ಉಡುಪಿ: ಉದ್ಯಮಿ ಕೋಡಿ ಇಬ್ರಾಹಿಂ ಮೊಹಮ್ಮದ್ ಅವರ ಪೂರ್ಣಪ್ರಮಾಣದ ಬೆಂಬಲದೊಂದಿಗೆ ಉಡುಪಿ ನಗರದ ಹೃದಯ ಭಾಗದಲ್ಲಿರುವ ಪ್ರತಿಷ್ಠಿತ ಸಿಟಿ ಸೆಂಟರ್ ಮಾಲ್ ಅನ್ನು `ಟಿಪ್ ಟಾಪ್ ಸಿಟಿ ಸೆಂಟರ್ ಮಾಲ್’ ಎಂಬುದಾಗಿ ಮರು ನಾಮಕರಣ ಮಾಡಲಾಗಿದೆ ಎಂದು ಸಿಟಿ ಸೆಂಟರ್ ಮಾಲಕ ಜಮಾಲುದ್ದೀನ್ ತಿಳಿಸಿದ್ದಾರೆ.
ಉಡುಪಿ ಪತ್ರಿಕಾ ಭವನದಲ್ಲಿ ಮಂಗಳವಾರ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2018ರಲ್ಲಿ ಕೋಡಿ ಇಬ್ರಾಹಿಂ ಮೊಹಮ್ಮದ್ ಸಿಟಿ ಸೆಂಟರ್ ಮಾಲ್‌ಗೆ ಬೃಹತ್ ಮೊತ್ತದ ಹೂಡಿಕೆ ಮಾಡಿದ್ದು, ಇದೀಗ ಈ ಮಾಲ್‌ನಲ್ಲಿ ಪೂರ್ಣಪ್ರಮಾಣದ ಬೆಂಬಲವನ್ನು ನೀಡಿ ಅಭಯ ಹಸ್ತವನ್ನು ನೀಡಿದ್ದಾರೆ. ಈ ಮೂಲಕ ಸಿಟಿ ಸೆಂಟರ್ ಮಾಲ್ ಇನ್ನಷ್ಟು ಎತ್ತರಕ್ಕೆ ಬೆಳೆಯಲಿದೆ ಎಂದರು.
ಟಿಪ್‌ಟಾಪ್ ಸಿಟಿ ಸೆಂಟರ್ ಮಾಲ್‌ನ್ನು ಅತ್ಯುತ್ತಮ ವ್ಯಾಪಾರ ವಹಿವಾಟಿನ ಕೇಂದ್ರವಾಗಿ ಬೆಳೆಸಲು ಕಟ್ಟಿಬದ್ಧರಾಗಿದ್ದು, ಕೋಡಿ ಇಬ್ರಾಹಿಂ ಮೊಹಮ್ಮದ್ ಮಾಲ್‌ನ್ನು ಪ್ರಗತಿ ಪಥದಲ್ಲಿ ದೀರ್ಘ ಕಾಲ ನಡೆಸಿಕೊಂಡು ಹೋಗಲು ನಾವು ಜೊತೆಯಾಗಿ ಸಾಗಲು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದರು. ಕೋಡಿ ಇಬ್ರಾಹಿಂ ಮೊಹಮ್ಮದ್ ನಮ್ಮೊಂದಿಗೆ ಕೈಜೋಡಿಸಿದ ಕಾರಣ ಈ ಮಾಲ್ ಸರ್ವತೋಮುಖ ಬೆಳವಣಿಗೆ ಕಂಡು ಅಭಿವೃದ್ಧಿ ಪಥದಲ್ಲಿ ಮುನ್ನಡೆಯಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.
ಉದ್ಯಮಿ ಕೋಡಿ ಇಬ್ರಾಹಿಂ ಮೊಹಮ್ಮದ್ ಮಾತನಾಡಿ, ಎಲ್ಲ ರೀತಿಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ನಾವು ಒಂದಾಗಿ ಈ ಮಾಲ್‌ನ್ನು ಹೊಸ ರೀತಿಯಲ್ಲಿ ಮುನ್ನಡೆಸಲಿದ್ದೇವೆ. ಆ ಮೂಲಕ ಈ ಮಾಲ್ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಉಡುಪಿ ಸಿಟಿ ಸೆಂಟರ್ ಮಾಲ್‌ನ ಮೆನೇಜರ್ ರಾಧಾಕೃಷ್ಣ ಪ್ರಭು, ಬ್ಯುಸಿನೆಸ್ ಹೆಡ್ ಹನೀಫ್ ಮುಹಮ್ಮದ್, ಉದ್ಯಮಿ ಮುಸ್ತಕ್ ಉಪಸ್ಥಿತರಿದ್ದರು
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…