ಪಟಾಕಿ ದಾಸ್ತಾನು ಅಂಗಡಿಗೆ ಪೋಲಿಸರ ದಾಳಿ ;
ಉಡುಪಿ : ಸೂಕ್ತ ಪರವಾನಗಿ ಇಲ್ಲದೆ ಸಂಗ್ರಹಿಸಿಟ್ಟಿದ್ದ 40 ಕೆ.ಜಿ. ಪಟಾಕಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿ ನಗರದ ಜಿಟಿಎಸ್ ಶಾಲೆಯ ಎದುರಿನ ವಿದ್ಯಾಜ್ಯೋತಿ ಕಟ್ಟಡದಲ್ಲಿರುವ ಕಬ್ರಾಲ್ ಗನ್ ಹೌಸ್ ನಡೆದಿದೆ.
ಉಡುಪಿ ನಗರ ಪೊಲೀಸ್ ಉಪನಿರೀಕ್ಷಕ ಪುನೀತ್ ಕುಮಾರ್ ಅವರು ನೀಡಿದ ಸುಳಿವಿನ ಮೇರೆಗೆ ಕಬ್ರಾಲ್ ಗನ್ ಹೌಸ್ ಮೇಲೆ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಸೂಕ್ತ ಪರವಾನಗಿ ಇಲ್ಲದೆ ಸಂಗ್ರಹಿಸಿಟ್ಟಿದ್ದ ಪಟಾಕಿಗಳ ದಾಸ್ತಾನು ಪತ್ತೆಯಾಗಿದೆ.
ದಾಳಿ ವೇಳೆ ಸ್ಥಳದಲ್ಲಿದ್ದ ರೊನಾಲ್ಡ್ ಜಿ ಕ್ಯಾಬ್ರಾಲ್ ಅವರನ್ನು ವಿಚಾರಣೆಗೆ ಒಳಪಡಿಸಿದಾಗ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಖರೀದಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಬಳಿಕ ಪೊಲೀಸರು ಆವರಣದಲ್ಲಿದ್ದ ಒಟ್ಟು 40 ಕೆ.ಜಿ. ಪಟಾಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ರೊನಾಲ್ಡ್ ಜಿ. ಕ್ಯಾಬ್ರಾಲ್ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದೆ ಈ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿದ್ದು, ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಅಪಾಯಕಾರಿಯಾಗಿದೆ. ಇನ್ನು ಪರವಾನಗಿ ಇಲ್ಲದಿರುವುದರಿಂದ ಈ ಸ್ಫೋಟಕಗಳ ಶೇಖರಣೆಯು ಕಾನೂನುಬಾಹಿರ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…