಬಗ್ಗೆ ಗಣಿ ಇಲಾಖೆಯ ಅಧಿಕಾರಿಗಳಿಗೂ ಸ್ಪಷ್ಟ ಸೂಚನೆಯನ್ನು ನೀಡಿದ್ದೇವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago