Featured

ಉಡುಪಿ: ಸೆಲೂನ್‌ ಸಿಬಂದಿಯ ಕೊಲೆ ಯತ್ನ ; ತಲವಾರಿನಿಂದ ಹಲ್ಲೆ – vishwanews24

ಉಡುಪಿ: ಸೆಲೂನ್‌ ಸಿಬಂದಿಯ ಕೊಲೆ ಯತ್ನ ; ತಲವಾರಿನಿಂದ ಹಲ್ಲೆ

ಉಡುಪಿ: ಸೆಲೂನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನನ್ನು ತಲವಾರು ಮೂಲಕ ಕೊಲೆಯತ್ನ ನಡೆಸಲು ಯತ್ನಿಸಿದ ಘಟನೆ ನಡೆದಿದೆ.

ಉಡುಪಿಯ ಪುತ್ತೂರಿನ ಸೆಲೂನ್‌ವೊಂದರಲ್ಲಿ ಕೆಲಸ ನಿರ್ವಹಿಸಿಕೊಂಡಿರುವ ಚರಣ್‌ ಯು. (18) ಹಲ್ಲೆಗೊಳಗಾದವರು. ಜೂ. 15ರಂದು ಸೆಲೂನ್‌ನಲ್ಲಿ ಅವರು ಕೆಲಸ ಮಾಡಿಕೊಂಡಿದ್ದ ವೇಳೆ ಅಭಿ ಕಟಪಾಡಿ ಅವರು ಕರೆ ಮಾಡಿ ಶಬರಿ ಎಂಬವನ ಬಗ್ಗೆ ಮಾತನಾಡಬೇಕಾಗಿದೆ.

ತತ್‌ಕ್ಷಣ ಪುತ್ತೂರಿನ ಬಿರಿಯಾನಿ ಪಾಯಿಂಟ್‌ ಬಳಿ ಬರುವಂತೆ ತಿಳಿಸಿದ್ದಾನೆ. ಅದರಂತೆ ಚರಣ್‌ ಅವರು ಸುಜನ್‌ ಎಂಬಾತನ ಬೈಕ್‌ನಲ್ಲಿ ಹೋಗಿದ್ದರು. ಇವರ ಗೆಳೆಯರಾದ ನಾಗರಾಜ್‌, ಕಾರ್ತಿಕ್‌, ರಂಜು ಅವರು ಮತ್ತೂಂದು ಸ್ಕೂಟಿಯಲ್ಲಿ ಹೊರಟು ಬಿರಿಯಾನಿ ಪಾಯಿಂಟ್‌ ಗಿಂತ ಸ್ವಲ್ಪ ಮುಂದೆ ಗೂಡಂಗಡಿ ಬಳಿಗೆ ತೆರಳಿದ್ದರು. ಈ ವೇಳೆ ಪ್ರವೀಣ, ಅಭಿ ಕಟಪಾಡಿ, ದೇಶರಾಜ್‌, ಶಬರಿ ಮತ್ತು ಪರಿಚಯವಿಲ್ಲದ ಇತರ ಇಬ್ಬರು ಅಲ್ಲಿಯೇ ನಿಂತಿದ್ದ ರಿûಾಕ್ಕೆ ಒರಗಿಕೊಂಡು, ಕೈಯಲ್ಲಿ ತಲವಾರು ಹಿಡಿದುಕೊಂಡು ನಿಂತಿದ್ದರು.

ಚರಣ್‌ ಮತ್ತು ಆತನ ಗೆಳೆಯರನ್ನು ನೋಡಿದ ತತ್‌ಕ್ಷಣ ಕೊಲ್ಲುವ ಉದ್ದೇಶದಿಂದ ಎದುರು ಬಂದು ತಲವಾರು ಬೀಸಿದ್ದು, ಬೈಕ್‌ ಮತ್ತು ಸ್ಕೂಟಿಯನ್ನು ಅಲ್ಲಿಯೇ ಬಿಟ್ಟು ಅವರಿಂದ ತಪ್ಪಿಸಿಕೊಂಡು ಓಡಿ ಹೋಗುವಾಗ ಬಿಯರ್‌ ಬಾಟಲಿಗಳನ್ನು ಬಿಸಾಡಿದ್ದಾರೆ. ಅನಂತರ ರಾತ್ರಿ 10 ಗಂಟೆಗೆ ಚರಣ್‌ ಹಾಗೂ ಸ್ನೇಹಿತರು ಪುನಃ ತಾವು ಬಿಟ್ಟು ಹೋಗಿದ್ದ ಬೈಕ್‌ ಹಾಗೂ ಸ್ಕೂಟಿಯನ್ನು ಕೊಂಡು ಹೋಗಲು ಹೋದಾಗ ಆರೋಪಿಗಳು ಇವರ ದ್ವಿಚಕ್ರ ವಾಹನವನ್ನು ಹಾನಿಗೊಳಿಸಿ 25 ಸಾವಿರ ರೂ. ನಷ್ಟ ಉಂಟು ಮಾಡಿದ್ದಾರೆ.

ಸುಜನ್‌ನ ಸ್ಕೂಟಿಯನ್ನು ದೂಡಿ ಹಾಕಿದ್ದಾರೆ. ಶಬರಿ ಎಂಬವನಿಗೆ ಚರಣ್‌ ನಿಂದಿಸಿದ ಕಾರಣ ಮುಂದಿಟ್ಟುಕೊಂಡು, ಹಳೇ ದ್ವೇಷದಿಂದ ಪ್ರವೀಣ್‌ ಮತ್ತು ಇತರ 5 ಮಂದಿ ಸೇರಿ ಕೊಲ್ಲುವ ಉದ್ದೇಶದಿಂದ ತಲವಾರಿನಿಂದ ಹಲ್ಲೆ ನಡೆಸಿದ್ದಾರೆ ಎಂದು ನಗರ ಠಾಣೆಯಲ್ಲಿ ಚರಣ್‌ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

3 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

4 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

4 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

4 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

4 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

6 hours ago