Featured

ಉಡುಪಿ ಸಿಟಿ ಬಸ್ ಗಳ ಕರ್ಕಶ ಹಾರ್ನ್ ತೆರವು – vishwanews24

ಉಡುಪಿ ಸಿಟಿ ಬಸ್ ಗಳ ಕರ್ಕಶ ಹಾರ್ನ್  ತೆರವು

ಉಡುಪಿ: ಸಂಚಾರ ಪೊಲೀಸರು ನೀಡಿರುವ ಗಡುವು ಮುಗಿದ ಹಿನ್ನೆಲೆಯಲ್ಲಿ ಇಂದು ಕಾರ್ಯಾಚರಣೆ ನಡೆಸಿ ಉಡುಪಿ ಸಿಟಿ ಬಸ್ ಗಳ ಕರ್ಕಶ ಹಾರ್ನ್ ಗಳನ್ನು ತೆರವುಗೊಳಿಸಿ ದಂಡ ವಿಧಿಸಲಾಯಿತು.

ಜೂ.3ರಂದು ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಉಡುಪಿ ಸಿಟಿ ಬಸ್ ಮಾಲಕರು ಮತ್ತು ಸರ್ವಿಸ್ ಬಸ್ ಮಾಲಕರ ಸಭೆಯಲ್ಲಿ ಉಡುಪಿಯ ಸಿಟಿ ಹಾಗೂ ಸರ್ವಿಸ್ ಬಸ್ ಗಳಲ್ಲಿ ಅಳವಡಿಸಲಾದ ಕರ್ಕಶ ಹಾರ್ನ್ ಗಳನ್ನು ಜೂ.15ರೊಳಗೆ ಕಡ್ಡಾಯವಾಗಿ ತೆರವುಗೊಳಿಸುವಂತೆ ಸೂಚನೆ ನೀಡಲಾಯಿತು.

ಅದರಂತೆ ಗಡುವು ಮುಗಿದ ಹಿನ್ನೆಲೆಯಲ್ಲಿ ಉಡುಪಿ ಸಂಚಾರ ಪೊಲೀಸ್ ಠಾಣೆಯ ಎಸ್ಸೈ ಸುದರ್ಶನ್ ದೊಡ್ಡಮನಿ ನೇತೃತ್ವದಲ್ಲಿ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿ ಸುಮಾರು ಏಳು ಬಸ್ ಗಳಲ್ಲಿದ್ದ ಕರ್ಕಶ ಹಾರ್ನ್ ಗಳನ್ನು ತೆರವುಗೊಳಿಸಲಾಯಿತು. ಬಸ್ ಗಳ ವಿರುದ್ಧ ತಲಾ 500ರೂ.ನಂತೆ ಒಟ್ಟು 3500 ರೂ. ದಂಡ ವಿಧಿಸಲಾಯಿತು. ಎರಡನೇ ಬಾರಿಗೆ 1000ರೂ. ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ.
ಈಗಾಗಲೇ ಗಡುವು ನೀಡಿರುವ ಹಿನ್ನೆಲೆಯಲ್ಲಿ ಬಹುತೇಕ ಸಿಟಿ ಬಸ್ ಗಳು ಕರ್ಕಶ ಹಾರ್ನ್ ಗಳನ್ನು ತೆರವುಗೊಳಿಸಿದೆ. ಆದುದರಿಂದ ಈ ಕಾರ್ಯಾಚರಣೆ ಮತ್ತೆ ಮುಂದುವರೆಯಲಿದೆ. ಮುಂದೆ ಸರ್ವಿಸ್ ಬಸ್ ಗಳ ವಿರುದ್ಧವೂ ಕಾರ್ಯಚರಣೆ ನಡೆಸಲಾಗುವುದು ಎಂದು ಎಸ್ಸೈ ಸುದರ್ಶನ್ ತಿಳಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago