ಉಡುಪಿ: ಜಿಲ್ಲೆಯ ಸುಲ್ತಾನ್ ಡೈಮಂಡ್ಸ್ ಗೋಲ್ಡ್ ಜ್ಯುವೆಲ್ಲರಿಯಲ್ಲಿ ಕಳೆದ ತಿಂಗಳು ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಮೂಲದ ದಂಪತಿ ಸಹಿತ ಮೂವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರ ರಾಜ್ಯದ ಸೋಲಾಪುರ ನಯಿ ಝಿಂದಗಿ ನಿವಾಸಿಗಳಾದ ಆಸಿಫ್ ಅಸ್ಫಾಕ್ ಶೇಖ್ (32), ಆತನ ಪತ್ನಿ ನಾಝಿಯಾ (32), ಕುಂಬಾರಿ ಗ್ರಾಮದ ಸೌದಾಗರ್ ದಿಲೀಪ್ ಗೋಂದ್ ಕರ್(35) ಬಂಧಿತ ಆರೋಪಿಗಳು.
ನ.23ರಂದು ಇಬ್ಬರು ಬುರ್ಖಾ ಧರಿಸಿದ ಮಹಿಳೆಯವರು, ಓರ್ವ ವ್ಯಕ್ತಿ ಹಾಗೂ ಮಗುವಿನೊಂದಿಗೆ ಗ್ರಾಹಕರ ಸೋಗಿನಲ್ಲಿ ಉಡುಪಿಯ ಸುಲ್ತಾನ್ ಗೋಲ್ಡ್ ಗೆ ಬಂದು ಒಟ್ಟು 60 ಗ್ರಾಂ ತೂಕದ 3,00,000ರೂ. ಮೌಲ್ಯದ 4 ಚಿನ್ನದ ಬಳೆಗಳನ್ನು ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕುರಿತು ತನಿಖೆ ನಡೆಸಿದ ಉಡುಪಿ ನಗರ ಪೊಲೀಸರು, ಜ್ಯುವೆಲ್ಲರಿ ಆಸುಪಾಸಿನ ಸಿಸಿಟಿವಿ ಪುಟೇಜ್ ಪರಿಶೀಲನೆ ನಡೆಸಿದಾಗ, ಎಂಎಚ್-13- ಎಫ್-4599ನೆ ನಂಬರಿನ ತವೇರಾ ಕಾರು ಕೃತ್ಯಕ್ಕೆ ಬಳಸಿರುವ ಬಗ್ಗೆ ಮಾಹಿತಿ ಕಲೆ ಹಾಕಿದರು. ಹೀಗೆ ಆರೋಪಿಗಳ ಜಾಡು ಹಿಡಿದು ಮಹಾರಾಷ್ಟ್ರ ರಾಜ್ಯದ ಡಿ.18ರಂದು ಸೋಲಾಪುರಕ್ಕೆ ತೆರಳಿ ನಯಿ ಜಿಂದಗಿ ಎಂಬಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳನ್ನು ಡಿ.19ರಂದು ಠಾಣೆಗೆ ಹಾಜರುಪಡಿಸಲಾಗಿತು. ಬಂಧಿತರಿಂದ 1 ವಾಹನ, 1 ಮೊಬೈಲ್ ಹಾಗೂ 2,99,792 ರೂ. ಮೌಲ್ಯದ ನಾಲ್ಕು ಚಿನ್ನದ ಬಳೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಎಲ್ಲ ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಉಡುಪಿ ಎಸ್ಪಿ ಎನ್.ವಿಷ್ಣುವರ್ಧನ್ ಆದೇಶದಂತೆ, ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಡಿವೈಎಸ್ಪಿ ಸುಧಾಕರ ನಾಯ್ಕ್ ಮಾರ್ಗದರ್ಶನದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ ಕುಮಾರ್. ಎಸ್ಸೈ ವಾಸಪ್ಪ ನಾಯ್ಕ್, ಪ್ರೊಬೆಷನರಿ ಎಸ್ಸೈಗಳಾದ ಪ್ರಸಾದ, ಸುಹಾಸ್, ಸಿಬ್ಬಂದಿ ಸತೀಶ್, ಸಂತೋಷ್ ರಾಠೋಡ್, ಗಡ್ಡಯ್ಯ ಹೀರೆಮಠ್, ಮಲ್ಲಯ್ಯ, ನಾಗರತ್ನ, ಬಾಲಕೃಷ್ಣ, ಸುಷ್ಮ, ರಿಯಾಝ್ ಅಹ್ಮದ್, ಲೋಕೇಶ್, ಜೀವನ್ ಕುಮಾರ್, ಆನಂದ ಗಾಣಿಗ, ಹೇಮಂತ್, ಶಿವಕುಮಾರ್ ಹಾಗೂ ಚಾಲಕ ರಾಘವೇಂದ್ರ ಈ ಕಾರ್ಯಾಚರಣೆ ನಡೆಸಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…