Featured

ಉಡುಪಿ:  ಸಿದ್ದರಾಮಯ್ಯರ  ವಿಭಿನ್ನ ಧೋರಣೆಗಳನ್ನು ಜನ ದೀರ್ಘಕಾಲ ನಂಬಲು ಸಾಧ್ಯವಿಲ್ಲ  : ಸುನಿಲ್ ಕುಮಾರ್  – vishwanews24

ಉಡುಪಿ:  ಸಿದ್ದರಾಮಯ್ಯರ  ವಿಭಿನ್ನ ಧೋರಣೆಗಳನ್ನು ಜನ ದೀರ್ಘಕಾಲ ನಂಬಲು ಸಾಧ್ಯವಿಲ್ಲ  : ಸುನಿಲ್ ಕುಮಾರ್

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಭಿನ್ನ ಧೋರಣೆಗಳನ್ನು ಜನ ದೀರ್ಘಕಾಲ ನಂಬಲು ಸಾಧ್ಯವಿಲ್ಲ. ಆಡಳಿತ ರಂಗದಲ್ಲಿ ಕಾಂಗ್ರೆಸ್‌ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.

ಮಾಧ್ಯಮದ ಜತೆಗೆ ಮಾತನಾಡಿದ ಅವರು, ಆರ್ಥಿಕ ವರ್ಷದ ಬಜೆಟ್ ಸಿದ್ಧಪಡಿಸಿದ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರು ಭ್ರಷ್ಟಾಚಾರದಲ್ಲಿ ರಾಜ್ಯ ನಂಬರ್ ಒನ್ ಎಂದು ಹೇಳುತ್ತಾರೆ. ಸಚಿವ ಸುಧಾಕರ್ ಅವರು ಎರಡು ವರ್ಷದ ಅನಂತರ ಸರಕಾರ ಈಗ ಟೇಕಾಫ್ ಆಗಿದೆ ಎನ್ನುತ್ತಿದ್ದಾರೆ. ಇವೆಲ್ಲ ಕಂಡು ಸಿಎಂ ಸಿದ್ದರಾಮಯ್ಯನವರು ಕಾಂಗ್ರೆಸ್ ಅಧಿವೇಶನದಲ್ಲಿ ರಾಜೀನಾಮೆ ನೀಡಿ ಬರಬೇಕಿತ್ತು ಎಂದರು.

ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಾಯಕನನ್ನು ದಲಿತ ಎಂಬ ಕಾರಣಕ್ಕೆ ಪ್ರತ್ಯೇಕವಾಗಿ ಒಂದು ಬದಿಯಲ್ಲಿ ಕುರ್ಚಿ ಕೊಟ್ಟು ಕುಳ್ಳಿರಿಸಿದೆ. ಮಧ್ಯದಲ್ಲಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಇದ್ದಾರೆ. ದಲಿತ ನಾಯಕನನ್ನು ಕಾಂಗ್ರೆಸ್ ಯಾವ ರೀತಿ ನಡೆಸಿಕೊಂಡಿದೆ ಎಂಬುದನ್ನು ಇದರಿಂದ ಕಾಣಬಹುದು. ದಲಿತರ ತುಷ್ಟಿಕರಣ ಮಾಡಿದೆಯೇ ಹೊರತು ದಲಿತರ ಉದ್ಧಾರ ಮಾಡಿಲ್ಲ. ಖರ್ಗೆ ಅವರು ಸ್ವಾಭಿಮಾನ ಇದ್ದಿದ್ದರೆ ಆಧಿವೇಶನದಿಂದ ಎದ್ದು ಬರಬೇಕಿತ್ತು ಎಂದು ಹೇಳಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago