ಉಡುಪಿ: ಸೆಲೂನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನನ್ನು ತಲವಾರು ಮೂಲಕ ಕೊಲೆಯತ್ನ ನಡೆಸಲು ಯತ್ನಿಸಿದ ಘಟನೆ ನಡೆದಿದೆ.
ಉಡುಪಿಯ ಪುತ್ತೂರಿನ ಸೆಲೂನ್‌ವೊಂದರಲ್ಲಿ ಕೆಲಸ ನಿರ್ವಹಿಸಿಕೊಂಡಿರುವ ಚರಣ್ ಯು. (18) ಹಲ್ಲೆಗೊಳಗಾದವರು. ಜೂ. 15ರಂದು ಸೆಲೂನ್‌ನಲ್ಲಿ ಅವರು ಕೆಲಸ ಮಾಡಿಕೊಂಡಿದ್ದ ವೇಳೆ ಅಭಿ ಕಟಪಾಡಿ ಅವರು ಕರೆ ಮಾಡಿ ಶಬರಿ ಎಂಬವನ ಬಗ್ಗೆ ಮಾತನಾಡಬೇಕಾಗಿದೆ.
ತತ್‌ಕ್ಷಣ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಬರುವಂತೆ ತಿಳಿಸಿದ್ದಾನೆ. ಅದರಂತೆ ಚರಣ್ ಅವರು ಸುಜನ್ ಎಂಬಾತನ ಬೈಕ್‌ನಲ್ಲಿ ಹೋಗಿದ್ದರು. ಇವರ ಗೆಳೆಯರಾದ ನಾಗರಾಜ್, ಕಾರ್ತಿಕ್, ರಂಜು ಅವರು ಮತ್ತೂಂದು ಸ್ಕೂಟಿಯಲ್ಲಿ ಹೊರಟು ಬಿರಿಯಾನಿ ಪಾಯಿಂಟ್ ಗಿಂತ ಸ್ವಲ್ಪ ಮುಂದೆ ಗೂಡಂಗಡಿ ಬಳಿಗೆ ತೆರಳಿದ್ದರು. ಈ ವೇಳೆ ಪ್ರವೀಣ, ಅಭಿ ಕಟಪಾಡಿ, ದೇಶರಾಜ್, ಶಬರಿ ಮತ್ತು ಪರಿಚಯವಿಲ್ಲದ ಇತರ ಇಬ್ಬರು ಅಲ್ಲಿಯೇ ನಿಂತಿದ್ದ ರಿûಾಕ್ಕೆ ಒರಗಿಕೊಂಡು, ಕೈಯಲ್ಲಿ ತಲವಾರು ಹಿಡಿದುಕೊಂಡು ನಿಂತಿದ್ದರು.
ಚರಣ್ ಮತ್ತು ಆತನ ಗೆಳೆಯರನ್ನು ನೋಡಿದ ತತ್‌ಕ್ಷಣ ಕೊಲ್ಲುವ ಉದ್ದೇಶದಿಂದ ಎದುರು ಬಂದು ತಲವಾರು ಬೀಸಿದ್ದು, ಬೈಕ್ ಮತ್ತು ಸ್ಕೂಟಿಯನ್ನು ಅಲ್ಲಿಯೇ ಬಿಟ್ಟು ಅವರಿಂದ ತಪ್ಪಿಸಿಕೊಂಡು ಓಡಿ ಹೋಗುವಾಗ ಬಿಯರ್ ಬಾಟಲಿಗಳನ್ನು ಬಿಸಾಡಿದ್ದಾರೆ. ಅನಂತರ ರಾತ್ರಿ 10 ಗಂಟೆಗೆ ಚರಣ್ ಹಾಗೂ ಸ್ನೇಹಿತರು ಪುನಃ ತಾವು ಬಿಟ್ಟು ಹೋಗಿದ್ದ ಬೈಕ್ ಹಾಗೂ ಸ್ಕೂಟಿಯನ್ನು ಕೊಂಡು ಹೋಗಲು ಹೋದಾಗ ಆರೋಪಿಗಳು ಇವರ ದ್ವಿಚಕ್ರ ವಾಹನವನ್ನು ಹಾನಿಗೊಳಿಸಿ 25 ಸಾವಿರ ರೂ. ನಷ್ಟ ಉಂಟು ಮಾಡಿದ್ದಾರೆ.
ಸುಜನ್‌ನ ಸ್ಕೂಟಿಯನ್ನು ದೂಡಿ ಹಾಕಿದ್ದಾರೆ. ಶಬರಿ ಎಂಬವನಿಗೆ ಚರಣ್ ನಿಂದಿಸಿದ ಕಾರಣ ಮುಂದಿಟ್ಟುಕೊಂಡು, ಹಳೇ ದ್ವೇಷದಿಂದ ಪ್ರವೀಣ್ ಮತ್ತು ಇತರ 5 ಮಂದಿ ಸೇರಿ ಕೊಲ್ಲುವ ಉದ್ದೇಶದಿಂದ ತಲವಾರಿನಿಂದ ಹಲ್ಲೆ ನಡೆಸಿದ್ದಾರೆ ಎಂದು ನಗರ ಠಾಣೆಯಲ್ಲಿ ಚರಣ್ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…