ಉಡುಪಿ : ಸೆಲೂನ್ ಯುವಕನ ಮೇಲೆ ಗ್ಯಾಂಗ್ ವೊಂದು ಕೊಲೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಷ್ಟು ಬೇಗನೆ ಚಾರ್ಜ್ ಶೀಟ್ ಮಾಡಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಡುಪಿ ಎಸ್‌ಪಿ ಡಾ. ಅರುಣ್ ಕೆ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಚರಣ್ ಅವರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಜೂನ್ 16ರಂದು ದೂರು ನೀಡಿದ್ದಾರೆ. ಈ ದೂರಿನಲ್ಲಿ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ತಮ್ಮ ಅವರ ಪರಿಚಯದ ಸ್ನೇಹಿತರು ತಲವಾರಿನಿಂದ ದಾಳಿ ಮಾಡಲು ಬಂದಿದ್ದಾರೆ. ಬಳಿಕ ತಾನು ಸ್ನೇಹಿತರೊಂದಿಗೆ ದಾಳಿಯಿಂದ ತಪ್ಪಿಸಿಕೊಳ್ಳಲು ಓಡಿಹೋಗಿದ್ದೇನೆ. ಈ ವೇಳೆ ದಾಳಿ ಮಾಡಲು ಬಂದವರು ತನ್ನ ಗಾಡಿಯನ್ನು ಜಖಂ ಮಾಡಿದ್ದಾರೆಂದು ಅವರು ಎಂದು ತಿಳಿಸಿದ್ದಾರೆ ಎಂದರು.
ಈ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಈಗಾಗಲೇ ಈ ಕೃತ್ಯದಲ್ಲಿ ಭಾಗಿಯಾಗಿರುವ ಪ್ರವೀಣ್, ಅಭಿಷೇಕ್ ಮತ್ತು ದೇಶ್ ರಾಜ್ ಅವರನ್ನು ಬಂಧಿಸಲಾಗಿದೆ. ಹಾಗೂ ಪ್ರಕರಣದಲ್ಲಿ ಭಾಗಿಯಾಗಿರುವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಿಚಾರಣೆ ನಡೆಸಿ ಕಾನೂನಿನಂತೆ ಕ್ರಮ ಜರುಗಿಸಲಾಗಿದೆ ಎಂದು ಮಾಹಿತಿ ನೀಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…