ಹಿರಿಯಡಕ: ಉಡುಪಿ ತಾಲೂಕಿನ 23ನೇ ಬೈರಂಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಗಳಿಲ್ಲದ ಕಾರಣ ಪಂಚಾಯತ್ ಬಾಗಿಲು ಮುಚ್ಚಿದ್ದಾರೆ.
ಡಿ. 19 ರ ಗುರುವಾರ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕಚೇರಿಯಲ್ಲಿ ಕೆಲಸದ ಒತ್ತಡ, ಮಾನಸಿಕ ಕಿರುಕುಳದಿಂದ ಕಾರ್ಯನಿರ್ವಹಿಸಲು ಸಂಕಷ್ಟವಾಗುತ್ತಿದ್ದು, ಆರೋಗ್ಯದ ದೃಷ್ಟಿಯಿಂದ ರಾಜೀನಾಮೆ ನೀಡುತ್ತಿದ್ದೇವೆ ಎಂದು ಪತ್ರ ಸಲ್ಲಿಸಿದ್ದರು.
ಈ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷ, ಮೇಲಾಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ಜ.1ರ ಬುಧವಾರ ಸಿಬ್ಬಂದಿಗಳು ಗ್ರಾಮ ಪಂಚಾಯತ್ ಕಚೇರಿಗೆ ಹಾಜರಾಗಿಲ್ಲ.
ಸಿಬ್ಬಂದಿಗಳ ರಾಜೀನಾಮೆ ವಿಷಯ ತಿಳಿಯದೆ ತಮ್ಮ ಕೆಲಸಕ್ಕಾಗಿ ಗ್ರಾಮ ಪಂಚಾಯತ್ ಕಚೇರಿಗೆ ಬಂದು ಸಾರ್ವಜನಿಕರು ಬಾಗಿಲಿಗೆ ಬೀಗ ಹಾಕಿರುವುದು ಕಂಡು ವಾಪಸ್ ಹೋಗುವಂತಾಗಿದೆ.
ಯಾವುದೇ ಮಾಹಿತಿ ನೀಡದೆ ಕಚೇರಿ ಬಾಗಿಲು ತೆರೆಯದೆ ಇರುವುದನ್ನು ಕಂಡ ಸಾರ್ವಜನಿಕರು ಪಂಚಾಯತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…