ಉಡುಪಿ: ಡಿ. 3ರಂದು ಸಿಟಿ ಬಸ್ ನಿಲ್ದಾಣದ ಬಳಿ ಆಟವಾಡುತ್ತಿದ್ದ ಇಬ್ಬರು ಬಾಲಕರು ಅಪಹರಣಕ್ಕೆ ಒಳಗಾಗಿರಬಹುದೆಂದು ಶಂಕಿಸಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಬಾಲಕರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಪೇಟೆಯ ನಿವಾಸಿ ನಾಗರಾಜ ಎಂಬವರ ಮಗ ಸಂತೋಷ (11) ಮತ್ತು ನಾಗರಾಜ ಅವರ ಪತ್ನಿಯ ತಂಗಿ ಮಂಗಳ ಎಂಬವರ ಪುತ್ರ ವಿಷ್ಣು (9) ಎಂದು ಗುರುತಿಸಲಾಗಿದೆ.
ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿ ಆಟವಾಡುತ್ತಿದ್ದ ಸಂತೋಷ್ ಹಾಗೂ ವಿಷ್ಣು ನಾಪತ್ತೆಯಾಗಿದ್ದು, ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಈ ಇಬ್ಬರು ಬಾಲಕರನ್ನು ದುಷ್ಕರ್ಮಿಗಳು ಪುಸಲಾಯಿಸಿ ಕರೆದುಕೊಂಡು ಹೋಗಿರಬಹುದು ಅಥವಾ ಅಪಹರಣಕ್ಕೆ ಒಳಾಗಿರಬಹುದು ಎಂದು ಶಂಕಿಸಲಾಗಿದೆ.
ನಾಜರಾಜ ಅವರು ಡಿ. 7ರಂದು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿರುವ ಮಹಿಳಾ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…