ಉಡುಪಿ :ಸೆ. 10 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ – Vishwanews24

Featured, ಉಡುಪಿ

ಉಡುಪಿ :ಸೆ. 10 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

ಉಡುಪಿ :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಲ್ಲವರ ಸೇವಾ ಸಂಘ ಬನ್ನಂಜೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯು ಸೆಪ್ಟಂಬರ್ 10 ರಂದು ಬೆಳಗ್ಗೆ 10.30 ಕ್ಕೆ ನಗರದ ಬನ್ನಂಜೆ ಶ್ರೀ ನಾರಾಯಣ ಗುರು ಮಂದಿರದ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರುಗಳಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ.ಆರ್.ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಆಯನೂರು ಮಂಜುನಾಥ, ಎಸ್.ಎಲ್.ಭೋಜೆಗೌಡ, ಡಾ||ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟಿçಕಲ್ ಇಂಡಸ್ಟಿçÃಸ್ ಲಿಮಿಟೆಡ್
ಅಧ್ಯಕ್ಷ ಕೆ ಉದಯ್ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಬನ್ನಂಜೆ ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ಆನಂದ ಪೂಜಾರಿ ಕಿದಿಯೂರು ಹಾಗೂ ಮತ್ತಿತರರು ಭಾಗವಹಿಸಲಿದ್ದು,

ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ನಳಿನಾದೇವಿ ಎಂ ಆರ್ ಉಪನ್ಯಾಸ ನೀಡಲಿದ್ದಾರೆ.

ಮಂಡ್ಯ: ಚಿನ್ನದ ವ್ಯಾಪಾರಿ ‘ಬಿಜೆಪಿ ಮುಖಂಡ ಜಗನ್ನಾಥ ಶೆಟ್ಟಿ ಹನಿಟ್ರ್ಯಾಪ್ ಪ್ರಕರಣ’ಕ್ಕೆ ಬಿಗ್ ಟ್ವಿಸ್ಟ್ – Vishwanews24

 

Leave a Reply