Featured

ಉಡುಪಿ: ಸುಗಮ ಸಂಚಾರಕ್ಕೆ ಪೂರಕ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ನಗರಸಭೆ ಬದ್ಧ : ಪ್ರಭಾಕರ ಪೂಜಾರಿ – vishwanews24

ಉಡುಪಿ: ಸುಗಮ ಸಂಚಾರಕ್ಕೆ ಪೂರಕ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ನಗರಸಭೆ ಬದ್ಧ : ಪ್ರಭಾಕರ ಪೂಜಾರಿ

ಉಡುಪಿ: ನಗರದಲ್ಲಿ ವಾಹನ ದಟ್ಟಣೆಯನ್ನು ನಿಯಂತ್ರಿಸಿ ಸುಗಮ ಸಂಚಾರಕ್ಕೆ ಪೂರಕವಾಗಿ ನಗರದ ಪ್ರಮುಖ ಭಾಗಗಳಲ್ಲಿ ಪೊಲೀಸ್ ಇಲಾಖೆಯ ಮಾರ್ಗಸೂಚಿಯಂತೆ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ನಗರಸಭೆ ಈಗಾಗಲೇ ಕ್ರಮ ಕೈಗೊಂಡಿದ್ದು, ಶೀಘ್ರದಲ್ಲೇ ವೈಜ್ಞಾನಿಕ ರೀತಿಯಲ್ಲಿ ಸಿಗ್ನಲ್ ಅಳವಡಿಕೆಗೆ ನಗರಸಭೆ ಬದ್ಧವಾಗಿದೆ ಎಂದು ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ತಿಳಿಸಿದ್ದಾರೆ.

ಉಡುಪಿ ನಗರದ ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿದರಿಂದ ಸ್ಥಳೀಯರಿಗೆ ಉಂಟಾಗಿರುವ ಸಮಸ್ಯೆ ಬಗ್ಗೆ ಈಗಾಗಲೇ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಸ್ಥಳೀಯ ಮುಖಂಡರೊಂದಿಗೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಬ್ಯಾರಿಕೇಡ್ ತೆರವಿಗೆ ಮನವಿ ಮಾಡಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೂ ಮಾಹಿತಿ ನೀಡಿದ್ದೇವೆ.

ಈಗಾಗಲೇ ತೀರ ಅವೈಜ್ಞಾನಿಕ ರೀತಿಯಲ್ಲಿ ಟ್ರಾಫಿಕ್ ಸಿಗ್ನಲ್ ಕಂಬಗಳನ್ನು ರಸ್ತೆಯ ಬದಿಯಲ್ಲಿ ಹಾಕಿ ಪಾದಚಾರಿಗಳಿಗೆ, ವಾಹನ ಸಂಚಾರಕ್ಕೆ ಸಮಸ್ಯೆ ಎದುರಾಗುತ್ತಿದ್ದು, ಕೇವಲ ಜಾಹೀರಾತಿಗಾಗಿ ಟ್ರಾಫಿಕ್ ಸಿಗ್ನಲ್ ಮಾಡಿದಂತಿದೆ. ಕಲ್ಸಂಕ ಜಂಕ್ಷನ್ ನಲ್ಲಿ ಉಡುಪಿ ಸಿಟಿ ಬಸ್ ನಿಲ್ದಾಣ ಮತ್ತು ಮಣಿಪಾಲ ಭಾಗದ ರಸ್ತೆಗೆ ಮಾತ್ರ ಸಿಗ್ನಲ್ ಅಳವಡಿಕೆ ಮಾಡಿದ್ದು, ರಾಜಾಂಗಣ ಮತ್ತು ಅಂಬಾಗಿಲು ಗುಂಡಿಬೈಲು ರಸ್ತೆಗೆ ಸಿಗ್ನಲ್ ಅಳವಡಿಸಿಲ್ಲ.

ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ಬೃಹತ್ ಗಾತ್ರದ ಟ್ರಾಫಿಕ್ ಕಂಬಗಳನ್ನು ಅಳವಡಿಸಿರುವ ಹಿನ್ನೆಲೆ ತ್ರಿವೇಣಿ ಸರ್ಕಲ್, ಡಯಾನ ಸರ್ಕಲ್ ಸಹಿತ ವಿವಿಧೆಡೆ ವಾಹನ ಸಂಚಾರಕ್ಕೆ ಕೃತಕ ತಡೆ ಸೃಷ್ಟಿಸಿದಂತಾಗಿದೆ. ಈ ಕಂಬಗಳನ್ನು ತೆರವು ಮಾಡುವ ಬಗ್ಗೆಯೂ ನಗರಸಭೆ ವತಿಯಿಂದ ಕ್ರಮ ವಹಿಸಲಾಗುವುದು.

ಈ ಹಿಂದೆ ಹಲವು ಬಾರಿ ನಗರದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಮಾಡಿದ್ದರೂ ಸೂಕ್ತ ನಿರ್ವಹಣೆ ಇಲ್ಲದೆ ತುಂಬಾ ಪರಿಣಾಮಕಾರಿಯಾಗಿ ಬಳಕೆಯಾಗದೆ ಯೋಜನೆ ಫಲಪ್ರದವಾಗದ ಹಿನ್ನೆಲ್ ಈ ಬಾರಿ ಪೊಲೀಸ್ ಇಲಾಖೆಯ ಮಾರ್ಗಸೂಚಿಯಂತೆ ವೈಜ್ಞಾನಿಕ ರೀತಿಯಲ್ಲಿ ಸಿಗ್ನಲ್ ಅಳವಡಿಕೆ ನಗರಸಭೆ ಮುಂದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

17 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

18 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

18 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

19 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

19 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

20 hours ago