Featured

ಉಡುಪಿ : ಸುಂದರವಾಯಿತು ತ್ಯಾಜ್ಯ ಎಸೆಯುವ ಜಾಗ (Black Spot) : ಹೆಚ್ಚಿದ ಜನಸ್ಪಂದನ – Vishwanews24

ಉಡುಪಿ : ಸುಂದರವಾಯಿತು ತ್ಯಾಜ್ಯ ಎಸೆಯುವ ಜಾಗ (Black Spot) : ಹೆಚ್ಚಿದ ಜನಸ್ಪಂದನ – Vishwanews24

ಉಡುಪಿ ಜಿಲ್ಲಾ ಪಂಚಾಯತ್ ನ ಸ್ವಚ್ಛ ಭಾರತ ಮಿಷನ್(ಗ್ರಾ) ಯೋಜನೆಯಡಿ ಜಿಲ್ಲೆಯಾದ್ಯಂತ ನಡೆಯುತ್ತಿರುವ ಸಾರ್ವಜನಿಕ ಸ್ಥಳಗಳಲ್ಲಿ ಅದರಲ್ಲೂ ಮುಖ್ಯವಾಗಿ ರಸ್ತೆ, ಬಸ್ Stand ನದಿಯ ಪಕ್ಕದಲ್ಲಿ ತ್ಯಾಜ್ಯ ಎಸೆಯುವ ಜಾಗ ಗುರುತಿಸುವ (Garbage Black Spot Identification) ಕಾರ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರಕಿದ್ದು, ಜಿಲ್ಲೆಯಲ್ಲಿ ಇದುವರೆಗೆ 150 ಕ್ಕೂ ಹೆಚ್ಚು ಕಡೆಗಳಲ್ಲಿ Black Spot ನಿರ್ಮೂಲನಾ ಮಾಡಲಾಗಿದೆ.

ಈವರೆಗೆ ಒಟ್ಟು 55 ಕಡೆಗಳಲ್ಲಿ Black Spot ಇರುವ ಬಗ್ಗೆ WhatsApp number 9483330564 ಗೆ ಸಾರ್ವಜನಿಕರು ಮಾಹಿತಿ ನೀಡಿದ್ದು, ಇದರಲ್ಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಭಾಗಕ್ಕೆ ಸೇರಿದ 42 'Black Spot ಗಳಿದ್ದು  ಅವುಗಳಲ್ಲಿ 40 ಅನ್ನು ಸಂಪೂರ್ಣ ಸ್ವಚ್ಛಗೊಳಿಸಲಾಗಿದೆ. ಉಳಿದಂತೆ ನಗರ ವ್ಯಾಪ್ತಿಗೆ ಸೇರಿದ Garbage Black Spot ಗಳನ್ನು ಸ್ವಚ್ಛಗೊಳಿಸುವ ಬಗ್ಗೆ ನಗರಸಭೆಗೆ ಮಾಹಿತಿ ನೀಡಲಾಗಿದೆ.

ಇದರೊಂದಿಗೆ ಸುಮಾರು 100 ಕ್ಕೂ ಹೆಚ್ಚು ಕಡೆಗಳಲ್ಲಿ ತ್ಯಾಜ್ಯ ಎಸೆಯುವ Black Spot ಗಳನ್ನು ಗ್ರಾಮ ಪಂಚಾಯತ್ ಗಳು ಸ್ವತಃ ಗುರುತಿಸಿದ್ದು, ಅದನ್ನು ಸ್ವಚ್ಛಗೊಳಿಸಿಲಾಗಿದ್ದು , ಬಹುತೇಕ ಕಡೆಗಳಲ್ಲಿ ಗಿಡ ನೆಡುವುದು, cctv ಅಳವಡಿಕೆ, ಬ್ಯಾನರ್, ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಕೋಟೇಶ್ವರ, ಕೋಡಿಬೆಟ್ಟು, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಸ ಎಸೆಯುವ Black Spot ಗಳನ್ನು ನಿರ್ಮೂಲನಗೊಳಿಸುವ ಜೊತೆಗೆ ಕೆಲವಡೆ ಅದನ್ನು ಹೂದೋಟವಾಗಿ ಪರಿವರ್ತಿಸಿ ಅದಕ್ಕೆ ಕಲಾತ್ಮಕತೆಯ ಸ್ಪರ್ಶ ನೀಡಲಾಗಿದೆ.

ತ್ಯಾಜ್ಯ ಎಸೆಯುವ ಜಾಗವನ್ನು ಗುರುತಿಸಿ ಮಾಹಿತಿ ನೀಡುವ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಅತ್ಯುತ್ತಮ ಸ್ಪಂದನೆ ದೊರೆತಿದ್ದು, ಕೆಲವು ಕಡೆಗಳಲ್ಲಿ ತ್ಯಾಜ್ಯ ಎಸೆದವರಿಗೆ ದಂಡ ವಿಧಿಸುವುದರೊಂದಿಗೆ ಅವರಿಂದಲೇ ಸ್ವಚ್ಛತಾಕಾರ್ಯ ನಡೆಸುವ ಕಾರ್ಯವೂ ಭರದಿಂದ ನಡೆಯುತ್ತಿದೆ. ಸಿದ್ಧಾಪುರ ಗ್ರಾಮ ಪಂಚಾಯತ್ ನಲ್ಲಿ ಸ್ಮಶಾನದ ಬಳಿ ತ್ಯಾಜ್ಯ ಎಸೆದವರನ್ನು ಪತ್ತೆ ಹಚ್ಚಿ 1000 ರೂ ದಂಡ ವಿಧಿಸಲಾಗಿದೆ. ಸಾಣೂರು ಗ್ರಾಮ ಪಂಚಾಯತ್ ನಲ್ಲಿ ರೂ. 2000 , ಬಡಾ ಗ್ರಾಮ ಪಂಚಾಯತ್ ನಲ್ಲಿ ರೂ 2000 ದಂಡ ವಿಧಿಸಲಾಗಿದೆ. ಕೋಡಿಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕಸ ಎಸದವರನ್ನು ಪತ್ತೆ ಹಚ್ಚಿ ಅವರಿಂದಲೇ ಕಸ ಹೆಕ್ಕಿಸುವ ಕಾರ್ಯವೂ ನಡೆದಿದೆ.

ಅಲೆವೂರು ಗ್ರಾಮ ಪಂಚಾಯತ್ ನಲ್ಲಿ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದವರನ್ನು ಪತ್ತೆ ಮಾಡಿ ಅವರಿಂದಲೇ ಕಸ ಹೆಕ್ಕಿಸಿ ರೂ 2000 ದಂಡ ಕೂಡ ವಿಧಿಸಲಾಗಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವವರ ಪೋಟೋ/ ಕಸ ತಂದು ಸುರಿಯುವ ವಾಹನಗಳ ಪೋಟೋ/ ಕಸ ಬಿದ್ದಿರುವ ಜಾಗದ ಪೋಟೋಗಳನ್ನು ಮತ್ತು ಸ್ಥಳದ ಮಾಹಿತಿಯನ್ನು WhatsApp ನಂಬರ್ 9483330564 ಗೆ ಮಾಹಿತಿ ನೀಡಿದ್ದಲ್ಲಿ ಮಾಹಿತಿ ನೀಡಿದವರಿಗೆ ಗ್ರಾಮ ಪಂಚಾಯತ್ ನಿಂದ ಸೂಕ್ತ ಬಹುಮಾನ ನೀಡಲಾಗುವುದು. ಹಾಗೂ ಈ ಮಾಹಿತಿ ನೀಡಿದವರ ಮೊಬೈಲ್ ಸಂಖ್ಯೆ ಮತ್ತು ಹೆಸರನ್ನು ಬಹಿರಂಗ ಪಡಿಸುವುದಿಲ್ಲ. ಜಿಲ್ಲೆಯಲ್ಲಿ Garbage Black Spot ನಿರ್ಮೂಲನಾ ಕಾರ್ಯ ನಿರಂತರ ಪ್ರಕ್ರಿಯೆಯಾಗಿದ್ದು, ಸಾರ್ವಜನಿಕರು ಬ್ಲಾಕ್ ಸ್ಪಾಟ್‌ಗಳ ಬಗ್ಗೆ ವಾಟ್ಸಾಪ್ ಮೂಲಕ ಮಾಹಿತಿ ನೀಡಿ “ನಮ್ಮ ಊರು ಸ್ವಚ್ಛ ಊರು“ ಅಭಿಯಾನವನ್ನು ಮತ್ತಷ್ಟು ಯಶಸ್ವಿಗೊಳಿಸಿ, ಇಡೀ ಜಿಲ್ಲೆಯನ್ನು ತ್ಯಾಜ್ಯ ಮುಕ್ತ ಮಾಡಲು ಸಹಕರಿಸಬೇಕು.

ಡಾ.ನವೀನ್ ಭಟ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಉಡುಪಿ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago