Featured

ಉಡುಪಿ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉಡುಪಿ ಶ್ರೀ ಕೃಷ್ಣ ಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ಹುನ್ನಾರ ನಡೆಸಿತ್ತು : ಪ್ರಮೋದ್ ಮಧ್ವರಾಜ್ – Vishwanews24

ಉಡುಪಿ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೃಷ್ಣ ಮಠವನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವ ಯೋಚನೆ ಮಾಡಿತ್ತು : ಪ್ರಮೋದ್ ಮಧ್ವರಾಜ್ – Vishwanews24

ಉಡುಪಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉಡುಪಿ ಶ್ರೀ ಕೃಷ್ಣ ಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ಹುನ್ನಾರ ನಡೆಸಿತ್ತು ಎಂಬುದನ್ನು ಅವರ ಮಂತ್ರಿ ಮಂಡಲದಲ್ಲಿ ಸಚಿವರಾಗಿದ್ದವರೇ ಬಹಿರಂಗಪಡಿಸಿದ್ದರು ಎಂದು ಕೃಷ್ಣ ಮಠದ ರಾಜಾಂಗಣದಲ್ಲಿ ಅದಮಾರು ಪರ್ಯಾಯ ಸಮಾಪನ ಪ್ರಯುಕ್ತ ನಡೆಯುತ್ತಿರುವ ‘ವಿಶ್ವಾರ್ಪಣಂ’ ಕಾರ್ಯಕ್ರಮದಲ್ಲಿ ಗುರುವಾರ ಭಾಗವಹಿಸಿದ್ದ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಈ ಮಾಹಿತಿ ನೀಡಿದ್ದಾರೆ.

ಹಿಂದಿನ ಸರ್ಕಾರ ಕೃಷ್ಣ ಮಠವನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವ ಯೋಚನೆ ಮಾಡಿತ್ತು. ಈ ಸುದ್ದಿ ತಿಳಿದ ತಕ್ಷಣ ಮುಖ್ಯಮಂತ್ರಿಯವರನ್ನು ಸಂಪರ್ಕಿಸಿ, ‘ಉಡುಪಿ ಕೃಷ್ಣ ಮಠಕ್ಕೆ ಏನಾದರೂ ತೊಂದರೆಯಾದರೆ ಶಾಸಕ ಸ್ಥಾನಕ್ಕೆ ಮೊದಲು ರಾಜೀನಾಮೆ ಕೊಡುವವ ನಾನಾಗಿರುತ್ತೇನೆ’ ಎಂಬುದಾಗಿ ಹೇಳಿ ಈ ಪ್ರಸ್ತಾವನೆಗೆ ಪೂರ್ಣವಿರಾಮ ಹಾಕುವ ಸಣ್ಣ ಸೇವೆ ಮಾಡಿದ್ದೇನೆ. ಈ ಬಗ್ಗೆ ನನಗೆ ತೃಪ್ತಿ ಇದೆ ಎಂದು ಹೇಳಿದರು.

ಪಲಿಮಾರು ಶ್ರೀಗಳ ಪರ್ಯಾಯದಲ್ಲಿ ಮಧ್ವ ಸರೋವರಕ್ಕೆ ಹಾಗೂ ಸುತ್ತಮುತ್ತಲಿನ ಮಠದ ಬಾವಿಗಳಿಗೆ ಡ್ರೈನೇಜ್ ನೀರು ಬರುತ್ತಿತ್ತು. ಹೀಗಾಗಿ ನಗರಸಭೆಯಿಂದ 45 ಲಕ್ಷ ರೂ. ಅನುದಾನ ಕಲ್ಪಿಸಿ ಒಳಚರಂಡಿ ವ್ಯವಸ್ಥೆ ಸರಿಪಡಿಸಲಾಗಿತ್ತು ಎಂದರು.ಪ್ರಮಾಣವಚನಕ್ಕೆ ಪಿಐಎಲ್ ಉಡುಪಿ ಕೃಷ್ಣ -ಮುಖ್ಯಪ್ರಾಣ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಕ್ಕೆ ಕೆಲವರು ನನ್ನನ್ನು ಶಾಸಕ ಸ್ಥಾನದಿಂದ ಅನೂರ್ಜಿತಗೊಳಿಸುವಂತೆ ಹೈಕೋರ್ಟ್‌ಗೆ ಪಿಐಎಲ್ ಹಾಕಿದ್ದರು. ಇದರಿಂದ ನನಗೇನು ತೊಂದರೆಯಾಗಿಲ್ಲ. ಆದರೆ ಇಂಥ ಮನಸ್ಥಿತಿಯ ಜನರೂ ಜಗತ್ತಿನಲ್ಲಿದ್ದಾರೆ ಎಂದು ಪ್ರಮೋದ್ ಹೇಳಿದರು.

ಈ ವೇಳೆ ಪರ್ಯಾಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ, ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

20 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago