Featured

ಉಡುಪಿ : ಸಿದ್ಧರಾಮಯ್ಯ ಸರಕಾರದಲ್ಲಿ ರಾಮ ಭಕ್ತರಿಗೆ ರಕ್ಷಣೆ ಇಲ್ಲ: ಯಶ್ಪಾಲ್ ಸುವರ್ಣ ಆಕ್ರೋಶ – Vishwanews24

ಬಹುಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತು : ಯಶ್ಪಾಲ್ ಸುವರ್ಣ

ಉಡುಪಿ: ಅಯೋಧ್ಯೆ ಶ್ರೀ ರಾಮ ಮಂದಿರದ ದರ್ಶನ ಪಡೆದು ರಾಮ ಭಕ್ತರು ವಾಪಸಾಗುತ್ತಿದ್ದ ಅಯೋಧ್ಯೆ ಧಾಮ ರೈಲಿಗೆ ಹೊಸಪೇಟೆಯಲ್ಲಿ ಮತಾಂಧ ಶಕ್ತಿಗಳು ಗೋಧ್ರಾ ಮಾದರಿಯಲ್ಲಿ ಬೆಂಕಿ ಹಚ್ಚುವ ಬೆದರಿಕೆ ಹಾಕಿದ ಘಟನೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ವೈಫಲ್ಯಕ್ಕೆ ಸಾಕ್ಷಿಯಾಗಿದ್ದು, ಸಿದ್ದರಾಮಯ್ಯ ಸರಕಾರದಲ್ಲಿ ರಾಮ ಭಕ್ತರಿಗೆ ರಕ್ಷಣೆ ಇಲ್ಲ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಲ್ಪಸಂಖ್ಯಾತ ತುಷ್ಟೀಕರಣದ ಫಲವಾಗಿ ಮತಾಂಧ ಶಕ್ತಿಗಳು ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕಲು ಇಂತಹ ಕೃತ್ಯದಲ್ಲಿ ತೊಡಗಿಸಿಕೊಂಡಿದೆ. ಬಹುಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯಿಲ್ಲ ಎಂಬುದು ಇದೀಗ ಮತ್ತೊಮ್ಮೆ ಸಾಬೀತಾಗಿದೆ.

ಈ ಹಿಂದೆ ಗೋಧ್ರಾ ಮಾದರಿಯ ಘಟನೆಗಳು ರಾಜ್ಯದಲ್ಲಿ ನಡೆಯುವ ಬಗ್ಗೆ ಹೇಳಿಕೆ ನೀಡುವ ಮೂಲಕ ಪರೋಕ್ಷವಾಗಿ ಪ್ರೇರಣೆ ನೀಡಿದ ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ರನ್ನು ತಕ್ಷಣ ತನಿಖೆಗೆ ಒಳಪಡಿಸಬೇಕು.

ರಾಜ್ಯ ಸರ್ಕಾರದ ಮೇಲೆ ಜನತೆಗೆ ಕಾನೂನು ಸುವ್ಯವಸ್ಥೆಯ ನಿಟ್ಟಿನಲ್ಲಿ ಯಾವುದೇ ಭರವಸೆ ಉಳಿದಿಲ್ಲ, ಕೇಂದ್ರ ಸರ್ಕಾರ ತಕ್ಷಣ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ದೇಶದ ಆಂತರಿಕ ಭದ್ರತೆಯ ದೃಷ್ಟಿಯಿಂದ ಎನ್ ಐ ಎ ತನಿಖೆಗೆ ಹಸ್ತಾಂತರಿಸಿ ಕೃತ್ಯದ ಹಿಂದಿನ ಜಾಲವನ್ನು ಬಯಲಿಗೆಳೆದು ಮತಾಂಧ ಶಕ್ತಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

Vishwa News 24

Recent Posts

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

5 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

20 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

27 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

31 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

37 minutes ago

ಕಾಂಗ್ರೆಸ್ ಪಕ್ಷ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು , ಶೀಘ್ರದಲ್ಲೇ ಹೊಸ ಜಿಲ್ಲಾಅಧ್ಯಕ್ಷರ ನೇಮಕಾತಿ :ಬಿ.ಕೆ. ಹರಿಪ್ರಸಾದ್ – vishwanews24

ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ :  ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…

48 minutes ago