ಉಡುಪಿ: ಜಿಲ್ಲಾಡಳಿತ, ಜಿ.ಪಂ. ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಸೆ.28 ಮತ್ತು 29ರಂದು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೆ. 28ರಂದು ಬೆಳಗ್ಗೆ 9ಕ್ಕೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಉದ್ಘಾಟಿಸಲಿದ್ದಾರೆ.
ಸೆ. 28ರಂದು ಬೆಳಗ್ಗೆ 9ಕ್ಕೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಆತ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ವೇಟ್‌ಲಿಫ್ಟಿಂಗ್, ಕುಸ್ತಿ, ತ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಹಾಗೂ ಟೇಕ್ವಾಂಡೋ ಕ್ರೀಡಾಕೂಟ, ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಖೋ-ಖೋ ಹಾಗೂ ನೆಟ್‌ಬಾಲ್ ಕ್ರೀಡಾಕೂಟ, ಚಾಮರಾಜನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಫುಟ್‌ಬಾಲ್ ಹಾಗೂ ಹ್ಯಾಂಡ್‌ಬಾಲ್ ಕ್ರೀಡಾಕೂಟ, ಕೂಡಿಗೆ ಕ್ರೀಡಾಶಾಲೆಯಲ್ಲಿ ಹಾಕಿ, ಯೋಗ ಹಾಗೂ ಜಿಮ್ನಾಸ್ಟಿಕ್ಸ್ ಕ್ರೀಡಾಕೂಟ, ಚಿಕ್ಕಮಗಳೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜೂಡೋ ಹಾಗೂ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 8ಕ್ಕೆ ವಾಲಿಬಾಲ್, ಕಬಡ್ಡಿ, ಟಿ.ಟಿ., ಟೆನ್ನಿಸ್ ಹಾಗೂ ಈಜು ಕ್ರೀಡಾಕೂಟ ಮತ್ತು ಸೆ. 29ರಂದು ಬೆಳಗ್ಗೆ 9ಕ್ಕೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಬಾಸ್ಕೆಟ್‌ಬಾಲ್ ಕ್ರೀಡಾಕೂಟ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…